ETV Bharat / state

ಜಸ್ವಂತ್ ಸಿಂಗ್ ನಿಧನಕ್ಕೆ ಸಿದ್ದು, ಪರಂ ಸೇರಿ ಇತರ ಕಾಂಗ್ರೆಸ್ ನಾಯಕರ ಸಂತಾಪ - ಸಿದ್ದರಾಮಯ್ಯ ಲೆಟೆಸ್ಟ್ ಟ್ವೀಟ್

ಜಸ್ವಂತ್ ಸಿಂಗ್ ಅವರ ದಿಢೀರ್ ಅಗಲಿಕೆ ತೀವ್ರ ಬೇಸರ ತಂದಿದೆ. ದೇವರು ಅವರ ಕುಟುಂಬ ಸದಸ್ಯರು ಹಾಗೂ ಹಿತೈಷಿಗಳಿಗೆ ನೋವನ್ನು ಸಹಿಸುವ ಶಕ್ತಿ ನೀಡಲಿ..

Congress leaders Condolences to the death of Jaswant Singh
ಜಸ್ವಂತ್ ಸಿಂಗ್ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರ ಸಂತಾಪ
author img

By

Published : Sep 27, 2020, 3:05 PM IST

ಬೆಂಗಳೂರು: ಕೇಂದ್ರದ ಮಾಜಿ ರಕ್ಷಣಾ ಸಚಿವ ಜಸ್ವಂತ್ ಸಿಂಗ್ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಜಸ್ವಂತ್ ಸಿಂಗ್ ದಿಲ್ಲಿಯಲ್ಲಿ ನಿಧನ ಹೊಂದಿದ್ದಾರೆ. ಇವರು ತಮ್ಮ ಸಾಮಾಜಿಕ ಹಾಗೂ ರಾಜಕೀಯ ನಿಲುವುಗಳಿಂದಾಗಿ ಎಲ್ಲಾ ಪಕ್ಷಗಳಲ್ಲಿಯೂ ಅಭಿಮಾನಿಗಳನ್ನು ಹೊಂದಿದ್ದರು. ಸದ್ಯ ಇವರ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದಾರೆ.

siddaramaiah tweet
ಸಿದ್ದರಾಮಯ್ಯ ಟ್ವೀಟ್

ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಜಸ್ವಂತ್ ಸಿಂಗ್ ಅವರ ದಿಢೀರ್ ಅಗಲಿಕೆ ತೀವ್ರ ಬೇಸರ ತಂದಿದೆ. ದೇವರು ಅವರ ಕುಟುಂಬ ಸದಸ್ಯರು ಹಾಗೂ ಹಿತೈಷಿಗಳಿಗೆ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ತಿಳಿಸಿದ್ದಾರೆ.

g parameshwar tweet
ಜಿ ಪರಮೇಶ್ವರ್ ಟ್ವೀಟ್

ಮಾಜಿ ಡಿಸಿಎಂ ಡಾ ಜಿ. ಪರಮೇಶ್ವರ್ ಟ್ವೀಟ್ ಮಾಡಿದ್ದು, ಜಸ್ವಂತ್ ಸಿಂಗ್ ಅವರ ನಿಧನದ ಸುದ್ದಿ ಕೇಳಿ ಅತೀವ ಬೇಸರವಾಗಿದೆ. ದೇವರು ಅವರ ಕುಟುಂಬ ಸದಸ್ಯರು ಹಾಗೂ ಸ್ನೇಹಿತರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದ ಇತರೆ ನಾಯಕರು ಕೂಡ ಜಸ್ವಂತ್ ಸಿಂಗ್ ಅಗಲಿಕೆಗೆ ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.