ETV Bharat / state

'ಸಿದ್ದು ನಿಜ ಕನಸುಗಳು' ಪುಸ್ತಕ ಬಿಡುಗಡೆಗೆ ತಡೆ ಕೋರಿ ಪೊಲೀಸರಿಗೆ ದೂರು - ಕಾಂಗ್ರೆಸ್ ವಕ್ತಾರ ಸೂರ್ಯ ಮುಕುಂದರಾಜ್

'ಸಿದ್ದು ನಿಜ ಕನಸುಗಳು' ಎಂಬ ಶೀರ್ಷಿಕೆಯಡಿ ಬಿಜೆಪಿ ಇಂದು ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆಗೆ ಸಿದ್ಧತೆ ನಡೆಸಿದ್ದು, ಕಾರ್ಯಕ್ರಮವನ್ನು ತಡೆಯುವಂತೆ ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಗೆ ಕಾಂಗ್ರೆಸ್ ವಕ್ತಾರರೊಬ್ಬರು ದೂರು ನೀಡಿದ್ದಾರೆ.

Surya Mukundaraj
ಸೂರ್ಯ ಮುಕುಂದರಾಜ್
author img

By

Published : Jan 9, 2023, 9:54 AM IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ದುರುದ್ದೇಶದ ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ಸೂರ್ಯ ಮುಕುಂದರಾಜ್ ಆರೋಪಿಸಿದ್ದಾರೆ. ಕಾಂಗ್ರೆಸ್‌ನ ಕಾನೂನು ಮಾನವ ಹಕ್ಕುಗಳು ಹಾಗೂ ಮಾಹಿತಿ ಹಕ್ಕು ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿರುವ ಇವರು, ಬೆಂಗಳೂರಿನ ಎಸ್​​ಜೆ ಪಾರ್ಕ್ ಪೊಲೀಸ್ ಠಾಣಾಧಿಕಾರಿಗೆ ಈ ಸಂಬಂಧ ದೂರು ಸಲ್ಲಿಸಿದ್ದಾರೆ. ಇವರು ನೀಡಿದ ದೂರಿನ ಸಾರಾಂಶ ಹೀಗಿದೆ..

ದೂರಿನಲ್ಲಿ ಏನಿದೆ?: 'ಇಂದು ಮಧ್ಯಾಹ್ನ 3 ಗಂಟೆಗೆ ತಮ್ಮ ಠಾಣಾ ವ್ಯಾಪ್ತಿಯಲ್ಲಿ ಬರುವ ಪುರಭವನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರೂಪಗೊಳಿಸಿದ ಭಾವಚಿತ್ರವನ್ನು ಬಳಸಿ 'ಸಿದ್ದು ನಿಜ ಕನಸುಗಳು' ಎಂಬ ಶೀರ್ಷಿಕೆಯಡಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸಚಿವರಾದ ಅಶ್ವತ್ಥ್​ ನಾರಾಯಣ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಪಠ್ಯ ಪುಸ್ತಕ ಪುನರ್ ಪರಿಶೀಲನಾ ಸಮಿತಿಯ ಅಧ್ಯಕ್ಷರಾಗಿದ್ದ ವಿವಾದಾತ್ಮಕ ವ್ಯಕ್ತಿ ರೋಹಿತ್ ಚಕ್ರತೀರ್ಥ ಹಾಗೂ ಇತರ ವ್ಯಕ್ತಿಗಳು ಕಾರ್ಯಕ್ರಮದ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿನ ಪುಸ್ತಕದ ಮುಖಪುಟ ಪ್ರತಿಪಕ್ಷ ನಾಯಕರ ಕುರಿತು ಅವಹೇಳನಕಾರಿ, ಕಪೋಲಕಲ್ಪಿತ, ಪ್ರಚೋದನಕಾರಿ ಲೇಖನಗಳನ್ನು ಒಳಗೊಂಡಿರುವುದು ಸ್ಪಷ್ಟವಾಗಿದೆ' ಎಂದು ಉಲ್ಲೇಖಿಸಿದ್ದಾರೆ.

ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೃತ್ಯ: ಆಹ್ವಾನ ಪತ್ರಿಕೆಯಲ್ಲಿ ಇರುವ ಅತಿಥಿಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ವಿಚಾರಗಳನ್ನು ಮತ್ತು ಒಂದು ಸಮುದಾಯದ ವಿರುದ್ಧ ಪ್ರಚೋದನೆ ನೀಡುವ ಬರಹಗಳನ್ನು ಪ್ರಕಟಿಸುವ ಮೂಲಕ ಅನೇಕ ವಿವಾದಗಳನ್ನು ಸೃಷ್ಟಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೃತ್ಯಗಳನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದಾರೆ. ಸಿದ್ದರಾಮಯ್ಯ ಅವರ ಭಾವಚಿತ್ರ ವಿರೂಪಗೊಳಿಸಿ ಸಾಮರಸ್ಯ ಕದಡುವ ಹುನ್ನಾರ ಹೊಂದಿದ್ದು, ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುತ್ತದೆ. ಆದ್ದರಿಂದ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದರೆ ರದ್ದು ಮಾಡಬೇಕು ಮತ್ತು ಆಯೋಜಕರಿಗೆ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಕಾರ್ಯಕ್ರಮವನ್ನು ರದ್ದು ಮಾಡಲು ಸೂಚನೆ ನೀಡಿ ಕ್ರಮ ಜರುಗಿಸಬೇಕೆಂದು ಕೋರುವುದಾಗಿ ಸೂರ್ಯ ಮುಕುಂದರಾಜ್ ಒತ್ತಾಯಿಸಿದ್ದಾರೆ.

ಇಂದು ಬೆಂಗಳೂರಿನ ಪುರಭವನದಲ್ಲಿ ಸಿದ್ದು ನಿಜ ಕನಸು ಪುಸ್ತಕವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್​ ನಾರಾಯಣ ಬಿಡುಗಡೆ ಮಾಡಲಿದ್ದಾರೆ. ಸಿದ್ದರಾಮಯ್ಯ ಆಡಳಿತ ಅವಧಿಯಲ್ಲಿ ಹಿಂದೂ ಸಮಾಜವನ್ನು ನಡೆಸಿಕೊಂಡ ರೀತಿಯನ್ನೇ ಹೈಲೈಟ್ ಮಾಡಿ ಪುಸ್ತಕ ಬರೆದಿರುವ ನಿರೀಕ್ಷೆ ಇದೆ. ಈ ಪುಸ್ತಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಠಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

  • "ಸಿದ್ದು ನಿಜಕನಸುಗಳು" ಎಂಬ ಪುಸ್ತಕದ ಮೂಲಕ ಹಲವು ಸೂಕ್ಷ್ಮ ವಿಷಯಗಳನ್ನು ಬಹಿರಂಗಪಡಿಸುವ ಜತೆ ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕಿ ಕೊಡುವ ಪ್ರಯತ್ನವನ್ನು ಶ್ಲಾಘಿಸುತ್ತೇನೆ.

    ಈ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ. ನೀವೂ ಬನ್ನಿ. pic.twitter.com/GRnvlmqGrp

    — Dr. Ashwathnarayan C. N. (@drashwathcn) January 8, 2023 " class="align-text-top noRightClick twitterSection" data=" ">

ಅಶ್ವತ್ಥ್​ ನಾರಾಯಣ ಟ್ವೀಟ್: 'ಸಿದ್ದು ನಿಜಕನಸುಗಳು' ಎಂಬ ಪುಸ್ತಕದ ಮೂಲಕ ಹಲವು ಸೂಕ್ಷ್ಮ ವಿಷಯಗಳನ್ನು ಬಹಿರಂಗಪಡಿಸುವ ಜೊತೆಗೆ ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕಿಕೊಡುವ ಪ್ರಯತ್ನವನ್ನು ಶ್ಲಾಘಿಸುತ್ತೇನೆ. ಈ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ. ನೀವೂ ಬನ್ನಿ ಎಂದು ಸಚಿವ ಅಶ್ವತ್ಥ್​ ನಾರಾಯಣ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 'ನಾನು ಹಿಂದೂ ರಾಮಯ್ಯ' ಪುಸ್ತಕ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.