ETV Bharat / state

ಸಿದ್ದರಾಮಯ್ಯ ನೇತೃತ್ವದಲ್ಲಿ ಅನರ್ಹ ಶಾಸಕರ ಕ್ಷೇತ್ರಗಳ ಮುಖಂಡರ ಜೊತೆ ಸಭೆ - Disqualified MLAs

ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾಂಗ್ರೆಸ್ ನಾಯಕರು, ಅನರ್ಹ ಶಾಸಕರ ಐದು ಕ್ಷೇತ್ರಗಳ ಮುಖಂಡರ ಜೊತೆ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದರು.

ಅನರ್ಹ ಶಾಸಕರ ಕ್ಷೇತ್ರಗಳ ಮುಖಂಡರ ಜೊತೆ ಸಭೆ
author img

By

Published : Sep 19, 2019, 10:25 AM IST

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾಂಗ್ರೆಸ್ ನಾಯಕರು, ಅನರ್ಹ ಶಾಸಕರ ಐದು ಕ್ಷೇತ್ರಗಳ ಮುಖಂಡರ ಜೊತೆ ಸಭೆ ನಡೆಸಿದರು.

ಕಳೆದ ವಾರ ಆರು ಕ್ಷೇತ್ರಗಳ ಮುಖಂಡರ ಜೊತೆ ಸಭೆ ನಡೆಸಲಾಗಿತ್ತು. ಇದೀಗ ಕಾಗವಾಡ, ಅಥಣಿ, ಗೋಕಾಕ್, ಯಲ್ಲಾಪುರ, ಬಳ್ಳಾರಿ ಹಾಗೂ ವಿಜಯನಗರ ಈ ಐದು ಕ್ಷೇತ್ರಗಳ ಮುಖಂಡರ ಜೊತೆ ಸಭೆ ನಡೆದಿದೆ. ಬಾಕಿ ಇರುವ ಬೆಂಗಳೂರು ನಗರ ವ್ಯಾಪ್ತಿಯ ಕ್ಷೇತ್ರಗಳ ಸಭೆ ಮುಂದಿನ ದಿನಗಳಲ್ಲಿ ನಡೆಯಲಿದೆ.

ಸಭೆಯಲ್ಲಿ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಜಿಲ್ಲಾಧ್ಯಕ್ಷರು, ಸ್ಥಳೀಯ ಮುಖಂಡರು ಭಾಗಿಯಾಗಿದ್ದರು. ಈ ವೇಳೆ ಶತಾಯಗತಾಯ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಲೇಬೇಕು ಎಂಬ ಸಂದೇಶ ರವಾನೆ ಮಾಡಲಾಯಿತು. ಜೊತೆಗೆ ಎಲ್ಲಾ ಐದು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮುಖಂಡರ ಅಭಿಪ್ರಾಯ ಸಂಗ್ರಹ ಮಾಡಲಾಯಿತು.

Intro:newsBody:ಅನರ್ಹ ಶಾಸಕರ ಕ್ಷೇತ್ರಗಳ ಮುಖಂಡರ ಜೊತೆ ಸಭೆ

ಬೆಂಗಳೂರು: ಅನರ್ಹ ಶಾಸಕರ ಐದು ಕ್ಷೇತ್ರಗಳ ಮುಖಂಡರ ಜೊತೆ ಎಂದು ಕಾಂಗ್ರೆಸ್ ನಾಯಕರು ಸಭೆ ನಡೆಸಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆಯಿತು. ಕಳೆದ ವಾರ ಆರು ಕ್ಷೇತ್ರಗಳ ಮುಖಂಡರ ಜೊತೆ ಸಭೆ ನಡೆಸಲಾಗಿತ್ತು ಇಂದು ಉಳಿದ ಕ್ಷೇತ್ರಗಳ ಸಭೆ ನಡೆದಿದ್ದು, ಬಾಕಿ ಇರುವ ಬೆಂಗಳೂರು ನಗರ ವ್ಯಾಪ್ತಿಯ ಕ್ಷೇತ್ರಗಳ ಸಭೆ ಮುಂದಿನ ದಿನಗಳಲ್ಲಿ ನಡೆಯಲಿದೆ.
ಇಂದಿನ ಸಭೆ
ಕಾಗವಾಡ, ಅಥಣಿ, ಗೋಕಾಕ್, ಯಲ್ಲಾಪುರ, ಬಳ್ಳಾರಿ ಯ ವಿಜಯನಗರದ ಮುಖಂಡರ ಜೊತೆ ಸಭೆ ನಡೆಯಿತು.
ಬೆಳಗಾವಿ, ಬಳ್ಳಾರಿ, ವಿಜಯಪುರ ಜಿಲ್ಲೆಯ ಮುಖಂಡರ ಸಭೆಯಲ್ಲಿ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ,ಎಂ.ಬಿ.ಪಾಟೀಲ್, ಜಿಲ್ಲಾಧ್ಯಕ್ಷರು, ಸ್ಥಳೀಯ ಮುಖಂಡರು ಭಾಗಿಯಾಗಿದ್ದರು. ಶತಾಯಗತಾಯ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಲೇ ಬೇಕು ಎಂಬ ಸಂದೇಶ ರವಾನೆ ಮಾಡಲಾಯಿತು.
ಇಂದಿನ ಸಭೆಯಲ್ಲಿ ಎಲ್ಲಾ ಐದು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮುಖಂಡರು ಅಭಿಪ್ರಾಯ ಸಂಗ್ರಹ ಮಾಡಿದರು.
Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.