ETV Bharat / state

ಕಲಾಪ ಹಾಳು ಮಾಡುವುದನ್ನು ಬಿಟ್ಟು ಕಾಂಗ್ರೆಸ್ ಕೋರ್ಟ್​ಗೆ ಪಿಐಎಲ್ ಹಾಕಲಿ: ಹೆಚ್​ಡಿಕೆ

ರಾಜ್ಯದಲ್ಲಿ ' ರಾಜಕೀಯ ಕೋವಿಡ್ ' ಹರಡಿಸುವ ಷಡ್ಯಂತ್ರ ನಡೆದಿದೆ. ಇದ್ದ ವಿಷಯವನ್ನೇ ಹೇಳಿದ್ದೇನೆ, ಕಲಾಪ ಹಾಳು ಮಾಡುವುದು ಬಿಟ್ಟು ಕಾಂಗ್ರೆಸ್ ಕೋರ್ಟ್​ಗೆ ಪಿಐಎಲ್ ಹಾಕಲಿ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

author img

By

Published : Feb 18, 2022, 8:33 PM IST

ಹೆಚ್​ಡಿಕೆ
ಹೆಚ್​ಡಿಕೆ

ಬೆಂಗಳೂರು: ರಾಷ್ಟ್ರಧ್ವಜದ ವಿಷಯದಲ್ಲಿ ನಾನು ಸಚಿವ ಕೆ.ಎಸ್. ಈಶ್ವರಪ್ಪ ಅವರ ಪರ ವಕೀಲಿಕೆ ಮಾಡುತ್ತಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಇರುವ ವಿಷಯವನ್ನು ಇದ್ದ ಹಾಗೆ ಹೇಳಿದ್ದೇನೆ.

ಈಶ್ವರಪ್ಪ ಅವರು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಸಹಜವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅವರೇನೂ ಧ್ವಜಕ್ಕೆ ಅಪಮಾನ ಆಗುವಂತಹ ಹೇಳಿಕೆ ಕೊಟ್ಟಿಲ್ಲ. ಹಾಗಂತ ನಾನೇನೂ ಈಶ್ವರಪ್ಪ ಪರ ವಕೀಲಿಕೆ ಮಾಡುತ್ತಿಲ್ಲ ಎಂದು ಹೇಳಿದರು.

ಕಾಂಗ್ರೆಸ್​​ ರಾಷ್ಟ್ರಧ್ವಜ ಹಿಡಿದು ಪ್ರತಿಭಟಿಸುವುದು ಸರಿಯೇ: ಧ್ವಜದ ಬಗ್ಗೆ ಅಷ್ಟೊಂದು ಹೇಳುವ ಕಾಂಗ್ರೆಸ್ ನಾಯಕರು, ಸದನದ ಬಾವಿಯಲ್ಲಿ ರಾಷ್ಟ್ರಧ್ವಜ ಹಾರಿಸುತ್ತ ಪ್ರತಿಭಟನೆ ಮಾಡಿದರು. ಇದು ರಾಷ್ಟ್ರಧ್ವಜಕ್ಕೆ ನೀಡುವ ಗೌರವವೇ? ಸುಖಾ ಸುಮ್ಮನೆ ಸದನದ ಕಲಾಪ ವ್ಯರ್ಥ ಮಾಡದೇ ಹೈಕೋರ್ಟ್​ನಲ್ಲಿ ಪಿಐಎಲ್ ಹಾಕಿ ಹೋರಾಟ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿಗಳು ಟಾಂಗ್ ನೀಡಿದರು.

ಪ್ರತಿಷ್ಠೆಗೆ ಬಿದ್ದು ಮಂತ್ರಿಯ ರಾಜೀನಾಮೆ ಪಡೆಯಲು ಹೊರಟ ಕಾಂಗ್ರೆಸ್ ನಡೆಯನ್ನು ಜನ ಗಮನಿಸುತ್ತಾ ಇದ್ದಾರೆ. ಕಲಾಪಕ್ಕೆ ಅಡ್ಡಿ ಮಾಡುವವರನ್ನು ಸದನದಿಂದ ಅಮಾನತು ಮಾಡಿ, ಆ ನಂತರ ಸದನ ನಡೆಸಿ ಎಂದು ಸಭಾಧ್ಯಕ್ಷರಿಗೂ ಮನವಿ ಮಾಡುತ್ತೇನೆ. ಕೋವಿಡ್ ಅನಾಹುತ ಸಂದರ್ಭದಲ್ಲಿ ಆಗುತ್ತಿರುವ ಮತ್ತೊಂದು 'ರಾಜಕೀಯ ಕೋವಿಡ್ ದುರಂತ' ಇದು. ಈ ವಿನಾಶಕಾರಿ ಕೋವಿಡ್​ನನ್ನು ಎಲ್ಲಾ ಸೇರಿ ಹರಡಿಸಬೇಡಿ ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರತಿಕ್ರಿಯಿಸಿದರು.

ಎರಡು ದಿನಗಳ ಕಲಾಪ ಹಾಳು: ನಾವು ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಸದನಕ್ಕೆ ಬಂದಿದ್ದೆವು. ಆದರೆ, ಇವರು ಹಿಜಾಬ್ ಮತ್ತು ಕೇಸರಿ ಶಾಲು ಎಂದು ಕಲಾಪವನ್ನು ಹಾಳು ಮಾಡಿದರು. ಆಮೇಲೆ ಸಚಿವರ ರಾಷ್ಟ್ರಧ್ವಜದ ಹೇಳಿಕೆ ಇಟ್ಟುಕೊಂಡು ಎರಡು ದಿನಗಳ ಕಲಾಪವನ್ನು ಹಾಳುಗೆಡವಿದರು. ಇದನ್ನು ಒಪ್ಪಲು ಸಾಧ್ಯವೇ? ತಪ್ಪು ಎಂದಿದ್ದಕ್ಕೆ ಕಾಂಗ್ರೆಸ್ ನಾಯಕರು ಈಗ ಬೇರೆ ರಾಗ ಹಾಡುತ್ತಿದ್ದಾರೆ ಎಂದು ಹೇಳಿದರು.

ಕರಾವಳಿಯಲ್ಲಿ ಶುರುವಾದ ವಿವಾದ ಇತರರಿಗೂ ಪ್ರೇರಣೆ ಆಗಿದೆ: ಕರಾವಳಿಯ ಒಂದು ಭಾಗದಲ್ಲಿ ಶುರುವಾದ ಹಿಜಾಬ್ ಗೊಂದಲ ಮತ್ತಿತರ ಭಾಗದವರಿಗೆ ಪ್ರೇರೇಪಣೆ ಕೊಟ್ಟಂತೆ ಆಗಿದೆ. ಆ ಪ್ರದೇಶದ ಕೆಲ ಭಾಗದಲ್ಲಿ ಮಕ್ಕಳು ಹಿಜಾಬ್ ಧರಿಸಿ ಶಾಲೆಗೆ ಹೋಗುತ್ತಿದ್ದರು. ತರಗತಿ ಪ್ರವೇಶ ಮಾಡುವ ಸಮಯದಲ್ಲಿ ಹಿಜಾಬ್ ತೆಗೆದು, ಮನೆಗೆ ಹೋಗುವಾಗ ಮತ್ತೆ ಧರಿಸಿ ಹೋಗುತ್ತಿದ್ದರು.

ಆರಂಭದಲ್ಲೇ ಚಿವುಟಿ ಹಾಕಬಹುದಾಗಿದ್ದ ವಿವಾದ ಎರಡು ಧರ್ಮದವರ ಸಂಘರ್ಷಕ್ಕೆ ಕಾರಣವಾಗಿದೆ. ಮಕ್ಕಳ ಮನಸ್ಸಲ್ಲಿ ದ್ವೇಷ ಭಿತ್ತಲಾಗಿದೆ. ಕೆಲ ಸಂಘಟನೆಗಳು ಇದನ್ನು ಮತಬ್ಯಾಂಕ್ ಆಗಿ ಪರಿವರ್ತನೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿವೆ. ಕಳೆದ ಎರಡು ದಿನಗಳಿಂದ ಎರಡು ಸದನದಲ್ಲಿ ಕಲಾಪಗಳು ಸ್ಥಗಿತಗೊಳಿಸುವ ಹಾಗೆ ಕಾಂಗ್ರೆಸ್ ನಡವಳಿಕೆ ಇದೆ. ಜನರು ಇದನ್ನು ಕ್ಷಮಿಸುವುದಿಲ್ಲ ಎಂದರು.

ಇದನ್ನೂ ಓದಿ:ಅಮೃತ ಸ್ವಸಹಾಯ ಕಿರು ಉದ್ದಿಮೆ ಯೋಜನೆ ಘೋಷಣೆ : ಸಚಿವ ಆಚಾರ್ ಹಾಲಪ್ಪ

ಮಾಧ್ಯಮಗಳಲ್ಲಿ ಬಂದ ಈಶ್ವರಪ್ಪ ಅವರ ಪ್ರತಿಕ್ರಿಯೆ ಇವತ್ತಿನ ಈ ರೀತಿಯ ಕಲಾಪಗಳಿಗೆ ಕಾರಣವಾಗಿದೆ. ಅದಕ್ಕಿಂತಲೂ ಹೆಚ್ಚಿನ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕಿತ್ತು. ಆದರೆ ಆಗಲಿಲ್ಲ. ಕಾರವಾರದ ಸಂಸದರೊಬ್ಬರು ಹಿಂದೆ ದೇಶದ ಸಂವಿಧಾನ ಬದಲಾಯಿಸುತ್ತೇವೆ ಎಂಬಂತೆ ಮಾತನಾಡಿದ್ದರು. ಬಿಜೆಪಿಯವರ ಅಜೆಂಡಾಗಳೇ ಈ ರೀತಿ ಇವೆ. ಈ ದೇಶದಲ್ಲಿ ಹಿಂದೂಗಳು ಮಾತ್ರ ಬದುಕಬೇಕು ಎಂಬ ಅಜೆಂಡಾ ಇಟ್ಟುಕೊಂಡಿದ್ದಾರೆ‌. ಇಂತಹ ಭಾವನಾತ್ಮಕ ವಿಚಾರಗಳನ್ನು ಇಟ್ಟುಕೊಂಡೇ ಚುನಾವಣೆಗಳು ನಡೆಯುತ್ತಿವೆ ಎಂದರು.

ಎಲ್ಲರ ಮೈಮೇಲೆ ಕೇಸರಿ ಹಾಕುವ ಕೆಲಸ ನಡೆಯುತ್ತಿದೆ: ಕೇಸರಿ ಎಂಬುದಕ್ಕೆ ನಮ್ಮ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನ ಇದೆ. ಅದರ ಬಗ್ಗೆ ನಮಗೂ ಪೂಜ್ಯ ಭಾವನೆ ಇದೆ. ಧಾರ್ಮಿಕ ಕ್ಷೇತ್ರದಲ್ಲಿ ಕಠಿಣ ಜೀವನಶೈಲಿ ರೂಢಿಸಿಕೊಂಡವರು ಕೇಸರಿ ಧರಿಸುತ್ತಾ ಇದ್ದರು. ಈಗ ಎಲ್ಲರ ಮೈಮೇಲೆ ಕೇಸರಿ ಹಾಕುವ ಕೆಲಸ ನಡೆಯುತ್ತಿದೆ. ಭಾವನಾತ್ಮಕ ವಿಚಾರ ಮುಂದಿಟ್ಟುಕೊಂಡು ಬದಲಾವಣೆ ತರಲು ಅವರು ಹೊರಟಿದ್ದಾರೆ ಎಂದು ಹೆಚ್​ಡಿಕೆ ನುಡಿದರು.

ಭ್ರಷ್ಟ ಹಗರಣಗಳ ಬಗ್ಗೆ ಚರ್ಚೆ ಮಾಡುವವನಿದ್ದೆ: ನಾನು ಈ ಬಾರಿ ಸದನದಲ್ಲಿ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ನಡೆದ ಭ್ರಷ್ಟಾಚಾರಗಳ, ಹಗರಣಗಳ ಬಗ್ಗೆ ಸದನದಲ್ಲಿ ದಾಖಲೆಗಳನ್ನು ಇಡಲು ತಯಾರಿ ಮಾಡಿಕೊಂಡಿದ್ದೆ. ಆದರೆ ಸದನವು ಸರಿಯಾಗಿ ನಡೆಯಲೇ ಇಲ್ಲ. ನೀವು ಕೂಡ 14 ತಿಂಗಳು ಆಡಳಿತ ಮಾಡಿದ್ದೀರಿ. ಆಗ ಸರಿ ಮಾಡಬಹುದಿತ್ತಲ್ಲ ಎಂದು ಯಾರಾದರೂ ಕೇಳಬಹುದು. ಆದರೆ ನಾನು ಆಗ ಸಿಎಂ ಅಲ್ಲ, ಎಫ್ ಡಿಸಿ ಕೆಲಸ ಮಾಡಿದ್ದೆ ಅಷ್ಟೇ ಎಂದು ಬೇಸರ ವ್ಯಕ್ತಪಡಿಸಿದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.