ಕೆ.ಆರ್.ಪುರ (ಬೆಂಗಳೂರು): ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕೆ.ಆರ್.ಪುರದ ರಾಮಮೂರ್ತಿನಗರದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ತೈಲ ದರ ಏರಿಕೆಯಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಕೊರೊನಾ ಸಂಕಷ್ಟದ ಸಮಯದಲ್ಲಿ ತೈಲ ಬೆಲೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವುದರಿಂದ ಜನ ಸಾಮಾನ್ಯರು ಜೀವನ ನಡೆಸುವುದು ದುಸ್ತರವಾಗಿಸಿದೆ. ಇದು ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳಿಗೆ ಹಿಡಿದ ಕನ್ನಡಿಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕಡಿಮೆ ಇದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚು ತೆರಿಗೆ ವಿಧಿಸಿ ಜನಸಾಮಾನ್ಯರಿಗೆ ಬರೆ ಎಳೆದಿವೆ ಎಂದರು.
ಇದನ್ನೂ ಓದಿ: ಹೆಣದಲ್ಲೂ ಹಣ, ಔಷಧಿಯಲ್ಲೂ ಹಣ ಲೂಟಿ: ಬಿಜೆಪಿ ವಿರುದ್ಧ ಡಿಕೆಶಿ ಕಿಡಿ