ETV Bharat / state

ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿದ ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ಭವನದಿಂದ ಕಾಲ್ನಡಿಗೆ ಮೂಲಕ ಹೊರಟು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ಮುಂದಾಗಿದ್ದರು. ಆದರೆ, ಸಿಎಂ ನಿವಾಸದಿಂದ 100 ಮೀಟರ್ ಅಂತರದಲ್ಲಿರುವ ಆರಾಧ್ಯ ವೃತ್ತದಲ್ಲೇ ತಡೆದ ಪೊಲೀಸರು ಮುಂದೆ ತೆರಳಲು ಅವಕಾಶ ನೀಡಲಿಲ್ಲ.

ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ
ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ
author img

By

Published : Apr 14, 2022, 12:44 PM IST

Updated : Apr 14, 2022, 1:46 PM IST

ಬೆಂಗಳೂರು: ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್​ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಎಂ ನಿವಾಸದಿಂದ 100 ಮೀಟರ್ ಅಂತರದಲ್ಲಿರುವ ಆರಾಧ್ಯ ವೃತ್ತದಲ್ಲೇ ಕಾಂಗ್ರೆಸ್ ನಾಯಕರನ್ನು ತಡೆದ ಪೊಲೀಸರು ಮುಂದೆ ತೆರಳಲು ಅವಕಾಶ ನೀಡಲಿಲ್ಲ.

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ಕಾಲ್ನಡಿಗೆ ಮೂಲಕ ಹೊರಟು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ಮುಂದಾಗಿದ್ದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ .ವಿ.ಶ್ರೀನಿವಾಸ್ ಮತ್ತಿತರ ನಾಯಕರು ರಸ್ತೆಗೆ ಅಡ್ಡಲಾಗಿ ಅಳವಡಿಸಿದ್ದ ಬ್ಯಾರಿಕೇಡ್​ಗಳನ್ನು ಹತ್ತಿ ಸಿಎಂ ನಿವಾಸದ ತೆರಳಲು ಪ್ರಯತ್ನಿಸಿದರು.

ಆಗ ಪೊಲೀಸರು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆಯುವ ಕಾರ್ಯ ಮಾಡಿದರು. ಈ ಸಂದರ್ಭ ಕೆಲ ಕಾರ್ಯಕರ್ತರು ಪ್ರತಿರೋಧವೊಡ್ಡಿದ್ದರು. ಹೀಗಾಗಿ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಕೆಲಕಾಲ ವಾಕ್ಸಮರ ನಡೆಯಿತು. ಅಂತಿಮವಾಗಿ ಪ್ರತಿಭಟನಾನಿರತರನ್ನು ತಡೆದ ಪೊಲೀಸರು ಬಸ್ಸುಗಳಲ್ಲಿ ತುಂಬಿಕೊಂಡು ಬೇರೆಡೆ ಕರೆದೊಯ್ದರು.

ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿದ ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ

ಸುರ್ಜೇವಾಲಾ, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಎಂ.ಬಿ.ಪಾಟೀಲ್, ಬಿ.ವಿ.ಶ್ರೀನಿವಾಸ್, ಸಲೀಂ ಅಹ್ಮದ್, ಧ್ರುವನಾರಾಯಣ್, ಪುಷ್ಪಾ ಅಮರನಾಥ್, ಗೋವಿಂದರಾಜ್ ಸೇರಿ ಹಲವರನ್ನು ವಶಕ್ಕೆ ಪಡೆಯಲಾಯಿತು. ಪ್ರತಿಭಟನಾ ಮೆರವಣಿಗೆ ತೆರಳುವ ಮುನ್ನ ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ಸಚಿವ ಈಶ್ವರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇನ್ಮುಂದೆಯೂ ಹೋರಾಟ ಮುಂದುವರಿಸುವ ಸೂಚನೆ ನೀಡಿರುವ ಕಾಂಗ್ರೆಸ್ ನಾಯಕರು, ಐದು ದಿನ ರಾಜ್ಯದ ವಿವಿಧೆಡೆ ಹೋರಾಟವನ್ನು ರೂಪಿಸಿದ್ದು, ಇದಕ್ಕಾಗಿ ಪ್ರತ್ಯೇಕ 7 ತಂಡವನ್ನು ರಚಿಸಿದೆ.

ಕಾಂಗ್ರೆಸ್​ ಮೆರವಣಿಗೆ ಮತ್ತು ಮುತ್ತಿಗೆ ನಿರ್ಧಾರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನಿವಾಸದ ಬಳಿ ಪೊಲೀಸ್​ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಸಿಎಂ ನಿವಾಸ ಹಾಗೂ ಗೃಹ ಕಚೇರಿಗೆ ವಿಶೇಷ ಭದ್ರತೆ ಒದಗಿಸಲಾಗಿದೆ. ಅಲ್ಲದೇ, ರಸ್ತೆಗಳಲ್ಲಿ ಬ್ಯಾರಿಕೇಡ್​ಗಳನ್ನು ಶೇಖರಿಸಿ ಇಡಲಾಗಿದೆ.

ಅಂಬೇಡ್ಕರ್ ದಿನಾಚರಣೆ: ಪ್ರತಿಭಟನಾ ಮೆರವಣಿಗೆ ಆರಂಭಿಸುವ ಮುನ್ನ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಭವನದಲ್ಲಿ ಅಂಬೇಡ್ಕರ್ ದಿನಾಚರಣೆ ಆಚರಿಸಿದರು. ಮೊದಲು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ್ದರು.

ಇದನ್ನೂ ಓದಿ: ಗುತ್ತಿಗೆದಾರನ ಆತ್ಮಹತ್ಯೆ ಕೇಸ್..​ ಪ್ರಾಥಮಿಕ ತನಿಖಾ ವರದಿ ಬಳಿಕವೇ ಮುಂದಿನ ಕ್ರಮ ಎಂದ ಸಿಎಂ

Last Updated : Apr 14, 2022, 1:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.