ಬೆಂಗಳೂರು: ದಲಿತ ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್. ಆರ್. ಪಾಟೀಲ್, ಮಾಜಿ ಡಿಸಿಎಂ ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷರು, ಮಾಜಿ ಸಚಿವರು ಹಾಗೂ ಶಾಸಕರು ಸಿದ್ದಲಿಂಗಯ್ಯ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.
ಸಿದ್ದರಾಮಯ್ಯ ಸಂತಾಪ:
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕಾವ್ಯವನ್ನೇ ಖಡ್ಗವನ್ನಾಗಿಸಿ ಸಾಮಾಜಿಕ ಸಮಾನತೆಯ ಹೋರಾಟವನ್ನು ಮುನ್ನಡೆಸಿದ್ದ ದಲಿತ ಕವಿ, ವಿಧಾನಪರಿಷತ್ ಮಾಜಿ ಸದಸ್ಯ ಮತ್ತು ನನ್ನ ಆತ್ಮೀಯ ಮಿತ್ರ ಸಿದ್ದಲಿಂಗಯ್ಯ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಸಾವನ್ನು ಮೀರಿದ ಸಾಹಿತ್ಯದ ಮೂಲಕ ಅವರು ಅಜರಾಮರ. ಅವರ ಕುಟುಂಬದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದಿದ್ದಾರೆ.
ನನ್ನ ಬಹುಕಾಲದ ಮಿತ್ರ ಸಿದ್ದಲಿಂಗಯ್ಯ ಅವರ ಸಾವು ನನ್ನ ಪಾಲಿಗೆ ಆಘಾತಕಾರಿಯಾದುದು ಮಾತ್ರವಲ್ಲ ಅನಿರೀಕ್ಷಿತವೂ ಹೌದು. 66 ಸಾಯುವ ವಯಸ್ಸಾಗಿರಲಿಲ್ಲ. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಲಿಂಗಯ್ಯ ಅವರ ಆರೋಗ್ಯದಲ್ಲಿ ಸುಧಾರಣೆಯಾಗುತ್ತಿದೆ, ಶೀಘ್ರ ಮನೆಗೆ ಹಿಂದಿರುಗುತ್ತಾರೆ ಎಂದು ಅವರು ಗೆಳೆಯರು ಹೇಳುತ್ತಿದ್ದರು. ಆದರೆ ಅವರು ಸಾವಿನ ಮನೆಗೆ ತೆರಳಿದ್ದಾರೆ.
ಜನತಾ ಪಕ್ಷದ ಆಳ್ವಿಕೆಯ ಕಾಲದಲ್ಲಿ ಆಗಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಸಣ್ಣ ಪ್ರಾಯದ ಕವಿ ಸಿದ್ದಲಿಂಗಯ್ಯನವರನ್ನು ವಿಧಾನಪರಿಷತ್ಗೆ ನಾಮ ನಿರ್ದೇಶನ ಮಾಡಿದ್ದರು. ಆ ಕಾಲದಿಂದ ಸಿದ್ದಲಿಂಗಯ್ಯ ನನಗೆ ಪರಿಚಿತರು. ಹೊಲೆ ಮಾದಿಗರ ಹಾಡು ಕವನ ಸಂಕಲನದ ಮೂಲಕ ಆ ಕಾಲದಲ್ಲಿಯೇ ಮನೆಮಾತಾಗಿದ್ದ ಸಿದ್ದಲಿಂಗಯ್ಯ ಸಾಹಿತ್ಯವನ್ನು ಸಾಮಾಜಿಕ ಬದಲಾವಣೆಯ ಅಸ್ತ್ರವನ್ನಾಗಿ ಮಾಡಿ ಸಮಾನತೆಯ ಹೋರಾಟ ಮುನ್ನಡೆಸಿದವರು.
ಸಿದ್ದಲಿಂಗಯ್ಯನವರು ಇನ್ನಿಲ್ಲವಾದರೂ ಅವರು ಬರೆದಿರುವ ಸಾಹಿತ್ಯದ ಮೂಲಕ ಸದಾ ನಮ್ಮ ನೆನಪಲ್ಲಿರುತ್ತಾರೆ. ಅವರ ಅಗಲಿಕೆಯ ದುಃಖದಲ್ಲಿರುವ ಕುಟುಂಬದ ಸದಸ್ಯರಿಗೆ ನನ್ನ ಸಂತಾಪಗಳು. ಅವರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದಿದ್ದಾರೆ.
ಡಾ. ಸಿದ್ದಲಿಂಗಯ್ಯನವರ ಗೌರವಾರ್ಥವಾಗಿ ಜ್ಞಾನಭಾರತಿಯ ಬಳಿ ಸ್ಮಾರಕವನ್ನು ಸ್ಥಾಪಿಸಬೇಕು. ಮರಣೋತ್ತರವಾಗಿ ಅವರನ್ನು ರಾಷ್ಟ್ರಕವಿ ಎಂದು ಘೋಷಿಸಿ ಅವರ ಸೇವೆಯನ್ನು ಗೌರವಿಸಬೇಕೆಂದು ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
-
ಕಾವ್ಯವನ್ನೇ ಖಡ್ಗವನ್ನಾಗಿಸಿ ಸಾಮಾಜಿಕ ಸಮಾನತೆಯ ಹೋರಾಟವನ್ನು ಮುನ್ನಡೆಸಿದ್ದ ದಲಿತ ಕವಿ, ವಿಧಾನಪರಿಷತ್‌ನ ಮಾಜಿ ಸದಸ್ಯ ಮತ್ತು ನನ್ನ ಆತ್ಮೀಯ ಮಿತ್ರ ಸಿದ್ದಲಿಂಗಯ್ಯನವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
— Siddaramaiah (@siddaramaiah) June 11, 2021 " class="align-text-top noRightClick twitterSection" data="
ಸಾವನ್ನು ಮೀರಿದ
ಸಾಹಿತ್ಯದ ಮೂಲಕ ಅವರು ಅಜರಾಮರ.
ಅವರ ಕುಟುಂಬದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/ivXQqgzy84
">ಕಾವ್ಯವನ್ನೇ ಖಡ್ಗವನ್ನಾಗಿಸಿ ಸಾಮಾಜಿಕ ಸಮಾನತೆಯ ಹೋರಾಟವನ್ನು ಮುನ್ನಡೆಸಿದ್ದ ದಲಿತ ಕವಿ, ವಿಧಾನಪರಿಷತ್‌ನ ಮಾಜಿ ಸದಸ್ಯ ಮತ್ತು ನನ್ನ ಆತ್ಮೀಯ ಮಿತ್ರ ಸಿದ್ದಲಿಂಗಯ್ಯನವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
— Siddaramaiah (@siddaramaiah) June 11, 2021
ಸಾವನ್ನು ಮೀರಿದ
ಸಾಹಿತ್ಯದ ಮೂಲಕ ಅವರು ಅಜರಾಮರ.
ಅವರ ಕುಟುಂಬದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/ivXQqgzy84ಕಾವ್ಯವನ್ನೇ ಖಡ್ಗವನ್ನಾಗಿಸಿ ಸಾಮಾಜಿಕ ಸಮಾನತೆಯ ಹೋರಾಟವನ್ನು ಮುನ್ನಡೆಸಿದ್ದ ದಲಿತ ಕವಿ, ವಿಧಾನಪರಿಷತ್‌ನ ಮಾಜಿ ಸದಸ್ಯ ಮತ್ತು ನನ್ನ ಆತ್ಮೀಯ ಮಿತ್ರ ಸಿದ್ದಲಿಂಗಯ್ಯನವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
— Siddaramaiah (@siddaramaiah) June 11, 2021
ಸಾವನ್ನು ಮೀರಿದ
ಸಾಹಿತ್ಯದ ಮೂಲಕ ಅವರು ಅಜರಾಮರ.
ಅವರ ಕುಟುಂಬದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/ivXQqgzy84
ಡಿಕೆಶಿ ಸಂತಾಪ:
ಡಾ. ಸಿದ್ದಲಿಂಗಯ್ಯ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಸಿದ್ದಲಿಂಗಯ್ಯ ಅವರ ಅಗಲಿಕೆ ಸುದ್ದಿ ಬಹಳ ನೋವು ತಂದಿದೆ. ದಲಿತ ಹೋರಾಟ, ಸಾಮಾಜಿಕ ಸಮಾನತೆಗಾಗಿ ಸಾಹಿತ್ಯದ ಮೂಲಕ ಹೋರಾಟ ಆರಂಭಿಸಿದ ಮಹಾನ್ ಸಾಹಿತಿ ಸಿದ್ದಲಿಂಗಯ್ಯ.
ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಆತ್ಮಕಥನ, ಸಂಶೋಧನೆ ಪ್ರಕಾರಗಳಲ್ಲಿ ತಮ್ಮ ಸಾಹಿತ್ಯ ರಚಿಸಿ ಹೋರಾಟ ಮಾಡಿದ್ದರು. ಜನರಲ್ಲಿ ಜಾಗೃತಿ ಮೂಡಿಸಿದ್ದರು. ಅಧ್ಯಾಪಕರು, ಕವಿಗಳು, ಹೋರಾಟಗಾರ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಸಿದ್ದಲಿಂಗಯ್ಯ ಅವರ ಕೊಡುಗೆ ಅಪಾರ ಎಂದು ಡಿಕೆಶಿ ಸ್ಮರಿಸಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ ತೀವ್ರ ಸಂತಾಪ:
ಕನ್ನಡದ ಪ್ರಮುಖ ಲೇಖಕ, 'ದಲಿತ ಕವಿ'ಎಂದೇ ಪ್ರಸಿದ್ಧರಾದ ಸಿದ್ದಲಿಂಗಯ್ಯನವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು. ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿದ್ದರು. ಅಧ್ಯಾಪನ-ಬರವಣಿಗೆಗಳಲ್ಲಿ ತೊಡಗಿಕೊಂಡಿರುವವರು. 1954 ರಲ್ಲಿ ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ ಜನಿಸಿದ ಸಿದ್ದಲಿಂಗಯ್ಯನವರ ಜಿಲ್ಲೆಯಿಂದಲೇ ನಾನು ರಾಜಕೀಯ ಪ್ರವೇಶ ಮಾಡಿದ್ದು ಎಂಬುದನ್ನು ಸ್ಮರಿಸಿಕೊಳ್ಳುತ್ತೇನೆ ಎಂದಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ 1988-94, 1995-2001 ರವರೆಗೆ ಎರಡು ಬಾರಿ ನಾಮಕರಣಗೊಂಡಿರುವುದರ ಜೊತೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಲ್ಲಿ 2006-08 ಅವಧಿಯಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಸಿದ್ಧಲಿಂಗಯ್ಯ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. 'ಆ ಬೆಟ್ಟದಲ್ಲಿ ಬೆಳದಿಂಗಳಲ್ಲಿ ಸುಳಿದಾಡ ಬೇಡ ಗೆಳತಿ..' ಎರಡು ಚಲನ ಚಿತ್ರಗಳಲ್ಲಿ ಗೀತೆ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಬಣ್ಣಿಸಿದ್ದಾರೆ.
ಪುಟ್ಟಣ್ಣ ಕಣಗಾಲ್ ಅವರ ಧರಣಿ ಮಂಡಲ ಮಧ್ಯದೊಳಗೆ ಚಿತ್ರದ ಗೆಳತಿ ಓ ಗೆಳತಿ.. ಇವು ಬಂಡಾಯ ಕವಿಯ ಪ್ರೇಮ ಗೀತೆಗಳು. ಅವರಗೊಳಗಿದ್ದ ವ್ಯವಸ್ಥೆಯ ಬಗೆಗಿನ ಕಿಚ್ಚು ಜೊತೆಯಲ್ಲೇ ಒಬ್ಬ ಅಪ್ಪಟ ಪ್ರೇಮಿಯು ಇದ್ದ ಎಂಬುದಕ್ಕೆ ಮೇಲಿನ ಗೀತೆಗಳು ಸದಾ ಹಸಿರು ಎಂದು ಹೆಚ್ಡಿಕೆ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಅವರ ಕುಟುಂಬಕ್ಕೆ ಅವರ ಸಾಹಿತ್ಯಾಭಿಮಾನಿಗಳಿಗೆ ಭಗವಂತನು ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.