ETV Bharat / state

ಕೇಂದ್ರದ ಕಾರ್ಮಿಕ ನೀತಿ ವಿರೋಧಿಸಿ ಕಾಂಗ್ರೆಸ್ ನಾಯಕರ ಧರಣಿ: ಕೈಗಾರಿಕೆಗಳು ಸ್ತಬ್ಧ

ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ಕಾಂಗ್ರೆಸ್ ನಾಯಕರು ಕೂಡಾ ಕಾಂಗ್ರೆಸ್ ಭವನದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Congress leaders protest against the central government's labor policy in Bangalore
ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಕಾಂಗ್ರೆಸ್ ನಾಯಕರ ಧರಣಿ....ಕೈಗಾರಿಕೆಗಳು ಸ್ಥಗಿತ
author img

By

Published : Jan 8, 2020, 1:18 PM IST

ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಕಾಂಗ್ರೆಸ್ ನಾಯಕರು ಧರಣಿ ನಡೆಸಿದರು.

ಇಂದು ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ಕಾಂಗ್ರೆಸ್ ನಾಯಕರು ಕೂಡಾ ಕಾಂಗ್ರೆಸ್ ಭವನದಲ್ಲಿ ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆ ನೇತೃತ್ವದಲ್ಲಿ ಧರಣಿ ನಡೆಸಿ, ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿದರು.

ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಕಾಂಗ್ರೆಸ್ ಧರಣಿ....ಕೈಗಾರಿಕೆಗಳು ಸ್ಥಗಿತ

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಕೇಂದ್ರದ ಕಾರ್ಮಿಕ ನೀತಿಯನ್ನು ಖಂಡಿಸುತ್ತೇವೆ. ಪೀಣ್ಯದಲ್ಲಿ ಕೈಗಾರಿಕೆಗಳು ಬಾಗಿಲು ಹಾಕುತ್ತಿವೆ, ಉದ್ಯೋಗವಿಲ್ಲದೇ ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ. ಉದ್ಯೋಗ ಸೃಷ್ಟಿಯೂ ಇಲ್ಲ ಜೊತೆಗೆ ಜಿಡಿಪಿ ದರ ಕುಸಿಯುತ್ತಿದ್ದು, ಶೇ.2ಕ್ಕೆ ಜಿಡಿಪಿ ದರ ಬಂದು ನಿಂತಿದೆ. ಪ್ರಧಾನಿ ನರೇಂದ್ರ ಮೋದಿ ಗೃಹಸಚಿವ ಅಮಿತ್ ಶಾ ಅವರ ಹಿಟ್ಲರ್ ಧೋರಣೆಯೇ ಇದಕ್ಕೆ ಕಾರಣ. ಕೊಟ್ಟ ಭರವಸೆಯನ್ನ ಅವರು ಈಡೇರಿಸಿಲ್ಲ. ಕೃಷಿ ಕಾರ್ಮಿಕರ ಸಮಸ್ಯೆಗೆ ಪರಿಹಾರ ಒದಗಿಸಲಿಲ್ಲ, ಅಸಂಘಟಿತ ಕಾರ್ಮಿಕರಿಗೆ ಭದ್ರ ನೆಲೆಯಿಲ್ಲ ಎಂದು ಹೇಳಿದರು.

ಇನ್ನೂ ನಗರದ ಪೀಣ್ಯ ಕೈಗಾರಿಕಾ ಪ್ರದೇಶದ ಕಾರ್ಮಿಕರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪೀಣ್ಯ 2ನೇ ಹಂತದಲ್ಲಿ ಈ ಪ್ರತಿಭಟನೆ ನಡೆಸಿದರು. ಐಟಿಯು ವತಿಯಿಂದ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ನೂರಾರು ಪ್ರತಿಭಟನಾಕಾರರು ಪಾಲ್ಗೊಂಡು, ಕೇಂದ್ರ ಸರ್ಕಾರದ ಬ್ಯಾಂಕಿಂಗ್, ಕಾರ್ಮಿಕ ನೀತಿಗಳ ವಿರುದ್ಧ ಧ್ವನಿ ಎತ್ತಿದ್ದಾರೆ. ಹಾಗೂ ಬಹುತೇಕ ಕೈಗಾರಿಕೆಗಳನ್ನು ಪೀಣ್ಯದಲ್ಲಿ ಕಾರ್ಮಿಕರ ಕೊರತೆಯಿಂದ ಸ್ಥಗಿತಗೊಳಿಸಲಾಗಿದೆ.

Intro:newsBody:ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಕಾಂಗ್ರೆಸ್ ಧರಣಿ

ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಕಾಂಗ್ರೆಸ್ ನಾಯಕರು ಧರಣಿ ನಡೆಸಿದರು.
ಇಂದು ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ಕಾಂಗ್ರೆಸ್ ನಾಯಕರು ಕೂಡ ಕಾಂಗ್ರೆಸ್ ಭವನದಲ್ಲಿ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲೂ ಹಲವು ಕಾರ್ಮಿಕ ಸಂಘಟನೆಗಳ ಧರಣಿ ನಡೆಸುತ್ತಿದ್ದು, ಕೆಪಿಸಿಸಿ ಕಾರ್ಮಿಕ ಘಟಕದಿಂದಲೂ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರ ಧರಣಿ ನಡೆಸಿ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆ ನೇತೃತ್ವದಲ್ಲಿ ಧರಣಿ ನಡೆಯಿತು.
ಧರಣಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಕೇಂದ್ರದ ಕಾರ್ಮಿಕ ನೀತಿ ವಿರುದ್ಧ ಖಂಡಿಸುತ್ತೇವೆ. ಪೀಣ್ಯದಲ್ಲಿ ಕೈಗಾರಿಕೆಗಳು ಬಾಗಿಲು ಹಾಕುತ್ತಿವೆ. ಉದ್ಯೋಗವಿಲ್ಲದೆ ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ. ಉದ್ಯೋಗ ಸೃಷ್ಠಿಯೂ ಆಗ್ತಿಲ್ಲ. ಜಿಡಿಪಿ ದರ ಕುಸಿಯುತ್ತಲೇ ಇದೆ. ಶೇ.2ಕ್ಕೆ ಜಿಡಿಪಿ ದರ ಬಂದು ನಿಂತಿದೆ. ಪ್ರಧಾನಿ ನರೇಂದ್ರ ಮೋದಿ ಗೃಹಸಚಿವ ಅಮಿತ್ ಶಾ ಅವರ ಹಿಟ್ಲರ್ ಧೋರಣೆಯೇ ಇದಕ್ಕೆ ಕಾರಣ. ಕೊಟ್ಟ ಭರವಸೆಯನ್ನ ಅವರು ಈಡೇರಿಸಿಲ್ಲ. ಕೃಷಿ ಕಾರ್ಮಿಕರ ಸಮಸ್ಯೆಗೆ ಪರಿಹಾರ ಒದಗಿಸಲಿಲ್ಲ. ಅಸಂಘಟಿತ ಕಾರ್ಮಿಕರಿಗೆ ಭದ್ರ ನೆಲೆಯಿಲ್ಲ ಎಂದು ಹೇಳಿದರು.
ರೈತರು ಆತ್ಮಹತ್ಯೆಯ ದಾರಿ ಹಿಡಿದ್ರೂ ಮೋದಿ ಗಮನಹರಿಸಿಲ್ಲ. ಕೇಂದ್ರ ರೈತ ವಿರೋಧಿ,ಕಾರ್ಮಿಕ ವಿರೋಧಿ ಧೋರಣೆ ತಾಳುತ್ತಿದೆ. ಶಾಂತಿಯುತ ಪ್ರತಿಭಟನೆಗೂ ಅವಕಾಶ ನೀಡ್ತಿಲ್ಲ. ಪ್ರತಿಭಟನೆಯ ಹಕ್ಕನ್ನೇ ಅವರು ಕಸಿಯುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಈಶ್ವರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಮಿಕರ ಪರ ಕೇಂದ್ರ ಸರ್ಕಾರ ಇಲ್ಲ. ಅಂಬಾನಿ, ಅದಾನಿ ಪರ ಮೋದಿ ಇದ್ದಾರೆ. ಸಾವಿರಾರು ಕೈಗಾರಿಕೆಗಳು ಪೀಣ್ಯದಲ್ಲಿ ಮುಚ್ಚಿದ್ದಾರೆ. ಪೀಣ್ಯ ದಲ್ಲಿ ಇರೋ ಕೈಗಾರಿಕೆಗಳು ಐಸಿಯು ಯಲ್ಲಿ ಇವೆ. ನೆರೆ ಸಂತ್ರಸ್ತರು ಇವರಿಗೆ ಬೇಕಿಲ್ಲ. ಅವರಿಗೆ ಸಾಂತ್ವನ ಹೇಳಲ್ಲ. ರೈತರು ಆತ್ಮಹತ್ಯೆ ಮಾಡಿಕೊಂಡ್ರು ಇವರಿಗೆ ಬೇಕಿಲ್ಲ. ಪ್ರತಿಭಟನೆ ಮಾಡುವುದಕ್ಕೂ ಇವರಿಗೆ ಅವಕಾಶ ಇಲ್ಲ. ದೇಶದ ಜನರ ಮೂಲಭೂತ ಹಕ್ಕುಗಳನ್ನ ಕಿತ್ತುಕೊಂಡಿದ್ದಾರೆ. ಸಿಎಎ ಮತ್ತು ಎನ್ ಆರ್ ಸಿ ಇವತ್ತು ದೇಶದಲ್ಲಿ ಹಲವು ಸಮಸ್ಯೆ ಗೆ ಕಾರಣವಾಗಿದೆ ಎಂದರು.
Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.