ETV Bharat / state

ಬಸವೇಶ್ವರ ಪ್ರತಿಮೆ ಭಗ್ನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೈ ನಾಯಕರ ಆಗ್ರಹ - ಬಸವೇಶ್ವರ ಪ್ರತಿಮೆ ಭಗ್ನಗೊಳಿಸಿದವರ ವಿರುದ್ಧ ಕಾಂಗ್ರೆಸ್ ನಾಯಕರು ಟ್ವೀಟ್

ಬಿಜಗುಪ್ಪಿ ಗ್ರಾಮದಲ್ಲಿ ಕಿಡಗೇಡಿಗಳಿಂದ ವಿಶ್ವಗುರು ಬಸವೇಶ್ವರ ಮೂರ್ತಿ ಭಗ್ನಗೊಳಿಸಿದ್ದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಟ್ವೀಟ್​ ಮಾಡಿದ್ದಾರೆ.

Congress leaders tweeted Basaveshwara statue was damaged Case
ಬಸವೇಶ್ವರ ಪ್ರತಿಮೆ ಭಗ್ನಗೊಳಿಸಿದ ಪ್ರಕರಣ
author img

By

Published : Nov 9, 2020, 2:14 PM IST

ಬೆಂಗಳೂರು: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಕಿಡಗೇಡಿಗಳಿಂದ ವಿಶ್ವಗುರು ಬಸವೇಶ್ವರ ಮೂರ್ತಿ ಭಗ್ನಗೊಳಿಸಿದ್ದನ್ನು ಖಂಡಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಿ ಎಂದು ಸರ್ಕಾರವನ್ನ ಆಗ್ರಹಿಸಿದ್ದಾರೆ.

  • ಇಂಗ್ಲೆಂಡ್ ನಲ್ಲಿಯೂ ಬಸವಣ್ಣನವರ ಪ್ರತಿಮೆ ಸ್ಥಾಪಿಸಿ ಗೌರವಿಸಲಾಗಿದೆ. ಇಂಥ ಮಹಾಮಹಿಮರ ಪ್ರತಿಮೆ ಭಗ್ನಗೊಳಿಸಿರುವುದು ನಿಜಕ್ಕೂ ದುರ್ದೈವ. ಕಿಡಿಗೇಡಿಗಳನ್ನು ಪತ್ತೆ ಮಾಡಿ ಸರ್ಕಾರ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಎಲ್ಲ ಪ್ರತಿಮೆಗಳ ಬಳಿ ಸಿಸಿ ಟಿವಿ ಕ್ಯಾಮರಾ ಅಳವಡಿಸುವ ಕಾರ್ಯ ಆಗಬೇಕು ಎಂದು ಒತ್ತಾಯಿಸುತ್ತೇನೆ.2/2@CMofKarnataka @BSYBJP

    — Eshwar Khandre (@eshwar_khandre) November 9, 2020 " class="align-text-top noRightClick twitterSection" data=" ">

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಮ್ಮ ಟ್ವೀಟ್​​ನಲ್ಲಿ, ಬೆಳಗಾವಿ ಜಿಲ್ಲೆ ರಾಮದುರ್ಗದ ಬಿಜಗುಪ್ಪಿಯಲ್ಲಿ ವಿಶ್ವಗುರು ಬಸವೇಶ್ವರರ ಪ್ರತಿಮೆ ಭಗ್ನ ಮಾಡಿರುವುದು ಅಕ್ಷಮ್ಯ. ಇಡೀ ಮನುಕುಲಕ್ಕೆ ಮಾನವತೆಯ ಸಂದೇಶ ಸಾರಿದ, ಸಮ ಸಮಾಜದ ಪರಿಕಲ್ಪನೆ ಕಟ್ಟಿಕೊಟ್ಟ 12ನೇ ಶತಮಾನದ ಕ್ರಾಂತಿಪುರುಷ ಬಸವೇಶ್ವರರು ಜಗತ್ತಿಗೆ ಆದರ್ಶರಾಗಿದ್ದಾರೆ. ಇಂಗ್ಲೆಂಡ್ ನಲ್ಲಿಯೂ ಬಸವಣ್ಣನವರ ಪ್ರತಿಮೆ ಸ್ಥಾಪಿಸಿ ಗೌರವಿಸಲಾಗಿದೆ. ಇಂತಹ ಮಹಾಮಹಿಮರ ಪ್ರತಿಮೆ ಭಗ್ನಗೊಳಿಸಿರುವುದು ನಿಜಕ್ಕೂ ದುರ್ದೈವ. ಕಿಡಿಗೇಡಿಗಳನ್ನು ಪತ್ತೆ ಮಾಡಿ ಸರ್ಕಾರ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಎಲ್ಲ ಪ್ರತಿಮೆಗಳ ಬಳಿ ಸಿಸಿ ಟಿವಿ ಕ್ಯಾಮರಾ ಅಳವಡಿಸುವ ಕಾರ್ಯ ಆಗಬೇಕು ಎಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

  • ಸಮಾಜಘಾತುಕ ಶಕ್ತಿಗಳನ್ನ ಸದೆ ಬಡೆಯಿರಿ

    ಬೆಳಗಾವಿಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಮೂರ್ತಿಯನ್ನ ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ಶಾಂತಿ ಕದಡಲು ಸಮಾಜಘಾತಕ ದುಷ್ಟಶಕ್ತಿಗಳು ಇಂತಹ ಕೃತ್ಯವೆಸಗಿದ್ದಾರೆ. 1/2#Basavanna #NorthKarnataka #Belagavi pic.twitter.com/TIDQXa228V

    — S R Patil (@srpatilbagalkot) November 9, 2020 " class="align-text-top noRightClick twitterSection" data=" ">

ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್ ಆರ್ ಪಾಟೀಲ್ ತಮ್ಮ ಟ್ವೀಟ್​​​​​​​ನಲ್ಲಿ, ಸಮಾಜಘಾತುಕ ಶಕ್ತಿಗಳನ್ನ ಸದೆ ಬಡೆಯಿರಿ. ಬೆಳಗಾವಿಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಮೂರ್ತಿಯನ್ನ ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ಶಾಂತಿ ಕದಡಲು ಸಮಾಜಘಾತಕ ದುಷ್ಟಶಕ್ತಿಗಳು ಇಂತಹ ಕೃತ್ಯವೆಸಗಿದ್ದಾರೆ. ಈ ಪ್ರಕರಣವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಗಂಭೀರವಾಗಿ ಪರಿಗಣಿಸಿ, ಈ ದುಷ್ಕೃತ್ಯ ಎಸಗಿದವರನ್ನು ತಕ್ಷಣವೇ ಬಂಧಿಸಿ ಸೂಕ್ತ ರೀತಿಯಲ್ಲಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.