ETV Bharat / state

ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲಿ: ಟ್ವೀಟ್​ ಮೂಲಕ ಹಾರೈಸಿದ ಕಾಂಗ್ರೆಸ್​ ನಾಯಕರು - ಡಿ.ಕೆ. ಶಿವಕುಮಾರ್ ಟ್ವೀಟ್

ಸಿದ್ದರಾಮಯ್ಯ ಶೀಘ್ರ ಚೇತರಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ಜಮೀರ್ ಅಹ್ಮದ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹಮದ್ ಸೇರಿದಂತೆ ಹಲವು ನಾಯಕರು, ಮಾಜಿ ಸಚಿವರು ಶಾಸಕರು ಹಾಗೂ ಮುಖಂಡರು ಹಾರೈಸಿದ್ದಾರೆ.

congress leaders tweet
ಸಿದ್ದರಾಮಯ್ಯ ಶೀಘ್ರ ಚೇತರಿಕೆಗೆ ಕಾಂಗ್ರೆಸ್ ನಾಯಕರ ಹಾರೈಕೆ..
author img

By

Published : Aug 4, 2020, 9:37 AM IST

ಬೆಂಗಳೂರು: ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಶೀಘ್ರ ಚೇತರಿಕೆಗೆ ಕಾಂಗ್ರೆಸ್ ನಾಯಕರು ಹಾರೈಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ಜಮೀರ್ ಅಹ್ಮದ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹಮದ್ ಸೇರಿದಂತೆ ಹಲವು ನಾಯಕರು, ಮಾಜಿ ಸಚಿವರು ಶಾಸಕರು ಹಾಗೂ ಮುಖಂಡರು ಹಾರೈಸಿದ್ದಾರೆ.

congress leaders tweet
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದು, ನಮ್ಮ ಶಾಸಕಾಂಗ ಪಕ್ಷದ ನಾಯಕರು, ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ ಕೋವಿಡ್ ಸೋಂಕಿನಿಂದ ಆದಷ್ಟು ಬೇಗ ಚೇತರಿಸಿಕೊಂಡು ಆರೋಗ್ಯವಂತರಾಗಿ ಹಿಂದಿರುಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

congress leaders tweet
ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್
  • ಮಾನ್ಯ ಮಾಜಿ ಸಿಎಂ ಮತ್ತು ವಿರೋಧ ಪಕ್ಷದ ನಾಯಕರಾದ @siddaramaiah ಅವರಿಗೆ ಕೊರೋನಾ ಪಾಸಿಟಿವ್ ಸುದ್ದಿ ಕೇಳಿ ಮನಸ್ಸಿಗೆ ಆಘಾತವಾಗಿದೆ.
    ವಿರೋಧ ಪಕ್ಷದ ನಾಯಕರಾಗಿ ರಚನಾತ್ಮಕ ಕಾರ್ಯಗಳಿಂದ ಸದಾ ಕ್ರಿಯಾಶೀಲರಾಗಿರುವ ಮಾನ್ಯ ಸಿದ್ದರಾಮಯ್ಯ ಅವರು ಆದಷ್ಟು ಬೇಗ ಕೋವಿಡ್‌ನಿಂದ ಗುಣಮುಖರಾಗಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ.

    — Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 4, 2020 " class="align-text-top noRightClick twitterSection" data=" ">
ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಿಎಂ ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೊರೊನಾ ಪಾಸಿಟಿವ್ ಸುದ್ದಿ ಕೇಳಿ ಮನಸ್ಸಿಗೆ ಆಘಾತವಾಗಿದೆ. ಪ್ರತಿ ಪಕ್ಷದ ನಾಯಕರಾಗಿ ರಚನಾತ್ಮಕ ಕಾರ್ಯಗಳಿಂದ ಸದಾ ಕ್ರಿಯಾಶೀಲರಾಗಿರುವ ಮಾನ್ಯ ಸಿದ್ದರಾಮಯ್ಯ ಅವರು ಆದಷ್ಟು ಬೇಗ ಕೋವಿಡ್‌ನಿಂದ ಗುಣಮುಖರಾಗಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
  • ಮಾನ್ಯ ವಿರೋಧ ಪಕ್ಷದ ನಾಯಕರು ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮುಖ್ಯಸ್ಥರೂ ಆದ ಶ್ರೀ @siddaramaiah ಅವರು ಕರೋನಾ ಸೋಂಕಿಗೆ ಒಳಗಾಗಿರುವುದು ಬೇಸರದ ಸಂಗತಿ.

    ಈ ಸಂಕಷ್ಟದ ವೇಳೆ ಆದಷ್ಟು ಬೇಗ ಅವರು ಗುಣಮುಖರಾಗಿ ನಾಡಿನ ಜನರ ಸೇವೆಗೆ ಮರಳಲಿ ಎಂದು ಮನದುಂಬಿ ಹಾರೈಸುತ್ತಿದ್ದೇವೆ. pic.twitter.com/OkBC01IAEI

    — Karnataka Congress (@INCKarnataka) August 4, 2020 " class="align-text-top noRightClick twitterSection" data=" ">

ಇನ್ನು ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ, ಪ್ರತಿ ಪಕ್ಷದ ನಾಯಕರು ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮುಖ್ಯಸ್ಥರೂ ಆದ ಸಿದ್ದರಾಮಯ್ಯ ಅವರು ಕೊರೊನಾ ಸೋಂಕಿಗೆ ಒಳಗಾಗಿರುವುದು ಬೇಸರದ ಸಂಗತಿ. ಈ ಸಂಕಷ್ಟದ ವೇಳೆ ಆದಷ್ಟು ಬೇಗ ಅವರು ಗುಣಮುಖರಾಗಿ ನಾಡಿನ ಜನರ ಸೇವೆಗೆ ಮರಳಲಿ ಎಂದು ಮನದುಂಬಿ ಹಾರೈಸುತ್ತಿದ್ದೇವೆ ಎಂದಿದೆ.

congress leaders tweet
ಮಾಜಿ ಸಚಿವ ಜಮೀರ್ ಅಹ್ಮದ್

ಮಾಜಿ ಸಚಿವ ಜಮೀರ್ ಅಹ್ಮದ್ ಟ್ವೀಟ್ ಮಾಡಿದ್ದು, ಸಿದ್ದರಾಮಯ್ಯ ಅವರು ಆದಷ್ಟು ಬೇಗ ಗುಣಮುಖರಾಗಿ ಉತ್ತಮ ಆರೋಗ್ಯದೊಂದಿಗೆ ಆಸ್ಪತ್ರೆಯಿಂದ ಮರಳಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ. ಅಲ್ಲದೇ ಇತರ ನಾಯಕರು ಕೂಡ ಸಿದ್ದರಾಮಯ್ಯ ಅವರ ಶೀಘ್ರ ಚೇತರಿಕೆಗೆ ಹಾರೈಸಿದ್ದು, ಆದಷ್ಟು ಬೇಗ ಗುಣಮುಖರಾಗಲಿ ಎಂದು ಆಶಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.