ETV Bharat / state

ಕೋಟೆನಾಡಲ್ಲಿಂದು ಕಾಂಗ್ರೆಸ್‌​ ಎಸ್​ಸಿ, ಎಸ್​ಟಿ ಬೃಹತ್‌ ಐಕ್ಯತಾ ಸಮಾವೇಶ - ಬೃಹತ್‌ ಐಕ್ಯತಾ ಸಮಾವೇಶ

ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಬೃಹತ್​ ಮಟ್ಟದ ಎಸ್​ಸಿ, ಎಸ್​ಟಿ ಐಕ್ಯತಾ ಸಮಾವೇಶ ನಡೆಯಲಿದೆ. ಸುಮಾರು 5 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಾರಂಭ ಉದ್ಘಾಟಿಸಲಿದ್ದಾರೆ.

congress
ಎಸ್​ಸಿ ಎಸ್​ಟಿ ಐಕ್ಯತಾ ಸಮಾವೇಶ
author img

By

Published : Jan 8, 2023, 7:23 AM IST

Updated : Jan 8, 2023, 8:26 AM IST

ಬೆಂಗಳೂರು: ಚಿತ್ರದುರ್ಗದಲ್ಲಿ ಇಂದು ನಡೆಯುವ ಎಸ್​ಸಿ, ಎಸ್​ಟಿ ಐಕ್ಯತಾ ಸಮಾವೇಶದಲ್ಲಿ ದೊಡ್ಡ ಶಕ್ತಿ ಪ್ರದರ್ಶನ ತೋರಲು ಸಜ್ಜಾಗುತ್ತಿರುವ ಕಾಂಗ್ರೆಸ್, ಮುಂಬರುವ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಲಿದೆ. ಎಸ್.ಜೆ.ಎಂ.ಕ್ರೀಡಾಂಗಣದಲ್ಲಿ ಐಕ್ಯತಾ ಸಮಾವೇಶಕ್ಕೆ ತಾಲೂಕಿನಿಂದ ಕಾರ್ಯಕರ್ತರು ಹಾಗೂ ಮುಖಂಡರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ. ರಾಜ್ಯ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ನಾಯಕರು ಸಮಾವೇಶದಲ್ಲಿ ಭಾಗಿಯಾಗುತ್ತಿದ್ದಾರೆ.

ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೂ ಆಹ್ವಾನ ನೀಡಿದ್ದು, ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಕೈ ನಾಯಕರು ಹೇಳಿದ್ದಾರೆ. ಸುಮಾರು 5 ಲಕ್ಷ ಜನರನ್ನು ಸೇರಿಸಿ ಮಧ್ಯ ಕರ್ನಾಟಕದಲ್ಲಿ ನಡೆಸುತ್ತಿರುವ ಈ ಸಮಾವೇಶದಲ್ಲಿ ಮುಂಬರುವ ಚುನಾವಣೆಗೆ ದಲಿತರ ಮತಗಳನ್ನು ಸೆಳೆಯುವ ಕಸರತ್ತು ನಡೆಯಲಿದೆ. ರಾಜ್ಯದ 24 ವಿಧಾನಸಭಾ ಕ್ಷೇತ್ರಗಳಿಂದಲೂ ಜನರನ್ನು ಕರೆಸಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಚಿತ್ರದುರ್ಗದಲ್ಲಿ ಸಮಾವೇಶ ಆಯೋಜಿಸಲಾಗಿದೆ.

ದೇವರಾಜ್ ಅರಸು ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಸಂದರ್ಭದಲ್ಲಿ ಕಾಂಗ್ರೆಸ್​ ಬಿಟ್ಟು ಹೋಗಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಮತದಾರರನ್ನು ಮತ್ತೊಮ್ಮೆ ಕಾಂಗ್ರೆಸ್​ನತ್ತ ಸೆಳೆಯುವ ಪ್ರಯತ್ನಕ್ಕೆ ಕೈ ಪಕ್ಷ ಮುಂದಾಗಿದೆ. ಈ ಹಿಂದೆಯೂ ಸಾಕಷ್ಟು ಸಾರಿ ಪ್ರಯತ್ನ ನಡೆಸಿ ಮತದಾರರನ್ನು ಸೆಳೆಯಲು ವಿಫಲರಾಗಿರುವ ಪಕ್ಷದ ನಾಯಕರು, 2013 ರಿಂದ 18ರ ಅವಧಿಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಸಾಕಷ್ಟು ಯೋಜನೆಗಳನ್ನು ಘೋಷಿಸಿದ್ದರು. ಆದರೂ ಸಹ ನಂತರದ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಮತದಾರರನ್ನು ಸಂಪೂರ್ಣ ತಮ್ಮತ್ತ ಸೆಳೆಯುವಲ್ಲಿ ವಿಫಲರಾಗಿದ್ದರು. ಇದೀಗ ಇನ್ನೊಂದು ಹಂತದಲ್ಲಿ ಪ್ರಯತ್ನ ಆರಂಭವಾಗಿದ್ದು, ಎಷ್ಟರಮಟ್ಟಿಗೆ ಸಫಲತೆ ಸಾಧಿಸಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕು.

5 ಲಕ್ಷ ಜನ ಸೇರುವ ನಿರೀಕ್ಷೆ: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯಿಂದ ಮುರುಘಾ ರಾಜೇಂದ್ರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬೃಹತ್‌ ಐಕ್ಯತಾ ಸಮಾವೇಶದಲ್ಲಿ ಐದು ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಸಮಾವೇಶದ ಉಸ್ತುವಾರಿ, ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ತಿಳಿಸಿದ್ದಾರೆ. ಸಮಾವೇಶವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸಲಿದ್ದು, ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಈ ಮೂವರಲ್ಲಿ ಯಾರಾದರೂ ಒಬ್ಬರು ಬರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಎಸ್​ಸಿ, ಎಸ್​ಟಿ ಸಮುದಾಯದ ಸಮಸ್ಯೆ, ನ್ಯೂನತೆಗಳನ್ನು ಸರಿಪಡಿಸಿ ನ್ಯಾಯಯುತ ಸೌಲಭ್ಯ ನೀಡಲು ಹತ್ತು ಅಂಶಗಳ ಕಾರ್ಯಕ್ರಮಗಳನ್ನು ಸಮಾವೇಶದಲ್ಲಿ ಘೋಷಿಸಲಾಗುವುದು ಎಂದು ಹೇಳಲಾಗಿದೆ.

ಎಸ್​ಸಿಯಲ್ಲಿ 101 ಹಾಗೂ ಎಸ್​ಟಿಯಲ್ಲಿ 52 ಜಾತಿಗಳಿವೆ. ಈ ಜನಾಂಗದವರು ಒಟ್ಟುಗೂಡಿ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂಬ ಸಂಕಲ್ಪದೊಂದಿಗೆ ಕಾಂಗ್ರೆಸ್ ಈ ಸಮಾವೇಶವನ್ನು ಹಮ್ಮಿಕೊಂಡಿದೆ. ವಿಜಯನಗರ ಜಿಲ್ಲೆಯ ಐದು ಕ್ಷೇತ್ರಗಳ 62 ಆಕಾಂಕ್ಷಿಗಳು ತಲಾ ಒಬ್ಬರು 500 ಜನರನ್ನು ಸಮಾವೇಶಕ್ಕೆ ಕರೆದುಕೊಂಡು ಬರಬೇಕು ಎಂಬ ಗುರಿಯನ್ನು ಸಹ ಕಾಂಗ್ರೆಸ್ ನಾಯಕರು ನೀಡಿದ್ದಾರೆ. ಇದು ಕೇವಲ ವಿಜಯನಗರ ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ, ರಾಜ್ಯದ ವಿವಿಧ ಭಾಗಗಳ ಕಾಂಗ್ರೆಸ್ ಮುಖಂಡರಿಗೂ ಜನರನ್ನ ಕರೆತರಲು ಗುರಿ ನೀಡಲಾಗಿದೆ.

ಸಮಾವೇಶ ಕುರಿತು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿ, 'ಆಳುವ ಸರ್ಕಾರದಲ್ಲಿರುವ ಕೆಲವರು ಸಂವಿಧಾನ ಬದಲಿಸುವ ಮಾತನ್ನಾಡುತ್ತಿದ್ದಾರೆ. ಸಂವಿಧಾನದ ಆಶಯಕ್ಕೆ ಕೊಡಲಿ ಪೆಟ್ಟು ನೀಡುವ ಕಾರ್ಯ ಮಾಡಲಾಗುತ್ತಿದೆ. ನಾವೆಲ್ಲರೂ ಒಟ್ಟಾಗಿ ಸಂವಿಧಾನ ಉಳಿಸಿಕೊಳ್ಳಬೇಕು. ರಾಜಕೀಯ ಅಧಿಕಾರ ನಮ್ಮ ಹಕ್ಕುಗಳಿಗೆ ಬೀಗದ ಕೈ ಇದ್ದಂತೆ. ಹಾಗಾಗಿ, ಕಾಂಗ್ರೆಸ್ ಪಕ್ಷವನ್ನು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಿಸಬೇಕು. ಇದು ಮುಂದಿನ ಚುನಾವಣೆಗೆ ಮೈಲುಗಲ್ಲಾಗಬೇಕು. ಇಲ್ಲವಾದ್ರೆ ಕಾಂಗ್ರೆಸ್‍ಗೆ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಕಾರ್ಯಕರ್ತರು ಜನಸಾಮಾನ್ಯರ ಮನಗೆಲ್ಲುವ ಹಾಗೆ ಕಾರ್ಯನಿರ್ವಹಿಸಬೇಕು. ನಾವು ಸಂಘರ್ಷದ ಹಾದಿಯ ಮೂಲಕ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು. ಹಾಗಾಗಿ,ಚಿತ್ರದುರ್ಗದ ಸಮಾವೇಶಕ್ಕೆ ನಾವೆಲ್ಲರೂ ಬರಬೇಕು. ಈ ಸಮಾವೇಶದ ಮೂಲಕ ವಿಚಾರ ಬಿತ್ತುವ ಕಾರ್ಯ ಮಾಡಲಾಗುತ್ತಿದೆ' ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿ ನವಶಕ್ತಿ ಸಮಾವೇಶ ವಿರುದ್ಧ ಕಾಂಗ್ರೆಸ್ ಐಕ್ಯತಾ ಸಮಾವೇಶಕ್ಕೆ ಸಿದ್ಧತೆ

ಎಸ್​ಸಿ-ಎಸ್​ಟಿ ಸಂಖ್ಯಾಬಲ: 2011ರ ಜನಗಣತಿ ಅನುಸಾರ ರಾಜ್ಯದಲ್ಲಿ ಪ.ಜಾತಿ, ಪ.ಪಂಗಡದ ಶೇ. 24.1 ಜನರಿದ್ದಾರೆ. 2021ರ ಜನಗಣತಿ ಪ್ರಕಟಗೊಂಡರೆ ಜನಸಂಖ್ಯೆ ಹೆಚ್ಚಾಗಲಿದೆ. ಬೃಹತ್‌ ಪ್ರಮಾಣದ ಜನರ ಸಮಸ್ಯೆಗಳು ಮುಂದುವರೆಯಲಿದೆ. ಯಾವ ಸಮಸ್ಯೆಗಳೂ ಬಗೆಹರಿದಿಲ್ಲ. ದಲಿತರ ಸ್ಥಿತಿಗತಿ ಹೇಗಿದೆ?, ಸರ್ಕಾರ ಹೇಗೆ ಸ್ಪಂದಿಸುತ್ತಿದೆ ಎಂಬುದನ್ನು ಮನವರಿಕೆ ಮಾಡಿಕೊಡಲಾಗುವುದು. ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ ಮಂಡಿಸಬೇಕು. 2018ರ ಕಾಂಗ್ರೆಸ್‌ ಸರ್ಕಾರದ ಕೊನೆಯ ಬಜೆಟ್‌ನಲ್ಲಿ 30 ಸಾವಿರ ಕೋಟಿ ರೂ. ಅನುದಾನ ನೀಡಲಾಗಿತ್ತು. ಕಳೆದ 3 ವರ್ಷಗಳಿಂದ ಬಜೆಟ್‌ ಅನುದಾನ ಕಡಿತವಾಗಿದೆ. ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್‌ ಗಾತ್ರ 2.62 ಲಕ್ಷ ಕೋಟಿ. ಈ ಪೈಕಿ ಶೇ. 24.1 ಅಂದರೆ 42 ಸಾವಿರ ಕೋಟಿ ನೀಡಬೇಕಿತ್ತು. ಆದರೆ, 28 ಸಾವಿರ ಕೋಟಿ ಕಡಿಮೆ ನೀಡಲಾಗಿದೆ ಎಂಬ ವಿಚಾರವನ್ನು ಮುಂದಿಟ್ಟು ಸಮಾವೇಶದಲ್ಲಿ ಕಾಂಗ್ರೆಸ್ ನಾಯಕರು ಹೋರಾಟಕ್ಕೆ ಕರೆ ಕೊಡುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಐಕ್ಯತಾ ಸಮಾವೇಶದ ಮೂಲಕ ಹಿಂದುಳಿದ ವರ್ಗದ ಒಗ್ಗಟ್ಟು ಪ್ರದರ್ಶನ: ಪರಮೇಶ್ವರ್

Last Updated : Jan 8, 2023, 8:26 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.