ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಪಿಎ ರಮೇಶ್ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆ ರಾಜ್ಯ ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದು, ಐಟಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಮೇಶ್ ಸಾವಿನ ಸುದ್ದಿ ಗೊತ್ತಾಗುತ್ತಿದ್ದಂತೆ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿ, ರಮೇಶ್ ಸಾವಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಇನ್ನೊಂದೆಡೆ ಘಟನಾ ಸ್ಥಳಕ್ಕೆ ಮಾಜಿ ಡಿಸಿಎಂ ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ಎಚ್.ಕೆ.ಪಾಟೀಲ್, ಕಾಂಗ್ರೆಸ್ ವಕ್ತಾರ ಉಗ್ರಪ್ಪ ಸೇರಿದಂತೆ ಇನ್ನಿತರ ನಾಯಕರು ಹೋಗಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ರಮೇಶ್ ಸಾವಿಗೆ ಐಟಿ ಇಲಾಖೆಯ ಕಿರುಕುಳವೇ ಕಾರಣ ಎಂದು ರಮೇಶ್ ಪೋಷಕರು ಆರೋಪಿಸಿದ್ದಾರೆ.