ETV Bharat / state

ಬಿಬಿಎಂಪಿ ಚುನಾವಣೆ ಹಿನ್ನೆಲೆ ಬಿಜೆಪಿಗೆ ಚಾರ್ಜ್ ಶೀಟ್ ನೀಡಲು ಕಾಂಗ್ರೆಸ್ ನಿರ್ಧಾರ

ಬಿಜೆಪಿ ಸರ್ಕಾರದ ವೈಫಲ್ಯಗಳ ಚಾರ್ಜ್ ಶೀಟ್ ಸಿದ್ದಪಡಿಸಲು ಕಾಂಗ್ರೆಸ್ ರಾಜ್ಯ ನಾಯಕರಿಗೆ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್  ನಾಯಕರು
ಕಾಂಗ್ರೆಸ್ ನಾಯಕರು
author img

By

Published : Aug 28, 2022, 10:45 PM IST

ಬೆಂಗಳೂರು: ಬಿಬಿಎಂಪಿ ಚುನಾವಣೆ ಹಿನ್ನೆಲೆ ಬಿಜೆಪಿ ಸರ್ಕಾರದ ವಿರುದ್ಧ ಚಾರ್ಜ್ ಶೀಟ್ ನೀಡಲು ಕಾಂಗ್ರೆಸ್ ನಿರ್ಧಾರ ಮಾಡಿದೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಬಿಜೆಪಿ ಕುರಿತು ಚಾರ್ಜ್ ಶೀಟ್ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಬಿಜೆಪಿ ಸರ್ಕಾರದ ವೈಫಲ್ಯಗಳ ಚಾರ್ಜ್ ಶೀಟ್ ಸಿದ್ಧಪಡಿಸಲು ಕಾಂಗ್ರೆಸ್ ರಾಜ್ಯ ನಾಯಕರಿಗೆ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೂಚನೆ ನೀಡಿದ್ದಾರೆ.

ಈ ಹಿನ್ನೆಲೆ ರಸ್ತೆಗುಂಡಿ, ಆರೋಗ್ಯ ಸಮಸ್ಯೆ ಸೇರಿ ಬೆಂಗಳೂರಿಗೆ ಸಂಬಂಧಿಸಿದ ಬಿಜೆಪಿ ವೈಫಲ್ಯಗಳ ಪ್ರಚಾರಕ್ಕೆ ಚಾರ್ಜ್ ಶೀಟ್ ಸಿದ್ಧಪಡಿಸಲು ನಿರ್ಧಾರ ಮಾಡಲಾಗಿದ್ದು, 15 ದಿನಗಳಲ್ಲಿ ಚಾರ್ಜ್ ಶೀಟ್ ರೆಡಿ ಮಾಡಿ ಮನೆ ಮನೆಗೆ ತಲುಪಿಸಲು ಸಿದ್ಧತೆ ಮಾಡಿಕೊಳ್ಳಲು ಸೂಚನೆ ರವಾನೆಯಾಗಿದೆ. ಚಾರ್ಜ್ ಶೀಟ್ ಬಳಿಕ ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಬೆಂಗಳೂರಿಗೆ ನೀಡಬಹುದಾದ ಕೊಡುಗೆಗಳ ಬಗ್ಗೆ ಪ್ರತ್ಯೇಕ ಪ್ರಣಾಳಿಕೆ ಸಿದ್ಧಪಡಿಸಲು ತೀರ್ಮಾನಿಸಲಾಗಿದೆ.

ಶಾಸಕಾಂಗ ಸಭೆಯಲ್ಲೂ ಚರ್ಚೆ: ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಇಂದು ಸಂಜೆ ನಡೆಯಿತು. ಇಲ್ಲಿ ಸಹ ಮೇಲಿನ ವಿಚಾರದ ಬಗ್ಗೆ ಗಂಭೀರ ಚರ್ಚೆ ಆಗಿದೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ. ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಧ್ಯಕ್ಷರಾದ ರಾಮಲಿಂಗರೆಡ್ಡಿ, ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ದ್ರುವನಾರಾಯಣ್, ಶಾಸಕರಾದ ಕೆ ಜೆ ಜಾರ್ಜ್, ಅಜಯ್ ಸಿಂಗ್ ಸೇರಿದಂತೆ ಹಲವು ಶಾಸಕರು ಪಾಲ್ಗೊಂಡಿದ್ದರು. ಭಾರತ್ ಜೋಡೋ ಯಾತ್ರೆ ಯಶಸ್ವಿಗೊಳಿಸುವ ವಿಚಾರವಾಗಿ ಸಹ ಸಭೆಯಲ್ಲಿ ಚರ್ಚೆ ನಡೆದಿದೆ.

ಸರ್ಕಾರಕ್ಕೆ ಟಾಂಗ್: ಸರ್ಕಾರದ ಜನೋತ್ಸವ ಕಾರ್ಯಕ್ರಮಕ್ಕೆ ವಿಪಕ್ಷ ಕಾಂಗ್ರೆಸ್ ಕೌಂಟರ್ ಕೊಡಲು ಮುಂದಾಗಿದ್ದು, ಸರ್ಕಾರದ ವಿರುದ್ಧ ಜನಜಾಗೃತಿ ಆಭಿಯಾನಕ್ಕೆ ಚಾಲನೆ ನೀಡಲು ಕಾಂಗ್ರೆಸ್ ತೀರ್ಮಾನಿಸಿದೆ. ನಾಳೆ ಬೆಳಗ್ಗೆ 11 ಗಂಟೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಜಂಟಿ ಮಾಧ್ಯಮಗೋಷ್ಟಿ ನಡೆಸಿ ಈ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಉತ್ತರ ಕೊಡು ಸರ್ಕಾರ ಅಭಿಯಾನ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಯಲಿದೆ. ಜನೋತ್ಸವದ ವಿರುದ್ಧ ಜನಜಾಗೃತಿ ಅಭಿಯಾನದ ಬಗ್ಗೆ ಘೋಷಣೆ ಅಲ್ಲದೆ ಉತ್ತರ ಕೊಡು ಸರ್ಕಾರ ಎಂದು ಬಿಜೆಪಿ ಸರ್ಕಾರದ ಮುಂದೆ ಸರಣಿ ಪ್ರಶ್ನೆಗಳನ್ನು ಕೇಳಲು ತೀರ್ಮಾನ ಮಾಡಲಾಗಿದೆ. ಪ್ರಶ್ನೆಗಳ ಮೂಲಕ ಉತ್ತರ ಕೊಡು ಸರ್ಕಾರ ಅಭಿಯಾನ ಸಾಧ್ಯತೆ ಇದೆ.

ಓದಿ: ಡಿಜೆ ಬಗ್ಗೆ ಯಾರು ಏನೇ ಹೇಳಿರಲಿ ನಾನು ಪ್ರತಿಕ್ರಿಯೆ ನೀಡಲ್ಲ: ಕೇಂದ್ರ ಸಚಿವ ಪ್ರಹ್ಲಾದ್​ ‌ಜೋಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.