ETV Bharat / state

ಕೈ ಶಾಸಕರ ಅನುದಾನ ಕಡಿತಕ್ಕೆ ವಿರೋಧ: ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್​ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ
author img

By

Published : Sep 26, 2019, 4:50 PM IST

ಬೆಂಗಳೂರು: ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಬಿಟಿಎಮ್ ಲೇಔಟ್ ಹಾಗೂ ಜಯನಗರ ಕ್ಷೇತ್ರದ ಶಾಸಕರು ಹಾಗೂ ಕಾರ್ಯಕರ್ತರು ಟೌನ್ ಹಾಲ್ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಮಾಜಿ ಸಚಿವ ರಾಮಲಿಂಗಾರೆಡ್ಡಿ, ಶಾಸಕಿ ಸೌಮ್ಯರೆಡ್ಡಿ, ರಾಜ್ಯಸಭಾ ಸದಸ್ಯ ಹರಿಪ್ರಸಾದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು‌. ಬಿಟಿಎಮ್ ಲೇಔಟ್ ವಿಧಾನಸಭಾ ಕ್ಷೇತ್ರಕ್ಕೆ ಸಮ್ಮಿಶ್ರ ಸರ್ಕಾರ 387 ಕೋಟಿ ರುಪಾಯಿ ಅನುದಾನ ನೀಡಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ 234 ಕೋಟಿ ರೂ. ಕಡಿತ ಮಾಡಿ, ಕೇವಲ 152.84 ಕೋಟಿ ನಿಗದಿಪಡಿಸಿದ್ದಾರೆ. ಹಾಗೂ ಜಯನಗರ ಕ್ಷೇತ್ರಕ್ಕೆ 194 ಕೋಟಿ ರೂ. ಅನುದಾನ ಕಡಿತಗೊಳಿಸಿ ಕೇವಲ 122 ಕೋಟಿ ರೂ. ಕೊಡಲಾಗಿದೆ. ಇದನ್ನು ವಿರೋಧಿಸಿ ಶಾಸಕರು, ಪಾಲಿಕೆ ಸದಸ್ಯರು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು. ಭ್ರಷ್ಟ ಬಿಜೆಪಿಯನ್ನು ಸೋಲಿಸಿ‌ ನಾವು ಅಧಿಕಾರಕ್ಕೆ ಬಂದಿದ್ದೆವು. ಆ ಸಂದರ್ಭದಲ್ಲಿ ನಾವು ಯಾವುದೇ ತಾರತಮ್ಯ, ದ್ವೇಷದ ರಾಜಕಾರಣ ಮಾಡಿಲ್ಲ. ಇಂದು ಬಿಜೆಪಿ, ಅನುದಾನದಲ್ಲಿ ತಾರತಮ್ಯ ಮಾಡುತ್ತಿದೆ. ನಮ್ಮ ಬಜೆಟ್​ ಅನ್ನೇ ತಡೆ ಹಿಡಿದು, ಅನುದಾನ ನೀಡಿಲ್ಲ. ಡಿಪಿಆರ್, ವರ್ಕ್ ಆರ್ಡರ್ ಎಲ್ಲಾ ಆಗಿದ್ದರು ಕಾಮಗಾರಿಗಳನ್ನು ತಡೆಹಿಡಿದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವ 5 ಕ್ಷೇತ್ರಗಳಿಗೆ 2700 ಕೋಟಿ ಅನುದಾನ ಕೊಟ್ಟಿದ್ದಾರೆ. ಆದರೆ ನಮ್ಮ ಕ್ಷೇತ್ರಗಳಿಗೇಕೆ ಅನ್ಯಾಯ ಮಾಡಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ಬೇಕಾದರೆ ಬಿಜೆಪಿ ಶಾಸಕರಿಗೆ ಸಾವಿರ ಕೋಟಿ ಅನುದಾನ ಕೊಡಲಿ. ಆದರೆ ನಮ್ಮ ಅನುದಾನ ಕಡಿತ ಮಾಡಿರುವುದು ಸರಿಯಲ್ಲ. ಇದರಿಂದ ಕ್ಷೇತ್ರದ ಎಲ್ಲ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ. ಬೆಂಗಳೂರು ಶಾಸಕರೆಲ್ಲ ಸೇರಿ ಮುಖ್ಯಮಂತ್ರಿಗಳ ಮನೆ ಮುಂದೆ ಪ್ರತಿಭಟನೆ ನಡೆಸಲಿದ್ದೇವೆ, ಅಧಿವೇಶನದ ಸಮಯದಲ್ಲಿ ವಿಧಾನಸೌಧದ ಮುಂದೆಯೂ ಪ್ರತಿಭಟನೆ ನಡೆಸುತ್ತೇವೆ ಎಂದರು.

ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಮಾತನಾಡಿ, ಆಪರೇಷನ್ ಕಮಲ ನಡೆಸಲು ಸಾವಿರಾರು ಕೋಟಿ ಖರ್ಚು ಮಾಡಿದ್ದಾರೆ, ಆದರೆ ಈಗ ನೆರೆ ಪರಿಹಾರ ನೀಡುವುದಕ್ಕೆ ಸರ್ಕಾರದ ಬಳಿ ದುಡ್ಡಿಲ್ಲ ಎನ್ನುತ್ತಿದ್ದಾರೆ. ಅನುದಾನ ನೀಡುವುದರಲ್ಲಿ ತಾರತಮ್ಯ ಮಾಡಿದ್ದಾರೆ. ಅಲ್ಲದೆ ಸಿಎಂ ನಗರ ಪ್ರದಕ್ಷಿಣೆ ವೇಳೆಯೂ ಸ್ಥಳೀಯ ಕಾಂಗ್ರೆಸ್ ಶಾಸಕರನ್ನು ಕಡೆಗಣಿಸಲಾಗುತ್ತಿದೆ ಎಂದಿದ್ದಾರೆ.

Intro: ಕಾಂಗ್ರೆಸ್ ಶಾಸಕರ ಅನುದಾನ ಕಡಿತ ವಿರೋಧಿಸಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಬೆಂಗಳೂರು- ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಬಿಟಿಎಮ್ ಲೇಔಟ್ ಹಾಗೂ ಜಯನಗರ ಕ್ಷೇತ್ರದ ಶಾಸಕರು ಹಾಗೂ ಕಾರ್ಯಕರ್ತರು ಟೌನ್ ಹಾಲ್ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು‌
ಮಾಜಿ ಸಚಿವ ರಾಮಲಿಂಗಾರೆಡ್ಡಿ, ಶಾಸಕಿ ಸೌಮ್ಯರೆಡ್ಡಿ, ರಾಜ್ಯ ಸಭಾ ಸದಸ್ಯ ಹರಿಪ್ರಸಾದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು‌ .
ಬಿಟಿಎಮ್ ಲೇಔಟ್ ವಿಧಾನಸಭಾ ಕ್ಷೇತ್ರಕ್ಕೆ ಸಮ್ಮಿಶ್ರ ಸರ್ಕಾರ 387 ಕೋಟಿ ರುಪಾಯಿ ಅನುದಾನ ನೀಡಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ 234 ಕೋಟಿ ರೂ ಕಡಿತ ಮಾಡಿ ಕೇವಲ 152.84 ಕೋಟಿ ನಿಗದಿಪಡಿಸಿದ್ದಾರೆ. ಹಾಗೆ ಜಯನಗರ ಕ್ಷೇತ್ರಕ್ಕೆ 194 ಕೋಟಿ ರೂ ಅನುದಾನ ಕಡಿತಗೊಳಿಸಿ ಕೇವಲ 122 ಕೋಟಿ ರೂ ಕೊಡಲಾಗಿದೆ. ಇದನ್ನು ವಿರೋಧಿಸಿ ಶಾಸಕರು, ಕಾರ್ಪೋರೇಟರ್ಸ್, ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು.
ಭ್ರಷ್ಟ ಬಿಜೆಪಿಯನ್ನು ಸೋಲಿಸಿ‌ ನಾವು ಅಧಿಕಾರಕ್ಕೆ ಬಂದಿದ್ದೆವು.ಆ ಸಂದರ್ಭದಲ್ಲಿ ನಾವು ಯಾವುದೇ ತಾರತಮ್ಯ, ದ್ವೇಷ ರಾಜಕಾರಣ ಮಾಡಿಲ್ಲ. ಇಂದು ಬಿಜೆಪಿ ಅನುದಾನದಲ್ಲಿ ತಾರತಮ್ಯ ಮಾಡುತ್ತಿದೆ. ನಮ್ಮ ಬಜೆಟನ್ನೇ ತಡೆ ಹಿಡಿದು, ಅನುದಾನ ನೀಡಿಲ್ಲ. ಡಿಪಿಆರ್, ವರ್ಕ್ ಆರ್ಡರ್ ಎಲ್ಲಾ ಆಗಿದ್ರೂ ಕಾಮಗಾರಿಗಳನ್ನು ತಡೆಹಿಡಿದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿರುವ 5 ಕ್ಷೇತ್ರಗಳಿಗೆ 2700 ಕೋಟಿ ಅನುದಾನ ಕೊಟ್ಟಿದ್ದಾರೆ.
ಆದರೆ ನಮ್ಮ ಕ್ಷೇತ್ರಗಳಿಗ್ಯಾಕೆ ಅನ್ಯಾಯ ಮಾಡಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ಆಗ್ರಹಿಸಿದರು.

ಶಾಸಕ ರಾಮಲಿಂಗಾ ರೆಡ್ಡಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀಡಿದ ಅನುದಾನವನ್ನು ಬಿಜೆಪಿ ಸರ್ಕಾರ ಬಂದಮೇಲೆ ಕಡಿತ ಮಾಡಿ, ರಾಜಿನಾಮೆ ನೀಡಿದ ಶಾಸಕರ ಕ್ಷೇತ್ರಕ್ಕೆ ನೀಡಲಾಗಿದೆ. ಬಿಜೆಪಿ ಶಾಸಕರಿಗೆ ಸಾವಿರ ಕೋಟಿ ಅನುದಾನ ಕೊಡಲಿ ಬೇಕಾದ್ರೆ ಆದರೆ ನಮ್ಮ ಅನುದಾನ ಕಡಿತ ಮಾಡಿರುವುದು ಸರಿಯಲ್ಲ. ಇದರಿಂದ ಕ್ಷೇತ್ರದ ಎಲ್ಲಾ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿದೆ. ಈಜೀಪುರ ಮೇಲ್ಸೇತುವೆ ಕೆಲಸ ನಿಂತು ಹೋಗಿದೆ. ಬಿಜೆಪಿಗರಲ್ಲಿ ಅಧಿಕಾರದ ಮದ ತುಂಬಿದೆ.
ವೈಟ್ ಟಾಪಿಂಗ್ ಬೇಡ, ಹೆಚ್ಚು ಕಾಸ್ಟ್ಲಿ, ಕಿತ್ತಾಕಿ ಎಂದು ನಾವೆ ಹೇಳಿದ್ದೆವು. ಆದ್ರೆ ಉತ್ತಮ ಟಾರ್ ರಸ್ತೆ ನೀಡಲಿ. ಬೆಂಗಳೂರು ಶಾಸಕರೆಲ್ಲ ಸೇರಿ ಮುಖ್ಯಮಂತ್ರಿಗಳ ಮನೆ ಮುಂದೆ ಪ್ರತಿಭಟನೆ ನಡೆಸಲಿದ್ದೇವೆ, ಅಧಿವೇಶನದ ಸಮಯದಲ್ಲಿ ವಿಧಾನಸೌಧದ ಮುಂದೆಯೂ ಪ್ರತಿಭಟನೆ ನಡೆಸುತ್ತೇವೆ ಎಂದರು.
ರಾಜೀವ್ ಚಂದ್ರಶೇಖರ್ ಹೇಳಿಕೆಗೆ ತಿರುಗೇಟು ನೀಡಿದ ಅವರು ಮಳೆ ಬಂದಿದ್ದಕ್ಕೆ ಪ್ರತಿಭಟನೆ ಮಾಡಲು ಸಾಧ್ಯವಾ. ಅವರ ಮನೆ ಅಲ್ಲೇ ಇದ್ದರು ಪ್ರವಾಹ ಆದಾಗ ಒಂದು ದಿನ ಬಂದಿಲ್ಲ ಎಂದು ಟೀಕಿಸಿದರು.
ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಮಾತನಾಡಿ, ಆಪರೇಷನ್ ಕಮಲ ನಡೆಸಲು ಸಾವಿರಾರು ಕೋಟಿ ಖರ್ಚು ಮಾಡಿದ್ದಾರೆ, ಆದರೆ ಈಗ ನೆರೆಪರಿಹಾರ ನೀಡುವುದಕ್ಕೆ ಸರ್ಕಾರದ ಬಳಿ ದುಡ್ಡಿಲ್ಲ ಅನ್ತಿದಾರೆ. 316 ಕೋಟಿ ರೂ ಅನುದಾನದಲ್ಲಿ ಕಡಿತ ಮಾಡಿ ಕೇವಲ 122 ಕೋಟಿ ರುಪಾಯಿ ಅನುದಾನ ನೀಡಿದ್ದಾರೆ. ಅನುದಾನ ನೀಡುವುದರಲ್ಲಿ ತಾರತಮ್ಯ ಮಾಡಿದ್ದಾರೆ. ಅಲ್ಲದೆ ಸಿಎಂ ನಗರ ಪ್ರದಕ್ಷಿಣೆ ವೇಳೆಯೂ ಸ್ಥಳೀಯ ಕಾಂಗ್ರೆಸ್ ಶಾಸಕರನ್ನು ಕಡೆಗಣಿಸಲಾಗುತ್ತಿದೆ ಎಂದರು.

ಸೌಮ್ಯಶ್ರೀ
Kn_bng_01_Ramalingareddy_protest_7202707Body:..Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.