ಬೆಂಗಳೂರು: ಇಂದು ವರನಟ ಡಾ.ರಾಜ್ ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ರಾಜ್ ಸಮಾಧಿ ಮುಂಭಾಗ ಕಾಂಗ್ರೆಸ್ ನಾಯಕರು ಬಡವರು ಹಾಗೂ ಕಾರ್ಮಿಕರಿಗೆ ಆಹಾರ ವಿತರಿಸಿದರು.
ಸಮಾಧಿ ಇರುವ ಕಂಠೀರವ ಸ್ಟುಡಿಯೋ ಬಳಿ ಕ.ವಿ.ಕ ಮಾಜಿ ಅಧ್ಯಕ್ಷ ಮನೋಹರ್ ನೇತೃತ್ವದ ಕಾಂಗ್ರೆಸ್ ನಾಯಕರ ತಂಡ ಆಹಾರ ವಿತರಣೆ ವ್ಯವಸ್ಥೆ ಮಾಡಿತ್ತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಕಾಂಗ್ರೆಸ್ ಮುಖಂಡರು ನಗರದ ವಿವಿಧ ಭಾಗಗಳಲ್ಲಿ ಆಹಾರ ವಿತರಿಸುವ ಕಾರ್ಯ ಮಾಡುತ್ತಿದ್ದಾರೆ.