ETV Bharat / state

ಇರೋದು 68 ಎಂಎಲ್ಎಗಳು ಸಿಎಂ ಕುರ್ಚಿಗೆ 100 ಆಕಾಂಕ್ಷಿಗಳು.. ಕಾಂಗ್ರೆಸ್ ಕಾಲೆಳೆದ ಬಿಜೆಪಿ! - ಸಿದ್ದರಾಮಯ್ಯ ಹಾಗೂ ಡಿಕೆಶಿ ಒಳ ಜಗಳ

ಕಾಂಗ್ರೆಸ್‌ ಪಕ್ಷದಲ್ಲಿ ಈಗ ದಿನಕ್ಕೊಬ್ಬರಂತೆ ಮುಖ್ಯಮಂತ್ರಿ ಆಕಾಂಕ್ಷಿಗಳು ಹುಟ್ಟಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದೊಳಗಿನ ಒಳ‌ಜಗಳ ಈಗ ಮತ್ತೊಂದು ಸ್ವರೂಪ ಪಡೆದಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಮೂಲ‌ ಕಾಂಗ್ರೆಸ್ಸಿಗರು ಒಟ್ಟಾಗುತ್ತಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ..

bjp
bjp
author img

By

Published : Jun 28, 2021, 8:27 PM IST

ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಇರೋದು 68 ಶಾಸಕರು. ಆದರೆ, ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಗಳು ಮಾತ್ರ ನೂರಕ್ಕೂ ಅಧಿಕವಾಗಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ಪಕ್ಷದೊಳಗಿನ ಒಳ‌ಜಗಳ ಈಗ ಮತ್ತೊಂದು ಸ್ವರೂಪ ಪಡೆದಿದೆ.

ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಮೂಲ‌ ಕಾಂಗ್ರೆಸ್ಸಿಗರು ಒಟ್ಟಾಗುತ್ತಿದ್ದಾರೆ. ಮುನಿಯಪ್ಪ ಅವರ ಮನೆಯಲ್ಲಿ ನಡೆದ ಗೌಪ್ಯ ಸಭೆಯೇ ಅದಕ್ಕೆ ಸಾಕ್ಷಿಯಾಗಿದೆ. ಉಸ್ತುವಾರಿ ಸುರ್ಜೇವಾಲ ಮಾತಿಗೆ ಕವಡೆ ಕಾಸಿನ‌ ಕಿಮ್ಮತ್ತು ಇಲ್ಲದಂತಾಗಿದೆ ಎಂದು ಟೀಕಿಸಿದೆ‌. ದುರ್ಬಲ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಈಗ ಸಿದ್ದರಾಮಯ್ಯ ಬೆಂಬಲಿಗರನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ.

ಇದರ ನಡುವೆ ಮೂಲ ಕಾಂಗ್ರೆಸ್‌ ನಾಯಕರು ಕೂಡ ತಮ್ಮ ದಾಳ ಉರುಳಿಸುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ಈಗ ದಿನಕ್ಕೊಬ್ಬರಂತೆ ಮುಖ್ಯಮಂತ್ರಿ ಆಕಾಂಕ್ಷಿಗಳು ಹುಟ್ಟಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಕಾಂಗ್ರೆಸ್ ಪಕ್ಷದೊಳಗಿನ ಒಳ‌ ಜಗಳ ಈಗ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಬಣವಿಲ್ಲ ಎಂದು ಪಂಚತಂತ್ರ ಕತೆ ಹೆಣೆಯುತ್ತಿದ್ದ ಸಿದ್ದರಾಮಯ್ಯ ಅವರೇ, ಮಾಜಿ ಸಚಿವ ಮುನಿಯಪ್ಪ‌‌‌ ಅವರ ನಿವಾಸದಲ್ಲಿ ಪರಮೇಶ್ವರ್, ಹರಿಪ್ರಸಾದ್ ಸಭೆ ನಡೆಸಿದ್ದು ಏಕೆ? ದೇಶದ ವಿರುದ್ಧ ಟೂಲ್‌ಕಿಟ್‌ ಮಾಡುವ ಬದಲು ತನ್ನಲ್ಲಿರುವ ಬಣಗಳ ಟೂಲ್‌ಕಿಟ್‌ ತಯಾರಿಸಿ ಎಂದು ಕಾಂಗ್ರೆಸ್ ನಾಯಕರ ಕಾಲೆಳೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.