ETV Bharat / state

ವಿಧಾನಪರಿಷತ್ ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭಿಸಿದ ಕಾಂಗ್ರೆಸ್ - ವಿಧಾನಪರಿಷತ್ ಚುನಾವಣೆ

ವಿಧಾನ ಪರಿಷತ್ತಿನ 25 ಸದಸ್ಯ ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ಇದಾಗಿದೆ. ಸ್ಥಳೀಯ ನಗರ ಸಂಸ್ಥೆಗಳು, ಪಂಚಾಯತ್ ರಾಜ್ ಸಂಸ್ಥೆಗಳು ಹಾಗೂ ಸಂಸದೀಯ ಜನ ಪ್ರತಿನಿಧಿಗಳ ಚುನಾವಣೆಗೆ 2021ರ ಡಿಸೆಂಬರ್ ತಿಂಗಳಲ್ಲಿ ಮುಹೂರ್ತ ಫಿಕ್ಸ್​ ಆಗಿದೆ. ಇನ್ನು ಪರಿಷತ್‌ನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ 4 ಸದಸ್ಯ ಸ್ಥಾನಗಳಿಗೆ 2022ರ ಜೂನ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

congress
ಕಾಂಗ್ರೆಸ್
author img

By

Published : Aug 25, 2021, 8:40 AM IST

ಬೆಂಗಳೂರು: ರಾಜ್ಯದ ವಿವಿಧ ಕ್ಷೇತ್ರಗಳಿಗೆ ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷ ಈಗಲೇ ಸಿದ್ಧತೆ ಆರಂಭಿಸಿದೆ.

ವಿಧಾನ ಪರಿಷತ್ತಿನ 25 ಸದಸ್ಯ ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ಇದಾಗಿದ್ದು, ಸ್ಥಳೀಯ ನಗರ ಸಂಸ್ಥೆಗಳಿಗೆ, ಪಂಚಾಯತ್‌ರಾಜ್ ಸಂಸ್ಥೆಗಳಿಗೆ ಹಾಗೂ ಸಂಸದೀಯ ಜನಪ್ರತಿನಿಧಿಗಳ ಚುನಾವಣೆಗೆ 2021ರ ಡಿಸೆಂಬರ್ ತಿಂಗಳಲ್ಲಿ ಮುಹೂರ್ತ ಫಿಕ್ಸ್​ ಆಗಿದೆ. ಇನ್ನು ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ 4 ಸದಸ್ಯ ಸ್ಥಾನಗಳಿಗೆ 2022ರ ಜೂನ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

congress
ಕಾಂಗ್ರೆಸ್ ಪ್ರಕಟಣೆ

ಪ್ರಸ್ತುತ ಹಾಲಿ ಸದಸ್ಯರ ಅವಧಿಯು ಕ್ರಮವಾಗಿ 2022ರ ಜನವರಿ 5 ರಂದು ಹಾಗೂ 2022ರ ಜುಲೈ 4 ರಂದು ಕೊನೆಗೊಳ್ಳಲಿದೆ. ಆದ್ದರಿಂದ ಈ ಚುನಾವಣೆಗಳ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಸಂಸದರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, 2018 ಮತ್ತು 2019ರ ಚುನಾವಣಾ ಅಭ್ಯರ್ಥಿಗಳು, 2015ರ ವಿಧಾನ ಪರಿಷತ್ತಿಗೆ ಸ್ಥಳೀಯ ಸಂಸ್ಥೆಗಳ ಚುನಾವಣಾ ಕ್ಷೇತ್ರದ ಅಭ್ಯರ್ಥಿಗಳು, 2016ರ ಕರ್ನಾಟಕ ವಾಯುವ್ಯ ಪದವೀಧರರ ಕ್ಷೇತ್ರ, ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರ, ಕರ್ನಾಟಕ ವಾಯುವ್ಯ ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳನ್ನು ಒಳಗೊಂಡ ಸಭೆಯನ್ನು ಆಯೋಜಿಸಲಾಗಿದೆ.

ಈ ಸಭೆಯ ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಹಿಸಲಿದ್ದು, ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್​ ಪ್ರತಿ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಮತ್ತು ಕೆಪಿಸಿಸಿಯ ಕಾರ್ಯಾಧ್ಯಕ್ಷರು ಭಾಗವಹಿಸಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.