ಬೆಂಗಳೂರು : ವಿಧಾನ ಮಂಡಲ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ವಿಶೇಷ ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಸರ್ಕಾರಕ್ಕೆ ಮುಜುಗರ ಉಂಟು ಮಾಡಲು ಕಾಂಗ್ರೆಸ್ ತೀರ್ಮಾನಿಸಿದೆ. ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಹಾಡು ಬಿಡುಗಡೆ ಮಾಡಿದ್ದಾರೆ.
ವಿಧಾನಮಂಡಳ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ವಿಶಿಷ್ಟ ಹಾಡೊಂದನ್ನು ಕಾಂಗ್ರೆಸ್ ಸಿದ್ಧಪಡಿಸಿದೆ. ಇದೇ ಹಾಡನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ಬಿಡುಗಡೆ ಮಾಡಲಿದ್ದಾರೆ. ಏಕಕಾಲಕ್ಕೆ ಮೂರು ಹಾಡುಗಳನ್ನು ಇಂದು ಕಾಂಗ್ರೆಸ್ ಬಿಡುಗಡೆ ಮಾಡಲಿದೆ. ಸುದ್ದಿಗೋಷ್ಠಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಇರಲಿದ್ದಾರೆ.
ಸುನೀಲ್ ಕನಗೋಳ್ ಟೀಮ್ನಿಂದ ಮಾಡಿರುವ ಹಾಡಿನಲ್ಲಿ ಶೇ 40 ರಷ್ಟು ಕಮಿಷನ್, ಪಿಎಸ್ಐ ಹಗರಣ, ಬಿಬಿಎಂಪಿ ಶೇ 50ರಷ್ಟು ಕಮಿಷನ್, ಆಡಳಿತ ವೈಫಲ್ಯ, ನೆರೆ ನಿರ್ವಹಣೆ ವೈಫಲ್ಯ, ಟೆಕಾಪ್ ಆಗದ ಸರ್ಕಾರ ಸೇರಿದಂತೆ ಹಲವು ವಿಷಯಗಳು ಇದೆ. ಅಧಿವೇಶನ ಸಂದರ್ಭದಲ್ಲಿ ಬಿಡುಗಡೆ ಮಾಡಿ ಸರ್ಕಾರಕ್ಕೆ ಮುಜುಗರ ಉಂಟು ಮಾಡುವುದು ಕಾಂಗ್ರೆಸ್ ಉದ್ದೇಶವಾಗಿದೆ.
ಇದನ್ನೂ ಓದಿ : ಮಳೆಗಾಲದ ಅಧಿವೇಶನ ಆರಂಭ: ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ