ಬೆಂಗಳೂರು: ನಗರದ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇಂದು ಸಂಜೆ ನಡೆಯಲಿದ್ದು, ಅದಕ್ಕೂ ಮುನ್ನ ಹಿರಿಯ ಕಾಂಗ್ರೆಸ್ ನಾಯಕರ ಸಭೆ ಆರಂಭವಾಗಿದೆ.
ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯರ ಸರ್ಕಾರಿ ನಿವಾಸದಲ್ಲಿ ಸಭೆ ಆರಂಭವಾಗಿದೆ. ಸಭೆಯ ಅಧ್ಯಕ್ಷತೆಯನ್ನು ಸಿದ್ದರಾಮಯ್ಯ ವಹಿಸಿದ್ದು, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ಡಿ.ಕೆ. ಶಿವಕುಮಾರ್, ಎಂ. ಕೃಷ್ಣಪ್ಪ, ರಾಮಲಿಂಗ ರೆಡ್ಡಿ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್ಆರ್ ಪಾಟೀಲ್ ಮತ್ತಿತರ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸುವ ಶಾಸಕರಿಗೆ ಸದನದಲ್ಲಿ ಯಾವ ರೀತಿ ಪಾಲ್ಗೊಳ್ಳಬೇಕೆಂಬ ಮಾರ್ಗದರ್ಶನ ನೀಡುವ ಕುರಿತು ಪಕ್ಷದ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಲಿದೆ. ಜೊತೆಗೆ ಮಾರ್ಗದರ್ಶನ ನೀಡುವ ಕಾರ್ಯವೂ ಅಗಲಿದೆ.