ETV Bharat / state

ಕಾಂಗ್ರೆಸ್ ಶಾಸಕಾಂಗ ಸಭೆ: ಪಕ್ಷ ಸಂಘಟನೆ, ಬಲವರ್ಧನೆ ಕುರಿತು ಚರ್ಚೆ

ಈ ಸಭೆಯಲ್ಲಿ ಪ್ರಮುಖವಾಗಿ ತಳಮಟ್ಟದಿಂದ ಪಕ್ಷ ಸಂಘಟನೆ, ಪಕ್ಷದ ಸದಸ್ಯತ್ವ ಅಭಿಯಾನದ ಯಶಸ್ಸು, ನಾಯಕರಿಂದ ರಾಜ್ಯ ಪ್ರವಾಸ, ವಿವಿಧ ಜಿಲ್ಲೆಗಳಲ್ಲಿ ಸ್ಥಳೀಯ ಸಮಸ್ಯೆಯನ್ನು ಆಧರಿಸಿ ಹೋರಾಟ ರೂಪಿಸುವುದು, ತಳಮಟ್ಟದ ಕಾರ್ಯಕರ್ತರಿಗೆ ಉತ್ತೇಜನ ನೀಡುವುದು ಹಾಗೂ ಪಕ್ಷದ ಜವಾಬ್ದಾರಿಯನ್ನು ವಿವಿಧ ವಿಭಾಗಗಳನ್ನು ಮಾಡಿ ಹಂಚಿಕೆ ಮಾಡುವ ಕುರಿತು ಮಹತ್ವದ ಚರ್ಚೆ ನಡೆದಿದೆ.

ಕಾಂಗ್ರೆಸ್ ಶಾಸಕಾಂಗ ಸಭೆ
ಕಾಂಗ್ರೆಸ್ ಶಾಸಕಾಂಗ ಸಭೆ
author img

By

Published : Mar 21, 2022, 10:39 PM IST

ಬೆಂಗಳೂರು: ರಾಜ್ಯ ಮಟ್ಟದಲ್ಲಿ ಪಕ್ಷ ಸಂಘಟನೆ ವಿಚಾರವಾಗಿ ಮಹತ್ವದ ಚರ್ಚೆ ನಡೆಸುವ ಸಲುವಾಗಿ ಕಾಂಗ್ರೆಸ್ ಶಾಸಕಾಂಗ ಸಭೆ ಕರೆಯಲಾಗಿತ್ತು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಂಜೆ ನಗರದ ಖಾಸಗಿ ಹೋಟೆಲ್​​​ನಲ್ಲಿ ಸಭೆ ನಡೆಯಿತು.

ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವನ್ನು ಸಜ್ಜುಗೊಳಿಸುವುದು ಹಾಗೂ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಲು ಶಾಸಕಾಂಗ ಸಭೆ ಕರೆಯಲಾಗಿತ್ತು. ಅತ್ಯಂತ ಪ್ರಮುಖವಾಗಿ ತಳಮಟ್ಟದಿಂದ ಪಕ್ಷ ಸಂಘಟನೆ, ಪಕ್ಷದ ಸದಸ್ಯತ್ವ ಅಭಿಯಾನದ ಯಶಸ್ಸು, ನಾಯಕರಿಂದ ರಾಜ್ಯ ಪ್ರವಾಸ, ವಿವಿಧ ಜಿಲ್ಲೆಗಳಲ್ಲಿ ಸ್ಥಳೀಯ ಸಮಸ್ಯೆಯನ್ನು ಆಧರಿಸಿ ಹೋರಾಟ ರೂಪಿಸುವುದು, ತಳಮಟ್ಟದ ಕಾರ್ಯಕರ್ತರಿಗೆ ಉತ್ತೇಜನ ನೀಡುವುದು ಹಾಗೂ ಪಕ್ಷದ ಜವಾಬ್ದಾರಿಯನ್ನು ವಿವಿಧ ವಿಭಾಗಗಳನ್ನು ಮಾಡಿ ಹಂಚಿಕೆ ಮಾಡುವ ಕುರಿತು ಮಹತ್ವದ ಚರ್ಚೆ ನಡೆದಿದೆ.

ಮಾರ್ಚ್ 28ರಂದು ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಪದಗ್ರಹಣ ಸಮಾರಂಭ ಹಮ್ಮಿಕೊಂಡಿದ್ದು, ಇದನ್ನು ಒಂದು ಶಕ್ತಿ ಪ್ರದರ್ಶನದ ರೀತಿ ತೋರ್ಪಡಿಸಲು ಪಕ್ಷ ಚಿಂತನೆ ನಡೆಸಿದೆ. ಅದೇ ದಿನ ಕಾಂಗ್ರೆಸ್ ಪಕ್ಷದ ಚುನಾವಣಾ ಸಿದ್ಧತೆ ಕುರಿತ ಕೆಲ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಸಂಬಂಧ ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆದಿದೆ.

ರಾಜ್ಯದ ವಿವಿಧ ಸಮಸ್ಯೆಗಳನ್ನು ಮುಂದಿಟ್ಟು ಸರ್ಕಾರವನ್ನು ಅಧಿವೇಶನ ಸಂದರ್ಭದಲ್ಲಿ ಇಕ್ಕಟ್ಟಿಗೆ ಸಿಲುಕಿಸುವ ಸಂಬಂಧ ಚರ್ಚೆ ನಡೆದಿದೆ ಎನ್ನಲಾಗಿದೆ. ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಜಾರಿ ಮತ್ತು ತ್ವರಿತ ಕಾಮಗಾರಿ ಕೈಗೊಳ್ಳುವ ಸಂಬಂಧ ಮಹತ್ವದ ಚರ್ಚೆ ನಡೆದಿದೆ.

ಜನರ ಮನಸ್ಸಿನಲ್ಲಿ ಉಳಿಯುವ ವಿವಿಧ ವಿಚಾರಗಳ ಕುರಿತು ಹೋರಾಟದ ರೂಪುರೇಷೆ ಹೆಣೆಯುವ ಜೊತೆಗೆ ಅಂತದ್ದೇ ಮಹತ್ವದ ವಿಚಾರವನ್ನು ಮುಂದಿಟ್ಟು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ನಿರ್ಧಾರ ಕೈಗೊಳ್ಳಲಾಗಿದೆ. ಚುನಾವಣೆ ವರ್ಷದಲ್ಲಿ ಜನರಿಗೆ ಹತ್ತಿರವಾಗುವ ಕಾರ್ಯಕ್ರಮವನ್ನು ರೂಪಿಸುವ ನಿಟ್ಟಿನಲ್ಲಿ ವಿಶೇಷ ಸಮಿತಿಗಳನ್ನು ರಚಿಸುವ ಸಂಬಂಧವೂ ಚರ್ಚೆ ನಡೆದಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ರಾಜ್ಯದ ವಿವಿಧ ಭಾಗಗಳಿಗೆ ಪ್ರವಾಸ ಕೈಗೊಳ್ಳುವ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ವಿಶೇಷ ಜವಾಬ್ದಾರಿ ನೀಡಲು ಸಭೆಯಲ್ಲಿ ಚರ್ಚೆ ನಡೆದಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಮಾಜಿ ಸಚಿವರಾದ ಎಚ್​​.ಕೆ. ಪಾಟೀಲ್, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ದಿನೇಶ್ ಗುಂಡೂರಾವ್, ಯು.ಟಿ. ಖಾದರ್, ಸಲೀಂ ಅಹಮದ್, ಸತೀಶ್ ಜಾರಕಿಹೊಳಿ, ವಿಧಾನಸಭೆ ಪ್ರತಿ ಪಕ್ಷದ ಮುಖ್ಯ ಸಚೇತಕ ಅಜಯ್ ಸಿಂಗ್ ಮತ್ತಿತರರು ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.