ETV Bharat / state

ಕಾಂಗ್ರೆಸ್-ಜೆಡಿಎಸ್ ನಡುವೆ ಮತ್ತೆ ಚಿಗುರಿದ ಮೈತ್ರಿ ಸರ್ಕಾರದ ಕನಸು... ಬೈ ಎಲೆಕ್ಷನ್​ನಲ್ಲಿ ಒಳ ಒಪ್ಪಂದ? - ಕರ್ನಾಟಕ ಉಪಚುನಾವಣೆ

ಕಾಂಗ್ರೆಸ್ ಅಭ್ಯರ್ಥಿ ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ಹಸ್ತಕ್ಕೆ ಜೆಡಿಎಸ್ ಬೆಂಬಲ ನೀಡುವ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಗಳಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ತೆನೆ ಹೊತ್ತ ಮಹಿಳೆ ಚಿನ್ಹೆಗೆ ಬೆಂಬಲ ನೀಡುವ ಬಗ್ಗೆ ಉಭಯ ಪಕ್ಷಗಳ ಮುಖಂಡರ ನಡುವೆ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ.

Congress-JDS  alliance
Congress-JDS alliance
author img

By

Published : Dec 3, 2019, 3:05 AM IST

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ರಾಜ್ಯದಲ್ಲಿಮತ್ತೆ ಮೈತ್ರಿ ಸರ್ಕಾರ ರಚನೆಗೆ ಮುಂದಾಗಿದ್ದು ಉಪ ಕದನದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಕೊನೆಯ ಕ್ಷಣದಲ್ಲಿ ಒಳ ಒಪ್ಪಂದ ಮಾಡಿಕೊಂಡು ಚುನಾವಣೆ ತಂತ್ರಗಳನ್ನು ಹೆಣೆಯತೊಡಗಿವೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ಹಸ್ತಕ್ಕೆ ಜೆಡಿಎಸ್ ಬೆಂಬಲ ನೀಡುವ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಗಳಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ತೆನೆ ಹೊತ್ತ ಮಹಿಳೆ ಚಿನ್ಹೆಗೆ ಬೆಂಬಲ ನೀಡುವ ಬಗ್ಗೆ ಉಭಯ ಪಕ್ಷಗಳ ಮುಖಂಡರ ನಡುವೆ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರದಲ್ಲಿನ ಬದಲಾದ ರಾಜಕೀಯ ಬೆಳವಣಿಗೆಗಳಿಂದ ರಾಜ್ಯದಲ್ಲಿಯೂ ಬಿಜೆಪಿಯೇತರ ಸರ್ಕಾರ ರಚನೆ ಮಾಡುವ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಾಯಕರಲ್ಲಿ ಹೊಸ ಆಶಾಭಾವನೆ ಮೂಡಿದಂತಿದೆ.

ರಾಜ್ಯದಲ್ಲಿ ಡಿ 5ರಂದು 15 ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಯಲ್ಲಿ ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದ ಮಾಜಿ ಮೈತ್ರಿ ಪಕ್ಷಗಳು ಮತ್ತೆ ಮರು ಮೈತ್ರಿ ಮಾಡಿಕೊಂಡು ದೋಸ್ತಿ ಸರ್ಕಾರ ರಚನೆಯ ಕಸರತ್ತು ನಡೆಸುವ ಕಾರ್ಯ ತಂತ್ರ ರೂಪಿಸುತ್ತಿದ್ದಾರೆ.

ಉಪ ಚುನಾವಣೆಯಲ್ಲಿ ಬಿಜೆಪಿ 6 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲದಂತೆ ನೋಡಿಕೊಳ್ಳಲು 15 ಕ್ಷೇತ್ರಗಳಲ್ಲೂ ಒಳ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್ ಮತ್ತು ಜೆಡಿಎಸ್ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲಲು ಚುನಾವಣೆ ತಂತ್ರಗಾರಿಕೆ ಹೆಣೆಯುತ್ತಿದ್ದಾರೆನ್ನಲಾಗಿದೆ.

ಬೆಂಗಳೂರಿನ ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಹುಣಸೂರು, ಕೆ.ಆರ್ ಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವು ಕಾಂಗ್ರೆಸ್‌ನ ಬೆಂಬಲವನ್ನು ಕೋರಿದೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ಪಕ್ಷವು ಶಿವಾಜಿನಗರ, ಚಿಕ್ಕಬಳ್ಳಾಪುರ, ಕೆ.ಆರ್ ಪುರ, ಅಥಣಿ, ಗೋಕಾಕ್, ಕಾಗವಾಡ, ಹಿರೇಕೇರಿ, ಯಲ್ಲಾಪುರ, ರಾಣೆಬೆನ್ನೂರು ಕ್ಷೇತ್ರಗಳಲ್ಲಿ ಜೆಡಿಎಸ್ ಬೆಂಬಲವನ್ನು ಕೋರಿದೆ ಎನ್ನಲಾಗಿದೆ.

ಉಪ ಚುನಾವಣೆಯ ಕೊನೆಯ ಹಂತದಲ್ಲಿ ಅಚ್ಚರಿಯ ರೀತಿಯಲ್ಲಿ ಮಾಜಿ ದೋಸ್ತಿಗಳು ಬಿಜೆಪಿ ವಿರುದ್ಧ ಮತ್ತೆ ಒಂದಾಗಿವೆ. ಚುನಾವಣೆಗೆ ಮಂಗಳವಾರ ಸಂಜೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಉಳಿದ ಒಂದು ದಿನದಲ್ಲಿ ಪಕ್ಷದ ಕಾರ್ಯಕರ್ತರಿಗೆ ಮೈತ್ರಿಯ ಸಂದೇಶ ರವಾನಿಸುವ ರಾಜಕೀಯ ಚಟುವಟಿಕೆಗಳು ಕಾಂಗ್ರೆಸ್ ಮತ್ತು ಜೆಡಿಎಸ್​ನಲ್ಲಿ ಪರೋಕ್ಷವಾಗಿ ನಡೆಯುತ್ತಿವೆ.

Intro:ಕಾಂಗ್ರೆಸ್ - ಜೆಡಿಎಸ್ ನಡುವೆ ಮತ್ತೆ ಚಿಗುರಿದ ಮೈತ್ರಿ ಸರಕಾರದ ಕನಸು..ಬೈ ಎಲೆಕ್ಷನ್ನಲ್ಲಿ ಒಳ ಒಪ್ಪಂದ..?

ಬೆಂಗಳೂರು :

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ರಾಜ್ಯದಲ್ಲಿಮತ್ತೆ ಮೈತ್ರಿ ಸರಕಾರ ರಚನೆಗೆ ಮುಂದಾಗಿದ್ದು ಉಪ ಕದನದಲ್ಲಿ ಬಿಜೆಪಿ ಅಭ್ಯರ್ಥಿ ಗಳನ್ನು ಸೋಲಿಸಲು ಕೊನೆಯ ಕ್ಷಣದಲ್ಲಿ ಒಳ ಒಪ್ಪಂದ ಮಾಡಿಕೊಂಡು ಚುನಾವಣೆ ತಂತ್ರಗಳನ್ನು ಹೆಣೆಯತೊಡಗಿವೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ಹಸ್ತಕ್ಕೆ ಜೆಡಿಎಸ್ ಬೆಂಬಲ ನೀಡುವ ಹಾಗು ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಗಳಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ತೆನೆ ಹೊತ್ತ ಮಹಿಳೆ ಚಿನ್ಹೆ ಗೆ ಬೆಂಬಲ ನೀಡುವ ಬಗ್ಗೆ ಉಭಯ ಪಕ್ಷಗಳ ಮುಖಂಡರ ನಡುವೆ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ.

Body: ಮಹಾರಾಷ್ಟ್ರ ದಲ್ಲಿನ ಬದಲಾದ ರಾಜಕೀಯ ಬೆಳವಣಿಗೆಗಳಿಂದ ರಾಜ್ಯದಲ್ಲಿಯೂ ಬಿಜೆಪಿಯೇತರ ಸರಕಾರ ರಚನೆ ಮಾಡುವ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಾಯಕರಲ್ಲಿ ಹೊಸ ಆಶಾಭಾವನೆ ಮೂಡಿದಂತಿದೆ.

ರಾಜ್ಯದಲ್ಲಿ ಡಿ ೫ರಂದು ೧೫ ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಯಲ್ಲಿ ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದ ಮಾಜಿ ಮೈತ್ರಿ ಪಕ್ಷಗಳು ಮತ್ತೆ ಮರು ಮೈತ್ರಿ ಮಾಡಿಕೊಂಡು ದೋಸ್ತಿ ಸರಕಾರ ರಚನೆಯ ಕಸರತ್ತು ನಡೆಸುವ ಕಾರ್ಯ ತಂತ್ರ ರೂಪಿಸುತ್ತಿದ್ದಾರೆ.

ಉಪ ಚುನಾವಣೆಯಲ್ಲಿ ಬಿಜೆಪಿ ೬ ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲದಂತೆ ನೋಡಿಕೊಳ್ಳಲು ೧೫ ಕ್ಷೇತ್ರಗಳಲ್ಲೂ ಒಳ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್ ಮತ್ತು ಜೆಡಿಎಸ್ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲಲು ಚುನಾವಣೆ ತಂತ್ರಗಾರಿಕೆ ಹೆಣೆಯುತ್ತಿದ್ದಾರೆನ್ನಲಾಗಿದೆ.

ಬೆಂಗಳೂರಿನ ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಹುಣಸೂರು, ಕೆ.ಆರ್ ಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವು ಕಾಂಗ್ರೆಸ್‌ನ ಬೆಂಬಲವನ್ನು ಕೋರಿದೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ಪಕ್ಷವು ಶಿವಾಜಿನಗರ, ಚಿಕ್ಕಬಳ್ಳಾಪುರ, ಕೆ.ಆರ್ ಪುರ, ಅಥಣಿ, ಗೋಕಾಕ್, ಕಾಗವಾಡ, ಹಿರೇಕೇರಿ, ಯಲ್ಲಾಪುರ, ರಾಣೆಬೆನ್ನೂರು ಕ್ಷೇತ್ರಗಳಲ್ಲಿ ಜೆಡಿಎಸ್ ಬೆಂಬಲವನ್ನು ಕೋರಿದೆ ಎನ್ನಲಾಗಿದೆ.

ಉಪ ಚುನಾವಣೆಯ ಕೊನೆಯ ಹಂತದಲ್ಲಿ ಅಚ್ಚರಿಯ ರೀತಿಯಲ್ಲಿ ಮಾಜಿ ದೋಸ್ತಿಗಳು ಬಿಜೆಪಿ ವಿರುದ್ಧ ಮತ್ತೆ ಒಂದಾಗಿವೆ. ಚುನಾವಣೆಗೆ ಮಂಗಳವಾರ ಸಂಜೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.ಉಳಿದ ಒಂದು ದಿನದಲ್ಲಿ ಪಕ್ಷದ ಕಾರ್ಯಕರ್ತರಿಗೆ ಮೈತ್ರಿಯ ಸಂದೇಶ ರವಾನಿಸುವ ರಾಜಕೀಯ ಚಟುವಟಿಕೆಗಳು ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ಪರೋಕ್ಷವಾಗಿ ನಡೆಯುತ್ತಿವೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.