ETV Bharat / state

ಕಾಂಗ್ರೆಸ್ ಶಾಸಕರ ಕ್ಷೇತ್ರಗಳ ಅನುದಾನ ಕಡಿತ ಆದೇಶ ವಾಪಸ್ ಪಡೆಯಿರಿ: ಕಾಂಗ್ರೆಸ್ ನಿಯೋಗ ಮನವಿ - ಸಿಎಂಗೆ ಕಾಂಗ್ರೆಸ್ ನಿಯೋಗ ಮನವಿ

ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಕಡಿತ ಮಾಡಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪಗೆ ಕಾಂಗ್ರೆಸ್ ನಿಯೋಗ ಮನವಿ ಸಲ್ಲಿಸಿದೆ.

ಸಿಎಂಗೆ ಕಾಂಗ್ರೆಸ್ ನಿಯೋಗ ಮನವಿ
author img

By

Published : Oct 2, 2019, 8:58 PM IST

ಬೆಂಗಳೂರು: ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಕಡಿತ ಮಾಡಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕಾಂಗ್ರೆಸ್ ನಿಯೋಗ ಮನವಿ ಸಲ್ಲಿಸಿತು.

ಗೃಹ ಕಚೇರಿ ಕೃಷ್ಣಾಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಾಜಿ‌‌ ಗೃಹ ಸಚಿವ ರಾಮಲಿಂಗಾ ರೆಡ್ಡಿ, ಮಾಜಿ ಸಚಿವ ಕೆ.ಜೆ.ಜಾರ್ಜ್, ಶಾಸಕಿ ಸೌಮ್ಯ ರೆಡ್ಡಿ ಸೇರಿದಂತೆ ಪಕ್ಷದ ಮುಖಂಡರ ನಿಯೋಗ ಸಿಎಂ ಭೇಟಿ ಮಾಡಿತು. ಈ ವೇಳೆ ಕಾಂಗ್ರೆಸ್ ಶಾಸಕರ ಕ್ಷೇತ್ರದ ಅನುದಾನ ಕಡಿತ ಸಂಬಂಧ ಮಾತುಕತೆ ನಡೆಸಿದ್ದಾರೆ. ಬೆಂಗಳೂರು ಅಭಿವೃದ್ಧಿ ದೃಷ್ಟಿಯಿಂದ ಅನುದಾನ ಕಡಿತ ನಿರ್ಧಾರ ಕೈಬಿಡುವಂತೆ ಮನವಿ ಮಾಡಿತು.

ಸಿಎಂಗೆ ಕಾಂಗ್ರೆಸ್ ನಿಯೋಗ ಮನವಿ

ಸಭೆ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಿಎಂ‌ ನಗರೋತ್ಥಾನ ಯೋಜನೆಯನ್ನು ಸಿದ್ದರಾಮಯ್ಯನವರು ಇದ್ದ ವೇಳೆ ಮಂಜೂರಾಗಿ ಮೈತ್ರಿ ಸರ್ಕಾರದಲ್ಲಿ ಅನುಮೋದನೆ ನೀಡಲಾಗಿತ್ತು. ಅದರಡಿ ಬೆಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗೆ ಮೂಲಸೌಕರ್ಯ ಉತ್ತಮಗೊಳಿಸಲು 8 ಸಾವಿರ ಕೋಟಿ ರೂಗೂ ಅಧಿಕ ಹಣದ ವಿಶೇಷ ಪ್ಯಾಕೇಜ್ ಮಂಜೂರಾಗಿತ್ತು. ಆದರೆ ಬಿಜೆಪಿ ಸರ್ಕಾರ ಬಂದ‌ ಮೇಲೆ ಕೆಲ ಬದಲಾವಣೆ ಮಾಡಲಾಗಿದೆ ಎಂದರು.

ಅನುದಾನ ಕಡಿತದಿಂದ ಅಭಿವೃದ್ಧಿ ಕಾರ್ಯ ಕುಂಠಿತವಾಗಲಿದೆ. ಹೀಗಾಗಿ ಈ ವಿಚಾರವನ್ನು ಸಿಎಂ ಗಮನಕ್ಕೆ ತಂದಿದ್ದು ಅವರು ಸರಿಮಾಡುವ ಆಶ್ವಾಸನೆ ನೀಡಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ರಾಜಕೀಯ ಮಾಡಲ್ಲ, ಅಧಿಕಾರಿಗಳ ಜೊತೆ ಚರ್ಚಿಸಿ ತಿಳಿಸುವುದಾಗಿ ಹೇಳಿದ್ದಾರೆ ಎಂದು ಗುಂಡೂರಾವ್ ತಿಳಿಸಿದ್ರು.

Intro:

ಬೆಂಗಳೂರು:ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಕಡಿತ ಮಾಡಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಕಾಂಗ್ರೆಸ್ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮನವಿ ಸಲ್ಲಿಸಿತು.

ಗೃಹ ಕಚೇರಿ ಕೃಷ್ಣಾಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ನೀಡಿತು.ಮಾಜಿ‌‌ ಗೃಹ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಸಚಿವ ಕೆ.ಜೆ.ಜಾರ್ಜ್,ಶಾಸಕಿ ಸೌಮ್ಯರೆಡ್ಡಿ ಸೇರಿದಂತೆ ಪಕ್ಷದ ಮುಖಂಡರ ನಿಯೋಗ ಸಿಎಂ ಭೇಟಿ ಮಾಡಿತು.ಕಾಂಗ್ರೆಸ್ ಶಾಸಕರ ಕ್ಷೇತ್ರದ ಅನುದಾನ ಕಡಿತ ಸಂಬಂಧ ಮಾತುಕತೆ ನಡೆಸಿತು.ಬೆಂಗಳೂರು ಅಭಿವೃದ್ಧಿ ದೃಷ್ಟಿಯಿಂದ ಅನುದಾನ ಕಡಿತ ನಿರ್ಧಾರ ಕೈಬಿಡುವಂತೆ ಮನವಿ ಮಾಡಿತು.

ಸಭೆ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಿಎಂ‌ ನಗರೋತ್ಥಾನ ಯೋಜನೆಯನ್ನು ಸಿದ್ದರಾಮಯ್ಯ ಇದ್ದ ವೇಳೆ ಮಂಜೂರಾಗಿ ಮೈತ್ರಿ ಸರ್ಕಾರದಲ್ಲಿ ಅನುಮೋದನೆ ಆಗಿತ್ತು ಅದರ ಅಡಿ ಬೆಂಗಳೂರುನ ಸರ್ವಾಂಗೀಣ ಅಭಿವೃದ್ಧಿಗೆ ಮೂಲಸೌಕರ್ಯ ಉತ್ತಮಗೊಳಿಸಲು 8 ಸಾವಿರ ಕೋಟಿಗೂ ಅಧಿಕ ಹಣದ ವಿಶೇಷ ಪ್ಯಾಕೇಜ್ ಮಂಜೂರಾಗಿತ್ತು ಆದರೆ ಬಿಜೆಪಿ ಸರ್ಕಾರ ಬಂದ‌ಮೇಲೆ ಕೆಲ ಬದಲಾವಣೆ ಮಾಡಲಾಗಿದೆ, ಅನುದಾನ ಬಹಳ ದೊಡ್ಡ ಪ್ತಮಾಣದಲ್ಲಿ ಕಡಿಮರ ಮಾಡಲಾಗಿದೆ,ಮುಖ್ಯವಾದ ಯೋಜನೆ ರದ್ದು ಮಾಡಲಾಗಿದೆ ಅನುದಾನ ಕಡಿತದಿಂದ ಅಭಿವೃದ್ಧಿ ಕಾರ್ಯ ಕುಂಠಿತವಾಗಲಿದೆ ಇದನ್ನು ಸಿಎಂ ಗಮನಕ್ಕೆ ತಂದಿದ್ದು ಸರಿಮಾಡುವ ಆಶ್ವಾಸನೆ ನೀಡಿದ್ದಾರೆ, ಬೆಂಗಳೂರಿನ ಅಭಿವೃದ್ಧಿಗೆ ರಾಜಕೀಯ ಮಾಡಲ್ಲ, ಅಧಿಕಾರಿಗಳ ಜೊತೆ ಚರ್ಚೆ ಮಾಡಿ ತಿಳಿಸುವುದಾಗಿ ಹೇಳಿದ್ದಾರೆ, ಎಲ್ಲಾ ವಿವರವಾದ ಮಾಹಿತಿ ನೀಡಿದ್ದೇವೆ, ಇದನ್ನು ಸರಿಪಡಿಸುವ ಕೆಲಸ ಮಾಡುವ ವಿಶ್ವಾಸವಿದೆ ಎಂದರು.
Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.