ETV Bharat / state

ಸಿದ್ದರಾಮಯ್ಯ ಪರ ಶುರುವಾಗಿದೆ ಕೈ ಶಾಸಕರ ಲಾಬಿ - ಸಿದ್ದರಾಮಯ್ಯ ಪರ ಲಾಬಿ ಸುದ್ದಿ

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ರಾಜ್ಯ ಶಾಸಕರು ಹೈಕಮಾಂಡ್ ಮಟ್ಟದಲ್ಲಿ ಲಾಬಿ ಶುರುವಿಟ್ಟುಕೊಂಡಿದ್ದಾರೆ.

Congress  Leaders Lobby
ಮಾಜಿ ಸಿಎಂ ಸಿದ್ದರಾಮಯ್ಯ ಪರ ಶುರುವಾಗಿದೆ ಕೈ ಶಾಸಕರ ಲಾಬಿ
author img

By

Published : Dec 25, 2019, 5:42 PM IST

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ರಾಜ್ಯ ಶಾಸಕರು ಹೈಕಮಾಂಡ್ ಮಟ್ಟದಲ್ಲಿ ಲಾಬಿ ಶುರುವಿಟ್ಟುಕೊಂಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಸ್ಥಿತ್ವ ಉಳಿಸಿಕೊಂಡಿದ್ದರೆ ಅದಕ್ಕೆ ಸಿದ್ದರಾಮಯ್ಯ ಕಾರಣ, ಇವರ ನಾಯಕತ್ವದಲ್ಲಿ ತೆರಳಿದ ಕಾರಣಕ್ಕೆ ಎರಡು ಕ್ಷೇತ್ರಗಳನ್ನಾದರೂ ಗೆಲ್ಲಲು ಸಾಧ್ಯವಾಗಿದೆ. ಬಿಜೆಪಿಯ ಹಣ ಬಲದ ಮುಂದೆ ನಮ್ಮ ಅಭ್ಯರ್ಥಿಗಳು ಸೆಣಸಾಡಲಾಗದೇ ಸೋತಿದ್ದಾರೆ. ಇದು ಒಟ್ಟಾರೆ ಕಾಂಗ್ರೆಸ್​ನ ಹಿನ್ನಡೆಯಾಗಿದೆ. ಅಲ್ಲದೇ ಜನ ಆಡಳಿತ ಪಕ್ಷಕ್ಕೆ ಮತ್ತೊಮ್ಮೆ ಮನ್ನಣೆ ನೀಡುವ ಕಾರ್ಯ ಮಾಡಿದ್ದಾರೆ, ಉಪಚುನಾವಣೆ 15 ಕ್ಷೇತ್ರಗಳ ಪೈಕಿ ಕೇವಲ ಎರಡು ಕ್ಷೇತ್ರ ಗೆದ್ದಿರುವುದು ಕಾಂಗ್ರೆಸ್​ಗೆ ಎದುರಾಗಿರುವ ದೊಡ್ಡ ಹಿನ್ನಡೆ ಅಲ್ಲ. ಅಲ್ಲದೆ ಇದಕ್ಕೆ ಸಿದ್ದರಾಮಯ್ಯ ಒಬ್ಬರೇ ಹೊಣೆಗಾರರು ಅಲ್ಲ. ಇಡೀ ಪಕ್ಷ ಇದಕ್ಕೆ ಜವಾಬ್ದಾರ ವಾಗಿದ್ದು, ಸೋಲಿನ ಹೊಣೆಯನ್ನು ಕೇವಲ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರ ಹೆಗಲಿಗೆ ಹೊರಿಸುವುದು ಸರಿಯಾದ ಕ್ರಮ ಅಲ್ಲ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ವಿಚಾರದಲ್ಲಿ ಯೋಚಿಸಿ ನಿರ್ಧಾರ ಕೈಗೊಳ್ಳುವಂತೆ ಹೈಕಮಾಂಡ್ ಮಟ್ಟದಲ್ಲಿ ಶಾಸಕರು ಮನವಿ ಮಾಡುವ ಕಾರ್ಯ ಮಾಡಿದ್ದಾರೆ, ಎನ್ನಲಾಗಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಕಾರ್ಯದರ್ಶಿ ಕೆ. ಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿರುವ ಮಾಜಿ ಸಚಿವ ಕೃಷ್ಣಬೈರೇಗೌಡ ಹಾಗೂ ಶಾಸಕ ರಿಜ್ವಾನ್ ಅರ್ಷದ್ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ದುಃಸ್ಥಿತಿಯಲ್ಲಿದ್ದು ಈ ಸಂದರ್ಭ ಸಿದ್ದರಾಮಯ್ಯ ಬದಲು ಬೇರೊಬ್ಬ ನಾಯಕರಿಗೆ ಶಾಸಕಾಂಗ ಪಕ್ಷದ ಹಾಗೂ ಪ್ರತಿಪಕ್ಷದ ನಾಯಕ ಸ್ಥಾನ ವಹಿಸಿದರೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು. ಹೀಗಾಗಿ ಸದ್ಯ ಯಾವುದೇ ಬದಲಾವಣೆ ಮಾಡದೇ ಸಿದ್ದರಾಮಯ್ಯ ನೇತೃತ್ವದಲ್ಲಿ ಪಕ್ಷ ಮುನ್ನಡೆಸುವ ಕಾರ್ಯ ಆಗಬೇಕಿದೆ. ಈ ನಿಟ್ಟಿನಲ್ಲಿ ತಾವು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಪರಿಸ್ಥಿತಿಯ ಮನವರಿಕೆ ಮಾಡಿಕೊಡಬೇಕು ಎಂದು ಕೇಳಿಕೊಂಡಿದ್ದಾರೆ.

Intro:newsBody:ಮಾಜಿ ಸಿಎಂ ಸಿದ್ದರಾಮಯ್ಯ ಪರ ಶುರುವಾಗಿದೆ ಕೈ ಶಾಸಕರ ಲಾಬಿ

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ರಾಜ್ಯದ ಶಾಸಕರು ಹೈಕಮಾಂಡ್ ಮಟ್ಟದಲ್ಲಿ ಲಾಬಿ ಶುರುವಿಟ್ಟುಕೊಂಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಅಸ್ಥಿತ್ವ ಉಳಿಸಿಕೊಂಡಿದ್ದರೆ ಅದಕ್ಕೆ ಸಿದ್ದರಾಮಯ್ಯ ಕಾರಣ. ಇವರ ನಾಯಕತ್ವದಲ್ಲಿ ತೆರಳಿದ ಕಾರಣಕ್ಕೆ ಎರಡು ಕ್ಷೇತ್ರಗಳನ್ನಾದರೂ ಗೆಲ್ಲಲು ಸಾಧ್ಯವಾಗಿದೆ. ಬಿಜೆಪಿಯ ಹಣ ಬಲದ ಮುಂದೆ ನಮ್ಮ ಅಭ್ಯರ್ಥಿಗಳು ಸೆಣಸಾಡಲಾಗದೆ ಸೋತಿದ್ದಾರೆ. ಇದು ಒಟ್ಟಾರೆ ಕಾಂಗ್ರೆಸ್ನ ಹಿನ್ನಡೆಯಾಗಿದೆ. ಅಲ್ಲದೆ ಜನ ಆಡಳಿತ ಪಕ್ಷಕ್ಕೆ ಮತ್ತೊಮ್ಮೆ ಮನ್ನಣೆ ನೀಡುವ ಕಾರ್ಯ ಮಾಡಿದ್ದಾರೆ. ಉಪಚುನಾವಣೆ 15 ಕ್ಷೇತ್ರಗಳ ಪೈಕಿ ಕೇವಲ ಎರಡು ಕ್ಷೇತ್ರ ಗೆದ್ದಿರುವುದು ಕಾಂಗ್ರೆಸ್ಗೆ ಎದುರಾಗಿರುವ ದೊಡ್ಡ ಹಿನ್ನಡೆ ಅಲ್ಲ. ಅಲ್ಲದೆ ಇದಕ್ಕೆ ಸಿದ್ದರಾಮಯ್ಯ ಒಬ್ಬರೇ ಹೊಣೆಗಾರರು ಅಲ್ಲ. ಇಡೀ ಪಕ್ಷ ಇದಕ್ಕೆ ಜವಾಬ್ದಾರ ವಾಗಿದ್ದು, ಸೋಲಿನ ಹೊಣೆಯನ್ನು ಕೇವಲ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರ ಹೆಗಲಿಗೆ ಹೊರಿಸುವುದು ಸರಿಯಾದ ಕ್ರಮ ಅಲ್ಲ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ವಿಚಾರದಲ್ಲಿ ಯೋಚಿಸಿ ನಿರ್ಧಾರ ಕೈಗೊಳ್ಳುವಂತೆ ಹೈಕಮಾಂಡ್ ಮಟ್ಟದಲ್ಲಿ ಶಾಸಕರು ಮನವಿ ಮಾಡುವ ಕಾರ್ಯ ಮಾಡಿದ್ದಾರೆ.
ವೇಣುಗೋಪಾಲ್ ಗೆ ಮನವಿ
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿರುವ ಮಾಜಿ ಸಚಿವ ಕೃಷ್ಣಬೈರೇಗೌಡ ಹಾಗೂ ಕಳೆದ ಉಪ ಚುನಾವಣೆಯಲ್ಲಿ ಶಿವಾಜಿನಗರದಿಂದ ಗೆಲುವು ಸಾಧಿಸಿರುವ ಶಾಸಕ ರಿಜ್ವಾನ್ ಅರ್ಷದ್ ಹಾಗೂ ಮತ್ತಿತರ ನಾಯಕರು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ದುಸ್ಥಿತಿಯಲ್ಲಿದ್ದು ಈ ಸಂದರ್ಭ ಸಿದ್ದರಾಮಯ್ಯ ಬದಲು ಬೇರೊಬ್ಬ ನಾಯಕರಿಗೆ ಶಾಸಕಾಂಗ ಪಕ್ಷದ ಹಾಗೂ ಪ್ರತಿಪಕ್ಷದ ನಾಯಕ ಸ್ಥಾನ ವಹಿಸಿದರೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು. ಹೀಗಾಗಿ ಸದ್ಯ ಯಾವುದೇ ಬದಲಾವಣೆ ಮಾಡದೆ ಸಿದ್ದರಾಮಯ್ಯ ನೇತೃತ್ವದಲ್ಲಿ ಪಕ್ಷ ಮುನ್ನಡೆಸುವ ಕಾರ್ಯ ಆಗಬೇಕಿದೆ. ಈ ನಿಟ್ಟಿನಲ್ಲಿ ತಾವು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಪರಿಸ್ಥಿತಿಯ ಮನವರಿಕೆ ಮಾಡಿಕೊಡಬೇಕು ಎಂದು ಕೇಳಿಕೊಂಡಿದ್ದಾರೆ.
ವೀಕ್ಷಕರ ವರದಿ
ಕಳೆದವಾರ ನಗರಕ್ಕೆ ಆಗಮಿಸಿದ್ದ ಎಐಸಿಸಿ ವೀಕ್ಷಕರಾದ ಮಧುಸೂದನ ಮಿಸ್ತ್ರಿ ಹಾಗೂ ಭಕ್ತ ಚರಣದಾಸ ರಾಜ್ಯದ ಒಟ್ಟು 50ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರ ಜೊತೆ ಸಮಾಲೋಚಿಸಿದ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರ ಸ್ಥಾನಕ್ಕೆ ಬೇರೊಬ್ಬರನ್ನು ನೇಮಿಸಬೇಕು ಅಥವಾ ಅವರ ರಾಜೀನಾಮೆ ವಾಪಸ್ ಪಡೆಯುವಂತೆ ಸೂಚಿಸಬೇಕು ಎಂಬ ಕುರಿತು ಮಾಹಿತಿ ಸಂಗ್ರಹಿಸಿ ತೆರಳಿದ್ದಾರೆ. ಈಗಾಗಲೇ ಅವರು ನೀಡಿರುವ ವರದಿ ಕೂಡ ಸೋನಿಯಾಗಾಂಧಿ ಮುಂದೆ ಇದೆ. ಅವರು ನಿರ್ಧಾರ ಪ್ರಕಟಿಸುವ ಮುನ್ನ ಶಾಸಕರ ಲಾಬಿ ಆರಂಭವಾಗಿದೆ. ಅಲ್ಲದೆ ಇದರ ಜೊತೆಜೊತೆಗೆ ಸಿದ್ದರಾಮಯ್ಯ ಕೂಡ ರಾಜೀನಾಮೆ ವಾಪಸ್ ಪಡೆಯುವ ನಿಟ್ಟಿನಲ್ಲಿ ಯೋಚನೆ ಮಾಡುತ್ತಿದ್ದು, ಹೊಸ ವರ್ಷದ ಮೊದಲ ದಿನ ದಿಲ್ಲಿಗೆ ತೆರಳಲು ನಿರ್ಧರಿಸಿದ್ದಾರೆ.
ಒಟ್ಟಾರೆ ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ ಮಾಹಿತಿಯ ವರದಿ ಏನಿದೆ ಎನ್ನುವುದು ಇದುವರೆಗೂ ಬಹಿರಂಗವಾಗಿಲ್ಲ. ಆದರೆ ಸಿದ್ದರಾಮಯ್ಯ ಪರ ರಾಜ್ಯ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಲಾಬಿ ಗಮನಿಸಿದರೆ ಸಾಕಷ್ಟು ಕುತೂಹಲ ಮೂಡುತ್ತಿರುವುದಂತೂ ಸತ್ಯ.Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.