ETV Bharat / state

ಬಿಜೆಪಿ ನವಶಕ್ತಿ ಸಮಾವೇಶ ವಿರುದ್ಧ ಕಾಂಗ್ರೆಸ್ ಐಕ್ಯತಾ ಸಮಾವೇಶಕ್ಕೆ ಸಿದ್ಧತೆ - ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಬಿಜೆಪಿ ನವಶಕ್ತಿ ಸಮಾವೇಶದ ವಿರುದ್ಧ ಕಾಂಗ್ರೆಸ್ ಐಕ್ಯತಾ ಸಮಾವೇಶವು ಡಿಸೆಂಬರ್ 6 ರಂದು ನಡೆಯಲಿದೆ. ಈ ಕುರಿತು ಪೂರ್ವ ಸಿದ್ಧತೆ ಸಭೆಯು ಇಂದು ನಡೆದಿದೆ.

Congress leaders meeting
ಬಿಜೆಪಿ ನವಶಕ್ತಿ ಸಮಾವೇಶ ವಿರುದ್ಧ ಕಾಂಗ್ರೆಸ್ ಐಕ್ಯತಾ ಸಮಾವೇಶಕ್ಕೆ ಸಿದ್ಧತೆ
author img

By

Published : Nov 20, 2022, 4:16 PM IST

ಬೆಂಗಳೂರು: ರಾಜ್ಯ ಬಿಜೆಪಿ ಆಯೋಜಿಸಿರುವ ನವಶಕ್ತಿ ಸಮಾವೇಶಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಸಜ್ಜಾಗಿದ್ದು, ಐಕ್ಯತಾ ಸಮಾವೇಶಕ್ಕೆ ಸಿದ್ಧತೆ ಆರಂಭಿಸಿದೆ. ಬಿಜೆಪಿಯ ಎಸ್​ಸಿ, ಎಸ್​ಟಿ ಸಮಾವೇಶ ವಿರುದ್ಧ ಕಾಂಗ್ರೆಸ್ ಐಕ್ಯತಾ ಸಮಾವೇಶ ನಡೆಸಲು ತೀರ್ಮಾನಿಸಿದೆ.

ಡಿಸೆಂಬರ್ 6 ರಂದು ಕಾಂಗ್ರೆಸ್ ಐಕ್ಯತಾ ಸಮಾವೇಶ ನಡೆಯಲಿದ್ದು, ಪೂರ್ವ ಸಿದ್ಧತೆಗಾಗಿ ಕಾಂಗ್ರೆಸ್ ನಾಯಕರ ಸಭೆ ನಗರದ ಖಾಸಗಿ ಹೋಟೆಲ್​ನಲ್ಲಿ ಇಂದು ನಡೆದಿದೆ. ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ನೇತೃತ್ವದಲ್ಲಿ ಎಸ್​ಸಿ, ಎಸ್​ಟಿ ನಾಯಕರೊಂದಿಗೆ ಸಭೆ ನಡೆದಿದ್ದು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಸಭೆಗೂ ಮುನ್ನ ಪರಮೇಶ್ವರ್ ಮಾತನಾಡಿ, ಮಂಗಳೂರು ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆಯನ್ನು ನಡೆಸಬೇಕು. ಮಂಗಳೂರಿನಲ್ಲಿ ಈ ಹಿಂದೆ ಇಂತಹ ಘಟನೆಗಳು ನಡೆದಿದ್ದವು. ಗೃಹ ಇಲಾಖೆ ಈ ಬಗ್ಗೆ ಗಂಭೀರವಾಗಿ ತನಿಖೆ ನಡೆಸಿ ಎನ್ಐಎಗೆ ಪ್ರಕರಣವನ್ನು ಒಪ್ಪಿಸಬೇಕು ಎಂದರು.

ಬಿಜೆಪಿಗೆ ಕಾಯಿಲೆ: ಚಿಲುಮೆ ಸಂಸ್ಥೆಗೆ ಕಾಂಗ್ರೆಸ್​ನವರೇ ಅನುಮತಿ ಕೊಟ್ಟಿದ್ದರು ಎಂಬ ಸಿಎಂ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ಇದೊಂದು ಕಾಯಿಲೆಯಾಗಿದೆ. ಏನೇ ಆರೋಪ ಮಾಡಿದರೂ, ಕಾಂಗ್ರೆಸ್​ನವರೂ ಮಾಡಿಲ್ವಾ ಎಂದು ಕೇಳುತ್ತಾರೆ. ಈ ಬಗ್ಗೆ ಸಂಪೂರ್ಣ ತನಿಖೆ ಆಗಲಿ ಎಂದೇ ನಾವು ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದೇವೆ. ಎಲ್ಲದರ ಬಗ್ಗೆಯೂ ತನಿಖೆ ನಡೆಸಿದರೆ ಸತ್ಯಾಂಶ ಹೊರ ಬರಲಿದೆ. ತಮಗೆ ಬೇಕಾದಂತೆ ಮತದಾರರ ಹೆಸರು ಡಿಲೀಟ್ ಮಾಡುವುದು, ಮತದಾರರ ಪಟ್ಟಿ ಬದಲಾಯಿಸುವುದು ಬಿಜೆಪಿ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕೇಂದ್ರ ಮಾಜಿ ಸಚಿವ ಕೆ ಎಚ್​ ಮುನಿಯಪ್ಪ ಮಾತನಾಡಿ, ಹಿಂದೆಂದೂ ಯಾವುದೇ ಸರ್ಕಾರ ಮಾಡದ ಕೃತ್ಯಕ್ಕೆ ಬಿಜೆಪಿಯವರು ಕೈ ಹಾಕಿದ್ದಾರೆ. ಇದು ಪ್ರಜಾಪ್ರಭುತ್ವದ ದೃಷ್ಟಿಯಲ್ಲಿ ಒಳ್ಳೆಯದಲ್ಲ. ಈ ಬಗ್ಗೆ ಸೂಕ್ತ ತನಿಖೆ ಆಗಬೇಕು. ಬಿಜೆಪಿ ಸರ್ಕಾರದ ಈ ಕೃತ್ಯವನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದರು.

ಪುಲಕೇಶಿನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸ್​ ಮೂರ್ತಿ ಪ್ರತಿಕ್ರಿಯಿಸಿ, ನಮ್ಮ ಕ್ಷೇತ್ರದಲ್ಲೂ 22 ಸಾವಿರ ಮತಗಳು ಡಿಲೀಟ್ ಆಗಿವೆ. ಯಾಕೆ ಡಿಲೀಟ್ ಅಗಿವೆ ಎಂಬುದು ನಮಗೆ ತಿಳಿದಿಲ್ಲ. ನಾವು ಮಸೀದಿ, ಚರ್ಚ್, ಮನೆಗಳಿಗೆ ಭೇಟಿ ಕೊಟ್ಟು ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದರು.

ಬಳಿಕ ಪುಲಕೇಶಿ ನಗರಕ್ಕೆ ಪ್ರಸನ್ನ ಕುಮಾರ್ ಅರ್ಜಿ ಹಾಕಿರುವ ವಿಚಾರ ಕುರಿತು ಮಾತನಾಡಿ, ನಾನು ಅತೀ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದೇನೆ. ನಾನು ಹಾಲಿ ಶಾಸಕ ಕೂಡ. ಟಿಕೆಟ್ ವಿಚಾರ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸ್ವ ಪಕ್ಷದವರೇ ಸೋಲಿಸಲು ಪ್ಲಾನ್ ಮಾಡಿರುವ ವಿಚಾರ ಹೈಕಮಾಂಡ್ ಗೊತ್ತಿದೆ. ನಾನು ಕೂಡ ಸಭೆಯಲ್ಲಿ ನಾಯಕರ ಗಮನಕ್ಕೆ ತಂದಿದ್ದೇನೆ. ಅವರು ಕರೆದು ಮಾತಾಡುತ್ತೇನೆ ಎಂದು ಹೇಳಿದ್ದಾರೆ ಎಂದರು.

ಬಿಜೆಪಿ ವಿರುದ್ಧ ಮಾಜಿ ಸಚಿವ ಎಚ್ ಸಿ ಮಹದೇವಪ್ಪ ಕಿಡಿಕಾರಿದ್ದು, ಬಿಜೆಪಿ ಪಕ್ಷಕ್ಕೆ ಸಾಮಾಜಿಕ ನ್ಯಾಯ, ಸಮಾನತೆ, ಮೀಸಲಾತಿ, ಸಂವಿಧಾನದಲ್ಲಿ ನಂಬಿಕೆ ಇಲ್ಲ. ಹಾಗಿದ್ದಲ್ಲಿಯೂ ಇಂತಹ ಪಕ್ಷ, ನೊಂದ ಸಮುದಾಯಗಳ ಸಮಾವೇಶ ಮಾಡುತ್ತೇವೆ ಎಂದು ಮೊಸಳೆ ಕಣ್ಣೀರು ಹಾಕುತ್ತಿದೆ. ಸಂವಿಧಾನದ ಅಶಯ ಜಾರಿ ಮಾಡುವುದಕ್ಕೆ ಎಳ್ಳಷ್ಟು ಬಿಜೆಪಿಗೆ ಇಷ್ಟವಿಲ್ಲ. ಅದನ್ನೆಲ್ಲ ಜಾರಿ‌ ಮಾಡುವುದು ಕಾಂಗ್ರೆಸ್ ‌ಮಾತ್ರ ಎಂದು ಹೇಳಿದರು.

ಸಿದ್ದರಾಮಯ್ಯ ನಿಲ್ಲಬೇಕಾ ಬೇಡವಾ ಎಂದು ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅಲ್ಲದೇ ಪಂಚರತ್ನ ರಥಯಾತ್ರೆಯಲ್ಲಿ ಕುಮಾರಸ್ವಾಮಿ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಬಾರದು ಅಂತಿದೆ. ಹೀಗಾಗಿಯೇ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಅವರನ್ನು ಟ್ರ್ಯಾಪ್ ಮಾಡಿದರೆ ಪಕ್ಷ ಸೋಲುತ್ತದೆ ಅಂತ ಅಂದುಕೊಂಡಿದ್ದಾರೆ. ಆದರೆ 2023 ರಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ. ಸಂಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ರಾಜ್ಯದಲ್ಲಿ‌ 51 ಕ್ಷೇತ್ರಗಳು ಮೀಸಲು ಕ್ಷೇತ್ರ ಆಗಿವೆ. ಈ 51 ಕ್ಷೇತ್ರ ಬಿಟ್ಟು ಸಿದ್ದರಾಮಯ್ಯ ಎಲ್ಲೇ ನಿಂತರು ಗೆಲ್ಲುತ್ತಾರೆ. ಯಾಕೆಂದರೆ ರಾಜ್ಯದ ಜನಕ್ಕೆ ಸಿದ್ದರಾಮಯ್ಯ ಅಧಿಕಾರಕ್ಕೆ ಬರಬೇಕು ಎನ್ನುವುದಿದೆ. ಹೀಗಾಗಿ ಎಲ್ಲೇ ನಿಂತರು ಸಿದ್ದರಾಮಯ್ಯ ಸೇಫ್ ಎಂದು ಅಭಿಪ್ರಾಯಪಟ್ಟರು.

ಆಕಾಂಕ್ಷಿಗಳಿಗೆ ಟಾಸ್ಕ್: ಚಿಲುಮೆ ವೋಟರ್ ಐಡಿ ದುರ್ಬಳಕೆ ಪ್ರಕರಣ ಹಿನ್ನೆಲೆ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟಾಸ್ಕ್ ನೀಡಿದ್ದಾರೆ. ಇಂದಿನ ಸಭೆಯಲ್ಲಿ ವೋಟರ್ ಐಡಿ ವಿಚಾರದಲ್ಲಿ ಟಿಕೆಟ್ ಆಕಾಂಕ್ಷಿಗಳಿಗೆ ಟಾಸ್ಕ್ ನೀಡಿದ್ದು, ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಹಾಕಿದವರು ಬೂತ್ ಗಳಿಗೆ ತೆರಳುವಂತೆ ಸೂಚನೆ ಕೊಟ್ಟಿದ್ದಾರೆ. ಅಲ್ಲಿ ಮತದಾರರ ಪಟ್ಟಿ ಪರಿಶೀಲನೆ ಮಾಡುವಂತೆ ಹೇಳಿದ್ದಾರೆ. ಸಭೆಯಲ್ಲಿ ಕಾಂಗ್ರೆಸ್ ನಾಯಕರಾದ ಉಗ್ರಪ್ಪ, ಎಸ್ ಸಿ, ಎಸ್ ಟಿ ಸಮುದಾಯದ ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಎಂಎಲ್ ಸಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ: ಚಿಲುಮೆ ಸಂಸ್ಥೆಗೆ ಅನುಮತಿ ಕೊಟ್ಟಿದ್ದೇ ಸಿದ್ದರಾಮಯ್ಯ ಸರ್ಕಾರ, ಕೂಡಲೇ ಅವರು ರಾಜೀನಾಮೆ ಕೊಡಲಿ: ಎನ್.ರವಿಕುಮಾರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.