ETV Bharat / state

ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್​ ಸದಸ್ಯರಿಂದ ವಿಧಾನಸಭೆಯಲ್ಲಿ ಪ್ರತಿಭಟನೆ

author img

By

Published : Feb 17, 2022, 7:21 PM IST

ಕಲಾಪ ಆರಂಭವಾಗುತ್ತಿದ್ದಂತೆಯೇ ಸದನದ ಬಾವಿಗಿಳಿದ ಕಾಂಗ್ರೆಸ್ ಸದಸ್ಯರು, ​ ಈಶ್ವರಪ್ಪ ರಾಜೀನಾಮೆ ಬೇಕೇ ಬೇಕು ಎಂದು ಘೋಷಣೆ ಕೂಗಿದರು.

assembly
ವಿಧಾನಸಭೆ

ಬೆಂಗಳೂರು: ಸಚಿವ ಕೆ. ಎಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಇಂದೂ ಸಹ ವಿಧಾನಸಭೆಯಲ್ಲಿ ಪ್ರತಿಭಟನೆ ಮುಂದುವರೆಸಿದ್ದಾರೆ. ಕಲಾಪ ಆರಂಭವಾಗುತ್ತಿದ್ದಂತೆಯೇ ಸದನದ ಬಾವಿಗಿಳಿದ ಕಾಂಗ್ರೆಸ್ ಸದಸ್ಯರು, ಈಶ್ವರಪ್ಪ ರಾಜೀನಾಮೆ ಬೇಕೇ ಬೇಕು ಎಂದು ಘೋಷಣೆ ಕೂಗಿದರು.

ಪೀಠಕ್ಕೆ ಬಂದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಮಳ್ಳೂರು ಆನಂದ್ ರಾವ್ ಅವರಿಗೆ ಸಂತಾಪ ಸೂಚನೆ ನಿರ್ಣಯವನ್ನು ಮಂಡಿಸಿದರು. ಆಗ ಎಲ್ಲಾ ಸದಸ್ಯರು ನಿಶಬ್ದರಾದರು. ಸಂತಾಪ ಸೂಚನೆ ಮುಗಿಯುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ಆರಂಭಿಸಿದರು.

ಸಂತಾಪ ಸೂಚನೆ ನಿರ್ಣಯ ಮುಗಿಯುತ್ತಿದ್ದಂತೆ ಸ್ಪೀಕರ್ ಕಾಗೇರಿ ಅವರು ಪ್ರಶ್ನೋತ್ತರ ಅವಧಿಯನ್ನು ಕೈಗೆತ್ತಿಕೊಂಡರು. ಆಗಲೂ ಸಹ ಕಾಂಗ್ರೆಸ್ ಸದಸ್ಯರು ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಘೋಷಣೆ ಕೂಗುತ್ತಲೇ ಇದ್ದರು. ಆರ್​ಎಸ್​ಎಸ್​ ಧ್ವಜ ಬೇಡವೇ ಬೇಡ, ಕೊಡಿ ಕೊಡಿ ರಾಜೀನಾಮೆ ಕೊಡಿ ಅಂತ ಧಿಕ್ಕಾರ ಕೂಗಿದರು. ಪ್ರತಿಭಟನೆ ಮಧ್ಯೆ ಸಚಿವ ಕೆ. ಎಸ್​ ಈಶ್ವರಪ್ಪ ಸುಮ್ಮನೆ ಕುಳಿತಿದ್ದರು.

ಕಾಂಗ್ರೆಸ್ ಸದಸ್ಯರ ಪ್ರತಿಭಟನೆ ಮಧ್ಯೆ ಪ್ರಶ್ನೋತ್ತರ ಕಲಾಪ ಆರಂಭವಾಯಿತು. ಈ ನಡುವೆ ಸ್ಪೀಕರ್, ತಮ್ಮ ತಮ್ಮ ಸ್ಥಾನಕ್ಕೆ ಹಿಂತಿರುಗಿ ಪ್ರಶ್ನೆ ಕೇಳುವಂತೆ ಕೈ ಶಾಸಕರಿಗೆ ಸೂಚಿಸಿದರು. ಸದನದಲ್ಲಿ ಪ್ರಶ್ನೋತ್ತರ ಅಂದರೆ ಸಾಕಷ್ಟು ಮಹತ್ವದ ಕ್ಷಣ. ಪ್ರಶ್ನೋತ್ತರದಲ್ಲಿ ಆಡಳಿತ ವಿಪಕ್ಷ ಅಂತ ಇಲ್ಲ. ಸಮಸ್ಯೆಗಳನ್ನು ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಪ್ರಶ್ನೆ ಕೇಳುವ ಸಂದರ್ಭ ಇದು. ನೀವೆಲ್ಲ ಪ್ರಶ್ನೆ ಕೇಳಿಲ್ಲ ಅಂದರೆ ನಿಮ್ಮ ಕ್ಷೇತ್ರದ ಜನತೆ ತಪ್ಪು ತಿಳಿದುಕೊಳ್ಳುತ್ತಾರೆ ಎಂದು ಕಾಂಗ್ರೆಸ್ ಶಾಸಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಇಷ್ಟಾದರೂ ಸದನದಲ್ಲಿ ಪ್ರತಿಭಟನಾನಿರತ ಕಾಂಗ್ರೆಸ್ ಶಾಸಕರು ಬಿತ್ತಿಪತ್ರ ಪ್ರದರ್ಶನ ಮಾಡಿ ಘೋಷಣೆ ಕೂಗುತ್ತಲೇ ಇದ್ದರು. ನಿಮಗೆ ನ್ಯಾಯ ಕೊಡ್ತೇನೆ. ಸಮಾಧಾನವಾಗಿ ನನ್ನ ಮಾತು ಕೇಳಿ, ಕಾಂಗ್ರೆಸ್ ಸದಸ್ಯರಿಗೆ ಸ್ಪೀಕರ್ ಕಾಗೇರಿ ಮನವಿ ಮಾಡಿಕೊಂಡರು. ಸ್ಪೀಕರ್ ಮನವಿಗೆ ಸ್ಪಂದಿಸದ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ಮುಂದುವರೆಸಿದರು.

ಗದ್ದಲದ ಮಧ್ಯೆ ಪ್ರಶ್ನೋತ್ತರ ಕಲಾಪ ಮುಕ್ತಾಯವಾಯಿತು. ರಾಜ್ಯಪಾಲರ ಭಾಷಣ ಒಂದನಾ ನಿರ್ಣಯದ ಮೇಲೆ ಮಾತನಾಡಲು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯಗೆ ಅವಕಾಶ ನೀಡಿದರೂ ಅವರು ಮಾತನಾಡಲು ಬರಲಿಲ್ಲ. ಪ್ರತಿಭಟನೆ ನಡುವೆಯೇ ಕರ್ನಾಟಕ ಸ್ಟಾಂಪು (ಎರಡನೇ ತಿದ್ದುಪಡಿ) ವಿಧೇಯಕ ವನ್ನು ಕಂದಾಯ ಸಚಿವ ಆರ್. ಅಶೋಕ್ ಮಂಡಿಸಿದರು.

ರಾಜ್ಯ ಸರ್ಕಾರ ಆರ್​ಎಸ್​ಎಸ್ ಕೈಗೊಂಬೆ ಎಂದು ಕಾಂಗ್ರೆಸ್ ಕಿಡಿಕಾರಿದ್ದು, ಸದನದಲ್ಲಿ ಕಾಂಗ್ರೆಸ್ ತೀವ್ರ ಹೋರಾಟದ ಹಿನ್ನೆಲೆ ಸ್ಪೀಕರ್ ಸದನವನ್ನು ಮಧ್ಯಾಹ್ನ ಮೂರು ಗಂಟೆಗೆ ಮುಂದೂಡಿದರು.

ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರ ಬಂಧನ: ಸಚಿವ ಕೆ. ಎಸ್​​ ಈಶ್ವರಪ್ಪ ಅವರನ್ನು ರಾಜೀನಾಮೆ ನೀಡುವಂತೆ ಒತ್ತಾಯಿಸಿ ಕಲಬುರಗಿಯ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಚಿವ ಕೆ. ಎಸ್ ಈಶ್ವರಪ್ಪ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಆಕ್ರೋಶ ಭುಗಿಲೆದ್ದು.‌ ಕಲಬುರಗಿಯಲ್ಲಿ ಕಾಂಗ್ರೆಸ್ ಯುವ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಭವನದಿಂದ ಬಿಜೆಪಿ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕ್ರರ್ತರು ಪ್ರತಿಭಟನೆ ವೇಳೆ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ‌. ಈ ವೇಳೆ ಪೊಲೀಸರು ನಗರದ ಎಸ್‌ಟಿಬಿಟಿ ಕ್ರಾಸ್ ಬಳಿ ತಡೆದು ಬಂಧಿಸಿದ್ದಾರೆ. ಮೂವತ್ತಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರನ್ನ ಬಂಧಿಸಲಾಗಿದೆ.

ಚಾಮರಾಜನಗರದಲ್ಲಿ ಈಶ್ವರಪ್ಪ ಪರ - ವಿರೋಧ ಪ್ರೊಟೆಸ್ಟ್: ಕೈ-ಕಮಲ ಕಾರ್ಯಕರ್ತರ ಜಟಾಪಟಿ: ಕೇಸರಿ ಧ್ವಜ ಹಾರಾಟ ಸಂಬಂಧ ಇಂದು ನಗರದಲ್ಲಿ ಹೈಡ್ರಾಮಾ ನಡೆದು ಕಾಂಗ್ರೆಸ್ ಮತ್ತು ಕಮಲ ಕಾರ್ಯಕರ್ತರು ಜಟಾಪಟಿ ನಡೆಸಿದರು.

ಕೆ. ಎಸ್​ ಈಶ್ವರಪ್ಪ ಹೇಳಿಕೆ ವಿರುದ್ಧ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ವೇಳೆ ಪೊಲೀಸರು ವೀರಭದ್ರೇಶ್ವರ ದೇಗುಲ ಬಳಿಯಲ್ಲೇ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಜೀಜ್ ಸೇರಿದಂತೆ ಕೈ ಕಾರ್ಯಕರ್ತರನ್ನು ತಡೆದರು. ಇನ್ನು ಇತ್ತ ತುಸು ದೂರದಲ್ಲೇ ನಿಂತ ಕಮಲ ಕಾರ್ಯಕರ್ತರು ಬಿಜೆಪಿ ಕಚೇರಿಯನ್ನು ಅದು ಹೇಗೆ ಮುತ್ತಿಗೆ ಹಾಕುತ್ತೀರಿ? ಎಂದು ಸವಾಲೆಸೆದು ಡಿಕೆಶಿ ಹಾಗೂ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಕೆಲವೇ ಮೀಟರ್​ಗಳ ಅಂತರದಲ್ಲಿ ಎರಡೂ ಪಕ್ಷದ ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಡಿಕೆಶಿ, ಈಶ್ವರಪ್ಪ ವಿರುದ್ಧ ಹಿಗ್ಗಾಮುಗ್ಗಾ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಪರಿಸ್ಥಿತಿ ವಿಕೋಪಕ್ಕೆ ತೆರಳುವುದನ್ನು ಅರಿತ ಪೊಲೀಸರು ಮೀಸಲು ಪಡೆಯನ್ನು ಕರೆಸಿ ಕೈ ಕಾರ್ಯಕರ್ತರನ್ನು ವಶಕ್ಕೆ ಪಡೆದು ಪರಿಸ್ಥಿತಿ ಶಾಂತಗೊಳಿಸಿದರು.

ಗೊಂದಲಕ್ಕೀಡಾದ ಪೊಲೀಸರು: ಇಷ್ಟು ದಿನಗಳ ಕಾಲ ಪ್ರತಿಭಟನಾಕಾರರನ್ನು ಮೊದಲೇ ವಶಕ್ಕೆ ಪಡೆಯುತ್ತಿದ್ದ ಪೊಲೀಸರು ಇಂದು ಆ ಕಾರ್ಯ ಮಾಡದಿದ್ದರಿಂದ ಎರಡೂ ಪಕ್ಷಗಳ ಕಾರ್ಯಕರ್ತರ ವರ್ತನೆಗೆ ಗೊಂದಲಕ್ಕೀಡಾದ ಘಟನೆ ನಡೆಯಿತು.

ಶಿವಮೊಗ್ಗದಲ್ಲಿ ಜಿಲ್ಲಾ ಯೂತ್ ಕಾಂಗ್ರೆಸ್​ ವತಿಯಿಂದ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ: ಸಚಿವ ಕೆ. ಎಸ್ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಯೂತ್ ಕಾಂಗ್ರೆಸ್ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ ನಡೆಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಸಚಿವ ಕೆ. ಎಸ್ ಈಶ್ವರಪ್ಪ ಅವರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಕಲಾಪ ನಡೆಯುವ ಸಂದರ್ಭದಲ್ಲಿ ಡಿಕೆಶಿ ಅವರ ವಿರುದ್ಧ ಏಕ ವಚನದಲ್ಲಿ ನಾಲಿಗೆ ಹರಿಬಿಟ್ಟಿದ್ದಾರೆ. ಹಾಗಾಗಿ, ಕೂಡಲೇ ಈಶ್ವರಪ್ಪ ಅವರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಬೇಕು. ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಹಾಗೂ ಈಶ್ವರಪ್ಪ ಅವರ ಬಾವಚಿತ್ರಕ್ಕೆ ಬೂಟು ಕಾಲಿನಿಂದ ಒದ್ದು ಪ್ರತಿಭಟನೆ ನಡೆಸಿದರು.

ನಂತರ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಯೂತ್ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದರು. ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್. ಪಿ ಗಿರೀಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರವೀಣ್, ಮುಖಂಡರಾದ ರಂಗನಾಥ , ಕುಮರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಓದಿ: ಈಶ್ವರಪ್ಪ ನಾಲಿಗೆ ಹರಿತಕ್ಕೆ ಬಿಜೆಪಿ ನಾಯಕರೇ ವಿಲ ವಿಲ: ಪದೇ ಪದೆ ಮುಜುಗರಕ್ಕೊಳಗಾಗುತ್ತಿರುವ ಕೇಸರಿ ನಾಯಕರು

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.