ETV Bharat / state

ವಿಧಾನ ಮಂಡಲ ಅಧಿವೇಶನ ಹಿನ್ನೆಲೆ ಶಾಸಕಾಂಗ ಸಭೆ ಕರೆದ ಕಾಂಗ್ರೆಸ್ - ವಿಧಾನಸಭೆ ಕಾರ್ಯದರ್ಶಿ ಈ ತುಕಾರಾಂ

ಸೆಪ್ಟೆಂಬರ್​ 12 ರಿಂದ 23 ರವರೆಗೆ 15ನೇ ವಿಧಾನಸಭೆಯ 3ನೇ ಅಧಿವೇಶನ ನಡೆಯಲಿದೆ.

ಕಾಂಗ್ರೆಸ್
ಕಾಂಗ್ರೆಸ್
author img

By

Published : Sep 9, 2022, 9:47 PM IST

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಮಂಗಳವಾರ ಕರೆಯಲಾಗಿದೆ. ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆ ಕೈಗೊಳ್ಳಬೇಕಾಗಿರುವ ಚರ್ಚೆಯ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲು ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ಸೆ. 12 ರಿಂದ 23 ರವರೆಗೆ 15ನೇ ವಿಧಾನಸಭೆಯ 3ನೇ ಅಧಿವೇಶನ ನಡೆಯಲಿದೆ. ಈ ಸಂದರ್ಭ ಚರ್ಚೆಗೆ ಕೈಗೆತ್ತಿಕೊಳ್ಳಬಹುದಾದ ವಿಚಾರಗಳ ಕುರಿತು ಸಮಾಲೋಚಿಸಲು ಸೆ. 13 ರಂದು ಸಂಜೆ 6: 30ಕ್ಕೆ ನಗರದ ಖಾಸಗಿ ಹೋಟೆಲ್​ನಲ್ಲಿ ಸಭೆ ಕರೆಯಲಾಗಿದೆ.

ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಆಗಿರುವ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ. ಕೆ ಹರಿಪ್ರಸಾದ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ ಪಾಟೀಲ್, ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಧಾನಮಂಡಲ ಉಭಯ ಸದನಗಳಲ್ಲಿ ಕೈಗೊಳ್ಳುವ ಚರ್ಚೆಯ ಸಂಬಂಧ ಶಾಸಕರೊಂದಿಗೆ ಸಮಾಲೋಚಿಸುವ ಸಿದ್ದರಾಮಯ್ಯ ಸಲಹೆ ಸೂಚನೆಗಳನ್ನು ಸ್ವೀಕರಿಸಲಿದ್ದಾರೆ.

ಶಾಸಕಾಂಗ ಪಕ್ಷದ ಎಲ್ಲ ಸದಸ್ಯರುಗಳು ಹಾಗೂ ಬಾಹ್ಯ ಬೆಂಬಲಿತ ಸದಸ್ಯರು ಸಭೆಗೆ ತಪ್ಪದೇ ಹಾಜರಾಗಿ ಅದಿವೇಶನದಲ್ಲಿ ಚರ್ಚಿಸಬೇಕಾಗಿರುವ ವಿಷಯಗಳ ಬಗ್ಗೆ ತಮ್ಮ ಅಮೂಲ್ಯವಾದ ಸಲಹೆ - ಸೂಚನೆಗಳನ್ನು ನೀಡಬೇಕೆಂದು ತಮ್ಮನ್ನು ಕೋರಲು ಶಾಸಕಾಂಗ ಪಕ್ಷದ ನಾಯಕರ ಮೂಲಕ ನಿರ್ದೇಶಿತನಾಗಿದ್ದೇನೆ ಎಂದು ವಿಧಾನಸಭೆ ಕಾರ್ಯದರ್ಶಿ ಈ ತುಕಾರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಓದಿ: ಜನಸ್ಪಂದನ ಕಾರ್ಯಕ್ರಮದಲ್ಲಿ ಜೆ.ಪಿ.ನಡ್ಡಾ ಬದಲಿಗೆ ಸ್ಮೃತಿ ಇರಾನಿ ಭಾಗಿ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.