ETV Bharat / state

ಪ್ರಣಬ್​ ಮುಖರ್ಜಿ ಆರೋಗ್ಯ ಚೇತರಿಕೆಗೆ ಕಾಂಗ್ರೆಸ್​ ನಾಯಕರ ಹಾರೈಕೆ! - ಮಾಜಿ ರಾಷ್ಟ್ರಪತಿ ಪ್ರಣಬ್​

ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅವರಿಗೆ ಕೊರೊನಾ ವೈರಸ್​ ತಗುಲಿದ್ದು, ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ರಾಜ್ಯ ಕಾಂಗ್ರೆಸ್​ ಮುಖಂಡರು ಟ್ವೀಟ್​ ಮಾಡಿದ್ದಾರೆ.

Congress leaders
Congress leaders
author img

By

Published : Aug 11, 2020, 3:30 AM IST

ಬೆಂಗಳೂರು: ಕೋವಿಡ್-19 ಸೋಂಕು, ಹಾಗೂ ಶಸ್ತ್ರಚಿಕಿತ್ಸೆಗೊಳಗಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಆದಷ್ಟು ಶೀಘ್ರ ಚೇತರಿಸಿಕೊಂಡು ಗುಣಮುಖರಾಗಲಿ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಶುಭ ಹಾರೈಸಿದ್ದಾರೆ.

ಈ ಸಂಬಂಧ ಟ್ವೀಟ್ ಮೂಲಕ ಕಾಂಗ್ರೆಸ್​ ನಾಯಕರು ಶುಭ ಹಾರೈಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಹಲವು ನಾಯಕರು ಟ್ವೀಟ್​ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಮ್ಮ ಟ್ವೀಟರ್​​ನಲ್ಲಿ, ಕೋವಿಡ್​-19ನಿಂದ ಬಳಲುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಆದಷ್ಟು ಬೇಗ ಗುಣಮುಖರಾಗಲಿ, ಉತ್ತಮ ಆರೋಗ್ಯದೊಂದಿಗೆ ಆಸ್ಪತ್ರೆಯಿಂದ ಹೊರಬರಲಿ ಎಂದು ಆಶಿಸಿದ್ದಾರೆ.

  • Wishing Former President Shri. Pranab Mukherjee a speedy recovery from COVID-19 and good health. https://t.co/9tr5APBb27

    — DK Shivakumar (@DKShivakumar) August 10, 2020 " class="align-text-top noRightClick twitterSection" data=" ">

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಭಾರತದ ಮಾಜಿ ರಾಷ್ಟ್ರಪತಿಗಳು, ದೇಶದ ಮಾರ್ಗದರ್ಶಕರು, ನಮ್ಮೆಲ್ಲರ ನೆಚ್ಚಿನ ನಾಯಕರಾದ ಪ್ರಣಬ್​ ಮುಖರ್ಜಿಯವರಿಗೆ ಕೋವಿಡ್ ಸೋಂಕು ತಗುಲಿರುವುದು ದುಃಖದ ವಿಷಯ. ಪ್ರಣಬ್​ ಮುಖರ್ಜಿಯವರು ಶೀಘ್ರ ಗುಣಮುಖರಾಗಿ ಮತ್ತೆ ನಮ್ಮೆಲ್ಲರಿಗೂ ಮಾರ್ಗದರ್ಶನ ಮಾಡಲಿ. ನಮ್ಮೆಲ್ಲರ ಹಾರೈಕೆ ಮತ್ತು ಪ್ರಾರ್ಥನೆ ಅವರ ಜೊತೆಗಿದೆ ಎಂದಿದ್ದಾರೆ

  • ಭಾರತದ ನಿಕಟಪೂರ್ವ ರಾಷ್ಟ್ರಪತಿಗಳು, ದೇಶದ ಮಾರ್ಗದರ್ಶಕರು, ನಮ್ಮೆಲ್ಲರ ನೆಚ್ಚಿನ ನಾಯಕರಾದ ಶ್ರೀ ಪ್ರಣಾಬ್ ಮುಖರ್ಜಿಯವರಿಗೆ ಕೋವಿಡ್ ಸೋಂಕು ತಗುಲಿರುವುದು ದುಖದ ವಿಷಯ. ಪ್ರಣಾಬ್ ಮುಖರ್ಜಿಯವರು ಶೀಘ್ರ ಗುಣಮುಖರಾಗಿ ಮತ್ತೆ ನಮ್ಮೆಲ್ಲರಿಗೂ ಮಾರ್ಗದರ್ಶನ ಮಾಡಲಿ. ನಮ್ಮೆಲ್ಲರ ಹಾರೈಕೆ ಮತ್ತು ಪ್ರಾರ್ಥನೆ ಅವರ ಜೊತೆಗಿದೆ.@CitiznMukherjee

    — Eshwar Khandre (@eshwar_khandre) August 10, 2020 " class="align-text-top noRightClick twitterSection" data=" ">

ತಮಗೆ ಕೊರೊನಾ ಸೋಂಕು ಇರುವ ಬಗ್ಗೆ ಪ್ರಣಬ್ ಮುಖರ್ಜಿ ಅವರೇ ಟ್ವೀಟ್ ಮಾಡಿ ವಿವರ ನೀಡಿದ್ದರು. ಇದರ ಬೆನ್ನಲ್ಲೇ ಅವರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ಸಹ ನಡೆಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.