ಬೆಂಗಳೂರು: ಆಸ್ತಿ ತೆರಿಗೆ ಪಾವತಿಸಲು ನಿಗದಿಪಡಿಸಿರುವ ದಿನಾಂಕವನ್ನು ಮೂರು ತಿಂಗಳವರೆಗೆ ವಿಸ್ತರಿಸುವಂತೆ ಆದೇಶ ನೀಡಬೇಕೆಂದು ಕೋರಿ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಮುಖ್ಯ ಕಾರ್ಯದರ್ಶಿ ರವಿಕುಮಾರ್ಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಬಿಬಿಎಂಪಿ ಆಸ್ತಿ ತೆರಿಗೆಯನ್ನು ಪಾವತಿಸಲು ಪ್ರತಿ ವರ್ಷದಂತೆ ಏಪ್ರಿಲ್ 30 ಕೊನೆಯ ದಿನಾಂಕವಾಗಿರುತ್ತದೆ. ಪ್ರತಿ ವರ್ಷ ಏಪ್ರಿಲ್ 30 ರೊಳಗೆ ಪಾವತಿಸುವವರಿಗೆ ಶೇ.5 ರಷ್ಟು ರಿಯಾಯಿತಿ ಸಹ ನೀಡಲಾಗುತ್ತಿರುತ್ತದೆ. ಆದರೆ ಕಳೆದ ವರ್ಷದಿಂದ ಕೋವಿಡ್ ಸೋಂಕಿನ ಕಾರಣ ಮಹಾನಗರದ ಎಲ್ಲ ವರ್ಗದ ಜನಸಾಮಾನ್ಯರ ಮೇಲೆ ತೀವ್ರ ಪರಿಣಾಮ ಬೀರಿದ್ದು, ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುತ್ತಾರೆ. ಅಲ್ಲದೇ ಈಗ ಪ್ರಸ್ತುತ ಕೋವಿಡ್ ಎರಡನೇ ಅಲೆಯ ಕಾರಣ ಕಳೆದ ಎರಡು ತಿಂಗಳಿಂದಲೂ ಸಹ ವ್ಯಾಪಾರ ವಹಿವಾಟು ಸಮರ್ಪಕವಾಗಿ ನಡೆಯದೇ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುತ್ತಾರೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಓದಿ:ಸರ್ಕಾರಿ ಕೋಟಾದಡಿ ದಾಖಲಾದ್ರೂ ಪ್ಲಾಸ್ಮಾ, ರೆಮ್ಡಿಸಿವಿರ್ ಹೆಸರಲ್ಲಿ ಸೋಂಕಿತರಿಂದ ಹಣ ವಸೂಲಿ
ಇದರಿಂದ ಪ್ರತಿ ಪಾವತಿಸಬೇಕಾಗಿರುವ ಆಸ್ತಿ ತೆರಿಗೆಯನ್ನು ಪಾವತಿಸಲು ನಿಗದಿಪಡಿಸಲಾಗಿರುವ ದಿನಾಂಕವನ್ನು ಮೂರು ತಿಂಗಳವರೆಗೆ ವಿಸ್ತರಿಸಿ ತೆರಿಗೆ ಪಾವತಿಸಲು ಅವಕಾಶ ಮಾಡಿಕೊಡಬೇಕೆಂದು ಪತ್ರದ ಮೂಲಕ ಕೋರಿದ್ದಾರೆ.