ETV Bharat / state

ಡಿಸಿಎಂ ಕಾರಜೋಳ ವಿರುದ್ಧ ಕಾಂಗ್ರೆಸ್​​ನಿಂದ ಚುನಾವಣಾ ಆಯೋಗಕ್ಕೆ ದೂರು - ಪ್ರಕಾಶ್​ ರಾಥೋಡ್

ಅಥಣಿಯಲ್ಲಿ ಮತದಾರರಿಗೆ ದುಡ್ಡು ಹಂಚುತ್ತಿದ್ದಾರೆ ಎಂದು ಆರೋಪಿಸಿ ಡಿಸಿಎಂ ಗೋವಿಂದ ಕಾರಜೋಳ ವಿರುದ್ಧ ಕಾಂಗ್ರೆಸ್ ಮುಖಂಡರ ನಿಯೋಗ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

Prakash Rathod
ಪ್ರಕಾಶ್ ರಾಥೋಡ್​
author img

By

Published : Nov 27, 2019, 8:56 PM IST

ಬೆಂಗಳೂರು: ದುಡ್ಡು ಹಂಚೋ ಮೂಲಕ ಡಿಸಿಎಂ ಗೋವಿಂದ ಕಾರಜೋಳ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರ ನಿಯೋಗ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್​

ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್​ ನೇತೃತ್ವದ ನಿಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್​ಗೆ ದೂರು ಸಲ್ಲಿಸಿತು. ಅಥಣಿಯಲ್ಲಿ ಮತದಾರರಿಗೆ ಡಿಸಿಎಂ ಕಾರಜೋಳ ದುಡ್ಡು ಹಂಚುತ್ತಿದ್ದಾರೆ ಎಂದು ಆರೋಪಿಸಿ ವಿಡಿಯೋ ದಾಖಲೆ ಸಮೇತ ದೂರು ಸಲ್ಲಿಕೆ ಮಾಡಲಾಯಿತು.

ದೂರು ಸಲ್ಲಿಸಿದ ನಂತರ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಡಿಸಿಎಂ ಗೋವಿಂದ ಕಾರಜೋಳ ಅವರು ಅಥಣಿ ಕ್ಷೇತ್ರದಲ್ಲಿ ಮತದಾರರಿಗೆ ಹಣ ನೀಡಿ ಆಮಿಷ ಒಡ್ಡಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಜೊತೆಗೆ ಈಗಿನಿಂದಲೇ ಅವರಿಗೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ಚುನಾವಣಾ ಆಯೋಗ ನೋಟಿಸ್ ನೀಡಬೇಕು ಎಂದು ಮನವಿ ಮಾಡಿದ್ದೇವೆ ಎಂದರು.

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಮಂತ್ರಿಗಳು, ನಾಯರು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ. ಆದರೆ ಚುನಾವಣಾ ಆಯೋಗ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿಲ್ಲ. ಮುಂದಾದರೂ ಕಠಿಣ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದೇವೆ ಎಂದರು.

Intro:newsBody:ಡಿಸಿಎಂ ಗೋವಿಂದ ಕಾರಜೋಳ ವಿರುದ್ಧ ಕಾಂಗ್ರೆಸ್ ನಾಯಕರಿಂದ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ಸಲ್ಲಿಸಿತು.
ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಆಗಮಿಸಿದ ವಿಧಾನಪರಿಷತ್ ಸದಸ್ಯ ಪ್ರಕಾಶ್ ನೇತೃತ್ವದ ನಿಯೋಗ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಗೆ ದೂರು ಸಲ್ಲಿಸಿತು. ಅಥಣಿಯಲ್ಲಿ ಮತದಾರರಿಗೆ ದುಡ್ಡು ನೀಡುತ್ತಿರೋ ಡಿಸಿಎಂ ಕಾರಜೋಳ ವಿರುದ್ಧ ವಿಡಿಯೋ ದಾಖಲೆ ಸಮೇತ ದೂರು ಸಲ್ಲಿಕೆ ಮಾಡಲಾಯಿತು.
ದುಡ್ಡು ಹಂಚೋ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿರೋ ಡಿಸಿಎಂ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಮುಖಂಡರ ನಿಯೋಗವು ಚುನಾವಣಾ ಆಯೋಗವು ಆಗ್ರಹಿಸಿತು.
ನಿಯೋಗದಲ್ಲಿ ಪ್ರಕಾಶ ರಾಥೋಡ್ ಜತೆ ಸೂರಜ್ ಹೆಗಡೆ ಹಾಗೂ ಇತರೆ ನಾಯಕರು ಉಪಸ್ಥಿತರಿದ್ದರು.
ದೂರು ಸಲ್ಲಿಸಿದ ನಂತರ ಮಾತನಾಡಿದ ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಡಿಸಿಎಂ ಗೋವಿಂದ ಕಾರಜೋಳ ಅವರು ಅಥಣಿ ಕ್ಷೇತ್ರದಲ್ಲಿ ಮತದಾರರಿಗೆ ಹಣವನ್ನು ನೀಡಿ ಆಮಿಷ ಒಡ್ಡಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಜೊತೆಗೆ ಈಗಿನಿಂದಲೇ ಅವರಿಗೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಬಾರದೆಂದು ಅವರಿಗೆ ಚುನಾವಣಾ ಆಯೋಗ ನೋಟೀಸ್ ನೀಡಬೇಕು ಎಂದಿದ್ದೇವೆ ಎಂದರು.
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಮಂತ್ರಿಗಳು , ನಾಯರು ಹಣದ ಹೊಳೆಯನ್ನೆ ಹರಿಸುತ್ತಿದ್ದಾರೆ. ಆದರೆ ಚುನಾವಣಾ ಆಯೋಗ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿಲ್ಲ. ಮುಂದಾದರೂ ಕಟಿನ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದೇವೆ ಎಂದು ವಿವರಿಸಿದರು.

Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.