ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ನಗರದ ವಿವಿಧಡೆ ಇಂದು ಕಾರ್ಮಿಕರು ಹಾಗೂ ಬಡವರಿಗೆ ಆಹಾರ ಸಾಮಗ್ರಿಗಳ ಕಿಟ್ಗಳನ್ನು ವಿತರಿಸಿದರು.
ಸಿದ್ದರಾಮಯ್ಯ ಉಪಸ್ಥಿತಿ: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ, ದಿನಸಿ ಹಾಗೂ ತರಕಾರಿ ಕಿಟ್ಗಳನ್ನು ವಿತರಿಸಿದರು. ಈ ವೇಳೆ ಮಾಜಿ ಸಚಿವ ರಾಮಲಿಂಗಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ವೇಣುಗೋಪಾಲ್ ಹಾಜರಿದ್ದರು. ಇದೇ ಸಂದರ್ಭ ರಾಮಲಿಂಗಾರೆಡ್ಡಿ 4,000ಕ್ಕೂ ಅಧಿಕ ಮಂದಿಗೆ ದಿನಸಿ ಕಿಟ್ ವಿತರಿಸಿದರು. ಲಾಕ್ಡೌನ್ ಘೋಷಣೆಯಾದ ದಿನದಿಂದಲೂ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ರಾಮಲಿಂಗಾರೆಡ್ಡಿ ನಿರಂತರವಾಗಿ ದಿನಸಿ ಕಿಟ್ ಹಾಗೂ ಊಟ, ಉಪಹಾರ ಪೂರೈಸುತ್ತಾ ಬಂದಿದ್ದು ಎಲ್ಲರ ಶ್ಲಾಘನೆಗೆ ಪಾತ್ರವಾಗಿದೆ.
ಎರಡು ಕಡೆ ಡಿಕೆಶಿ ಭಾಗಿ: ಡಿ.ಕೆ.ಶಿವಕುಮಾರ್ ಇಂದು ಎರಡು ಕಡೆಗಳಲ್ಲಿ ದಿನಸಿ ಕಿಟ್ ವಿತರಿಸುವ ಕಾರ್ಯದಲ್ಲಿ ಭಾಗಿಯಾದರು. ಮೊದಲು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಳೇಕಹಳ್ಳಿಯಲ್ಲಿ ಆಹಾರ ಪದಾರ್ಥಗಳನ್ನು ವಿತರಿಸಿದರು. ನಂತರ ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿದರಳ್ಳಿಯಲ್ಲಿ 5000 ದಿನಸಿ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ ಹಾಗೂ ಸ್ಥಳೀಯ ನಾಯಕರು ಇದ್ದರು.
ಕಿಟ್ ವಿತರಿಸಿದ ಖಂಡ್ರೆ: ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ಕುರುಬರಹಳ್ಳಿಯಲ್ಲಿ 5 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ದಿನಸಿ ಕಿಟ್ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಶಿವರಾಜ್, ಮಾಜಿ ಮಂತ್ರಿಗಳಾದ ಹೆಚ್.ಎಂ.ರೇವಣ್ಣ ಹಾಗೂ ಬೆಂಗಳೂರು ಉತ್ತರ ಕಾಂಗ್ರೆಸ್ ಅಧ್ಯಕ್ಷ ರಾಜ್ ಕುಮಾರ್ ಉಪಸ್ಥಿತರಿದ್ದರು.