ಬೆಂಗಳೂರು : ರಾಜ್ಯ ಕಾಂಗ್ರೆಸ್ ನಾಯಕರು ನಾಡಿನ ಜನತೆಗೆ ಯುಗಾದಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಹೊಸವರ್ಷ ನಾಡಿನ ಜನತೆಗೆ ಆಯಸ್ಸು, ಆರೋಗ್ಯ, ಭಾಗ್ಯ, ನೆಮ್ಮದಿ, ಶಾಂತಿ, ಐಶ್ಚರ್ಯ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸಿದ್ದಾರೆ. ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಡಿ.ಕೆ. ಶಿವಕುಮಾರ್, ಸಚಿವ ಕೃಷ್ಣ ಭೈರೇಗೌಡ ಸೇರಿದಂತೆ ಹಲವು ಗಣ್ಯರು ನಾಡಿನ ಜನತೆಗೆ ಶುಭ ಕೋರಿದ್ದಾರೆ.
ಡಿಸಿಎಂ ಡಾ. ಜಿ. ಪರಮೇಶ್ವರ್ ಅವರು, ಹೊಸ ವರುಷವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಹರುಷ, ಹುರುಪು ಹಾಗೂ ಬದಲಾವಣೆಯನ್ನು ತರಲಿ. ನಾಡಿನ ಸಮಸ್ತ ಜನರಿಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು! ಎಂದು ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಮ್ಮ ಸಂದೇಶದಲ್ಲಿ, ಕಷ್ಟ ಸುಖಗಳನ್ನು ಸಮಾನವಾಗಿ ಕಾಣಬೇಕೆನ್ನುವ ಚಿರಂತನ ಸಂದೇಶವನ್ನು ಸಾರುವ ವಿಕಾರಿ ನಾಮ ಸಂವತ್ಸರ ಯುಗಾದಿ ಸಂದರ್ಭದಲ್ಲಿ ಕನ್ನಡ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಗಳು. ನೂತನ ಸಂವತ್ಸರದಲ್ಲಿ ನಾಡು ಎಲ್ಲಾ ರೀತಿಯ ಪ್ರಗತಿ ಕಂಡು ಜನತೆಗೆ ಹೆಚ್ಚಿನ ಸಂತೋಷ ಮತ್ತು ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ’ ಎಂದಿದ್ದಾರೆ.
ಸಚಿವ ಡಿ.ಕೆ. ಶಿವಕುಮಾರ್ ತಮ್ಮ ವೀಡಿಯೊ ಸಂದೇಶದಲ್ಲಿ, “ಕರ್ನಾಟಕದ ಜನತೆಗೆ ಇದೊಂದು ವಿಶೇಷ ಸಂಭ್ರಮ. ಪ್ರಜಾಪ್ರಭುತ್ವದ ಹಬ್ಬ ಆಚರಿಸುತ್ತಿರುವ ಸಂದರ್ಭದಲ್ಲಿ ನಾಡಿನ ಜನತೆಯ ಹೊಸ ವರ್ಷ ಕೂಡ ಆಚರಿಸುತ್ತಿದ್ದೇವೆ. ಎಲ್ಲರಿಗೂ ಆರೋಗ್ಯ, ನೆಮ್ಮದಿ, ಸುಖ, ಶಾಂತಿ, ಮಳೆ, ಬೆಳೆ ಆಗಲಿ, ಎಲ್ಲಾ ವರ್ಗದ ಜನರಿಗೆ ಯುಗಾದಿ ಹಬ್ಬದ ಶುಭಾಶಯವನ್ನು ಸರ್ಕಾರದ ಪರವಾಗಿ ಹಾಗೂ ವೈಯಕ್ತಿಕವಾಗಿ ಹಾರೈಸುತ್ತೇನೆ ಎಂದರು.