ETV Bharat / state

ಕಾಂಗ್ರೆಸ್ ಮೊದಲ ಪಟ್ಟಿ ವಿಳಂಬ : ಮಾರ್ಚ್ ಮೊದಲ ವಾರ ಬಿಡುಗಡೆ ಸಾಧ್ಯತೆ - ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ

ಕಾಂಗ್ರೆಸ್​ 130 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ - ಮಾರ್ಚ್​ ಮೊದಲ ವಾರದಲ್ಲಿ ಘೋಷಣೆ ಕಾಂಗ್ರೆಸ್​ ಹೈಕಮಾಂಡ್​ನಿಂದ ಬಿಡುಗಡೆ ಸಾಧ್ಯತೆ

congress-candidates-first-list-will-be-announced-in-first-march-week
ಕಾಂಗ್ರೆಸ್ ಮೊದಲ ಪಟ್ಟಿ ವಿಳಂಬ : ಮಾರ್ಚ್ ಮೊದಲ ವಾರ ಬಿಡುಗಡೆ ಸಾಧ್ಯತೆ!
author img

By

Published : Feb 2, 2023, 1:58 PM IST

ಬೆಂಗಳೂರು : ಸಂಕ್ರಾಂತಿ ವೇಳೆಗೆ ಬಿಡುಗಡೆಯಾಗಬೇಕಿದ್ದ ಕಾಂಗ್ರೆಸ್ ಪಕ್ಷದ ವಿಧಾನಸಭೆ ಚುನಾವಣೆ ಅಭ್ಯರ್ಥಿ ಪಟ್ಟಿ ವಿಳಂಬವಾಗಿದ್ದು, ಇನ್ನು ಕೆಲ ದಿನಗಳಲ್ಲಿಯೇ ಪ್ರಕಟವಾಗಲಿದೆ ಎಂಬ ಮಾತು ಕೇಳಿಬರುತ್ತಿದೆ. ರಾಹುಲ್ ಗಾಂಧಿ ಕೈಗೊಂಡಿದ್ದ ಭಾರತ್ ಜೋಡೊ ಯಾತ್ರೆ ಹಿನ್ನೆಲೆ ಅವರನ್ನು ಭೇಟಿಯಾಗಿ ಹೈಕಮಾಂಡ್ ನಾಯಕರ ಜತೆ ಚರ್ಚಿಸಿ ಪಟ್ಟಿ ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ಇದರಿಂದ ರಾಜ್ಯ ಕಾಂಗ್ರೆಸ್ ನಾಯಕರು ಮೊದಲ ಹಂತದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದ್ದ 130 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನು ತಮ್ಮಲ್ಲೇ ಇಟ್ಟುಕೊಂಡಿದ್ದಾರೆ.

ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ವಿಳಂಬ : ಇನ್ನೊಂದೆಡೆ ಬಸ್ ಯಾತ್ರೆ, ಮುಂದಿನವಾರ ಆರಂಭವಾಗುವ ವಿಧಾನ ಮಂಡಲ ಜಂಟಿ ಅಧಿವೇಶನ, ನಂತರ ಬಜೆಟ್, ಅದರ ಮೇಲಿನ ಚರ್ಚೆ ಇತ್ಯಾದಿಗಳು ಇರುವ ಹಿನ್ನೆಲೆ ಫೆಬ್ರವರಿ ತಿಂಗಳ ಮೂರನೇ ವಾರದ ಕೊನೆಯವರೆಗೂ ರಾಜ್ಯ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡಲಿದ್ದಾರೆ. ಈ ಸಂದರ್ಭದಲ್ಲಿ ಪಟ್ಟಿ ಹಿಡಿದು ಹೈಕಮಾಂಡ್ ನಾಯಕರ ಭೇಟಿಗೆ ತೆರಳುವ ಸಾಧ್ಯತೆ ಬಹಳಷ್ಟು ಕಡಿಮೆ ಎನ್ನಲಾಗಿದೆ.

ಇನ್ನು ಮುಂಬರುವ ಮೇ ತಿಂಗಳಲ್ಲೇ ಚುನಾವಣೆ ನಡೆಯುವ ಹಿನ್ನೆಲೆ ಏಪ್ರಿಲ್ ತಿಂಗಳಲ್ಲಿ ಚುನಾವಣಾ ಆಯೋಗ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಅಧಿಕಾರರೂಢ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ತಾನು ಗದ್ದುಗೆ ಏರುವ ಪ್ರಯತ್ನದಲ್ಲಿರುವ ಕಾಂಗ್ರೆಸ್ ಆ ಅವಕಾಶ ಅಷ್ಟು ಸಲೀಸಲ್ಲ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಕೇಂದ್ರ ಬಿಜೆಪಿ ಸರ್ಕಾರ ಈ ಸಾರಿ ಚುನಾವಣಾ ಜವಾಬ್ದಾರಿಯನ್ನು ಹಿರಿಯ ಆರ್​ಎಸ್​ಎಸ್​ ನಾಯಕ ಬಿ.ಎಲ್. ಸಂತೋಷ್ ಅವರಿಗೆ ನೀಡಿದೆ. ಕಾಂಗ್ರೆಸ್ ನಲ್ಲಿ ಸಹ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ತಮ್ಮದೆ ಆದ ಪ್ರಭಾವ ಬೀರುವ ಸಾಧ್ಯತೆ ಹೆಚ್ಚಿದೆ. ಇದರ ಜತೆ ಜತೆಗೆ ರಾಜ್ಯದಲ್ಲಿಯೇ ಡಿಕೆಶಿ ಹಾಗೂ ಸಿದ್ದರಾಮಯ್ಯ ಪ್ರತ್ಯೇಕ ಬಣಗಳಿವೆ. ಹೀಗಾಗಿ ಬಂಡಾಯದ ಸಾಧ್ಯತೆ ಹೆಚ್ಚಿದೆ. ಇದನ್ನು ಶಮನಗೊಳಿಸುವ ನಿಟ್ಟಿನಲ್ಲಿ ಬೇಗನೇ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸಿದ್ಧತೆ ಕೈ ನಾಯಕರು ಮಾಡಿದ್ದರು. ಆದರೆ ಅದಕ್ಕೆ ಇನ್ನೂ ಕಾಲ ಕೂಡಿ ಬಂದಿಲ್ಲ.

ಕಾಂಗ್ರೆಸ್​ ಚುನಾವಣಾ ಸಮಿತಿ ಸಭೆಯಲ್ಲಿ ಅಂತಿಮ ನಿರ್ಧಾರ : ಇಂದು ನಗರದ ಹೊರವಲಯದಲ್ಲಿ ನಡೆಯುವ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ 120ರಿಂದ 130 ಕ್ಷೇತ್ರಗಳಿಗೆ ಪಕ್ಷದ ಸಂಭವನೀಯ ಅಭ್ಯರ್ಥಿಗಳನ್ನು ಗುರುತಿಸಿ, ಪಟ್ಟಿ ಸಿದ್ಧಪಡಿಸಲು ರಾಜ್ಯ ಕಾಂಗ್ರೆಸ್ ನಿರ್ಧರಿಸಲಿದೆ. ಅಭ್ಯರ್ಥಿ ಆಯ್ಕೆಗೆ ಮುನ್ನ ವಿಧಾನಸಭಾ ಕ್ಷೇತ್ರಗಳ ಸ್ಥಿತಿಗತಿ, ಯಾರಿಗೆ ಟಿಕೆಟ್ ನೀಡಿದರೆ ಗೆಲ್ಲುವ ಸಾಧ್ಯತೆ ಇದೆ, ಅಭ್ಯರ್ಥಿ ಆಕಾಂಕ್ಷಿಗಳ ಸಾಮರ್ಥ್ಯ ಹಾಗೂ ಕೊರತೆ ಏನೇನು ಎಂಬ ಬಗ್ಗೆ ಚರ್ಚೆ ನಡೆಯಲಿದೆ. ಹಾಲಿ ಶಾಸಕರ ಪೈಕಿ ಸ್ಪರ್ಧೆಯಿಂದ ಹಿಂದೆ ಸರಿಯಲು ಬಯಸಿದವರನ್ನು ಹೊರತುಪಡಿಸಿ, ಉಳಿದವರಿಗೆ ಟಿಕೆಟ್ ನೀಡಲು ಈಗಾಗಲೇ ತೀರ್ಮಾನಿಸಲಾಗಿದೆ.ಉಳಿದಂತೆ, ಕಡಿಮೆ ಪೈಪೋಟಿ ಇರುವ 30ರಿಂದ 40 ಕ್ಷೇತ್ರಗಳಿಗೆ ಅಭ್ಯರ್ಥಿಯ ಹೆಸರನ್ನು ಈ ಮೂವರೂ ನಾಯಕರು ಅಳೆದು ತೂಗಿ ಅಂತಿಮಗೊಳಿಸಲಿದ್ದಾರೆ. ನಂತರ ಕೇಂದ್ರ ಚುನಾವಣಾ ಸಮಿತಿ ಪಟ್ಟಿಯನ್ನು ಮರುಪರಿಶೀಲಿಸಲಿದೆ.

ಕಾಂಗ್ರೆಸ್ ನಾಯಕರು ಸಾಧ್ಯವಾದಷ್ಟು ಬಂಡಾಯ ಉಂಟಾಗದಂತೆ ಎಚ್ಚರಿಕೆ ವಹಿಸಿ ಅಭ್ಯರ್ಥಿ ಆಯ್ಕೆ ಮಾಡಬೇಕಿದೆ. ಎಲ್ಲಾ ನಾಯಕರೂ ಕುಳಿತು ಚರ್ಚಿಸಿ ಒಮ್ಮತದ ನಿರ್ಧಾರ ಕೈಗೊಳ್ಳಬೇಕಿದೆ. ಮುಂಬರುವ ದಿನಗಳಲ್ಲಿ ಬಸ್ ಯಾತ್ರೆ ಮಧ್ಯೆ ಇಲ್ಲವೇ ಅಧಿವೇಶನ ಸಂದರ್ಭದಲ್ಲಿಯೇ ಒಮ್ಮೆ ಹಿರಿಯ ನಾಯಕರು ಸಭೆ ಸೇರಿ ಚರ್ಚಿಸಲು ಸಹ ತೀರ್ಮಾನಿಸಿದ್ದಾರೆ. ಎಲ್ಲಕ್ಕೂ ಕಾಲ ಕೂಡಿ ಬಂದರೆ ಮಾರ್ಚ್ ಮೊದಲ ವಾರ ಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಇದೆ.

ಪಟ್ಟಿ ಶೀಘ್ರ ಬಿಡುಗಡೆ : ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಶೀಘ್ರವೇ ಹೊರಬರಲಿದೆ. ಈ ವಿಚಾರದಲ್ಲಿ ಅನುಮಾನವೇ ಬೇಡ. ರಾಜ್ಯ ನಾಯಕರು ಪಟ್ಟಿ ಅಂತಿಮಗೊಳಿಸಿದ್ದಾರೆ. ಹೈಕಮಾಂಡ್ ನಾಯಕರ ಜತೆ ಚರ್ಚಿಸಿ ಪಟ್ಟಿ ಅಲ್ಲಿಂದಲೇ ಬಿಡುಗಡೆ ಮಾಡಿಸಲಾಗುತ್ತಿದೆ. ಭಾರತ್ ಜೋಡೊ ಯಾತ್ರೆ ಸಮಾರೋಪ ಹತ್ತಿರವಾಗುತ್ತಿದ್ದ ಹಿನ್ನೆಲೆ ನಮ್ಮ ರಾಷ್ಟ್ರೀಯ ನಾಯಕರು ಭೇಟಿಗೆ ಸಿಕ್ಕಿರಲಿಲ್ಲ. ಇದೀಗ ಯಾತ್ರೆ ಮುಗಿದಿದೆ. ರಾಷ್ಟ್ರೀಯ ನಾಯಕರು ಸಮ್ಮತಿ ನೀಡುತ್ತಿದ್ದಂತೆ ರಾಜ್ಯ ನಾಯಕರು ದಿಲ್ಲಿಗೆ ತೆರಳಿ ಪಟ್ಟಿ ಅಂತಿಮಗೊಳಿಸಲಿದ್ದಾರೆ. ಆದಷ್ಟು ಬೇಗ ಪಟ್ಟಿ ಬಿಡುಗಡೆಯಾಗುವ ವಿಶ್ವಾಸ ಇದೆ ಎಂದು ಮಾಜಿ ಸಚಿವರೊಬ್ಬರು ಈಟಿವಿ ಭಾರತ್ ಗೆ ತಿಳಿಸಿದ್ದಾರೆ.

ಇದನ್ನೂ ಓದಿ : ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ನಿರ್ಮಾಪಕ ಸಂದೇಶ್ ನಾಗರಾಜ್ ರಾಜೀನಾಮೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.