ETV Bharat / state

ಎಐಸಿಸಿ ಹೊಸ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕರ ಸ್ವಾಗತ; ಟ್ವೀಟ್​ ಮೂಲಕ ವಿಶ್ - ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರು ಅಭಿನಂದನೆ

ರಾಜ್ಯದ ಮೂವರು ನಾಯಕರಾದ ಹೆಚ್ ಕೆ ಪಾಟೀಲ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡರಿಗೆ ಹೊಸ ಜವಾಬ್ದಾರಿ ವಹಿಸಿಕೊಳ್ಳುತ್ತಿರುವುದಕ್ಕೆ ಅಭಿನಂದನೆಗಳು..

Congress leaders
Congress leaders
author img

By

Published : Sep 12, 2020, 7:14 PM IST

ಬೆಂಗಳೂರು : ರಾಷ್ಟ್ರೀಯ ಕಾಂಗ್ರೆಸ್ ಕಳೆದ ರಾತ್ರಿ ಪ್ರಕಟಿಸಿರುವ ಹೊಸ ನೇಮಕ ಪ್ರಕ್ರಿಯೆಗೆ ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೊಸ ನೇಮಕಕ್ಕೆ ಸ್ವಾಗತ ಕೋರಿದ್ದಾರೆ. ರಾಜ್ಯ ನಾಯಕರಿಗೆ ಸಿಕ್ಕ ಉತ್ತಮ ಸ್ಥಾನಮಾನಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್​ನಲ್ಲಿ, ಕರ್ನಾಟಕದ ಉಸ್ತುವಾರಿ ವಹಿಸಿಕೊಂಡಿರುವ ರಂದೀಪ್ ಸಿಂಗ್ ಸುರ್ಜೆವಾಲಾ ಅವರಿಗೆ ಅಭಿನಂದನೆಗಳು. ಇವರಿಗೆ ಜವಾಬ್ದಾರಿ ವಹಿಸುತ್ತಿರುವ ನಿಕಟಪೂರ್ವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಅವರಿಗೂ ನೀಡಿದ ಸಹಕಾರ ಮತ್ತು ಅಮೂಲ್ಯ ಅಭಿವೃದ್ಧಿ ಪೂರಕ ನಡೆಗಳಿಗೆ ಅಭಿನಂದನೆಗಳು.

ರಾಜ್ಯದ ಮೂವರು ನಾಯಕರಾದ ಹೆಚ್ ಕೆ ಪಾಟೀಲ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡರಿಗೆ ಹೊಸ ಜವಾಬ್ದಾರಿ ವಹಿಸಿಕೊಳ್ಳುತ್ತಿರುವುದಕ್ಕೆ ಅಭಿನಂದನೆಗಳು ಎಂದಿದ್ದಾರೆ.

Congress leaders
ಟ್ವೀಟ್​ ಮೂಲಕ ವಿಶ್ ಮಾಡಿದ ನಾಯಕರು

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮ್ಮ ಟ್ವೀಟ್​ನಲ್ಲಿ, ಕರ್ನಾಟಕದ ಎಐಸಿಸಿ ಉಸ್ತುವಾರಿ ಆಗಿ ನೇಮಕಗೊಂಡಿದ್ದಕ್ಕಾಗಿ ರಂದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಅಭಿನಂದನೆಗಳು ಮತ್ತು ಸ್ವಾಗತ. ಎಐಸಿಸಿ ಕೇಂದ್ರ ಚುನಾವಣಾ ಪ್ರಾಧಿಕಾರದ ಸದಸ್ಯರಾಗಿ ನೇಮಕಗೊಂಡಿದ್ದಕ್ಕಾಗಿ ಹೆಚ್ ಕೆ ಪಾಟೀಲ್, ದಿನೇಶ್ ಗುಂಡೂರಾವ್ ಮತ್ತು ಎಐಸಿಸಿ ರಾಜ್ಯ ಉಸ್ತುವಾರಿ ಆಗಿ ನೇಮಕಗೊಂಡಿರುವ ಕೃಷ್ಣ ಬೈರೇಗೌಡ ಅವರನ್ನು ಅಭಿನಂದಿಸುತ್ತಿದ್ದೇನೆ ಎಂದಿದ್ದಾರೆ.

Congress leaders
ಟ್ವೀಟ್​ ಮೂಲಕ ವಿಶ್ ಮಾಡಿದ ನಾಯಕರು

ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಮ್ಮ ಟ್ವೀಟ್​ನಲ್ಲಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ನಿಯೋಜಿತರಾಗಿರುವ ರಂದೀಪ್ ಸಿಂಗ್ ಸುರ್ಜೇವಾಲಾರನ್ನು ಹೃದಯಪೂರ್ವಕವಾಗಿ ಸ್ವಾಗತ್ತಿಸುತ್ತೇನೆ. ತಮ್ಮ ದೂರದೃಷ್ಟಿ ಹಾಗೂ ಅಪಾರ ಅನುಭವದಿಂದ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಇನ್ನಷ್ಟು ಬಲಶಾಲಿಯಾಗಲಿದೆ ಎಂಬ ವಿಶ್ವಾಸವಿದೆ. ಇವರ ನೇಮಕದ ವಿಚಾರದಲ್ಲಿ ನಿರ್ಧಾರ ಕೈಗೊಂಡಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಡೆ ಸ್ವಾಗತಿಸುತ್ತೇನೆ ಎಂದಿದ್ದಾರೆ.

Congress leaders
ಟ್ವೀಟ್​ ಮೂಲಕ ವಿಶ್ ಮಾಡಿದ ನಾಯಕರು

ಮಾಜಿ ಸಚಿವ ಕೃಷ್ಣ ಬೈರೇಗೌಡ ಟ್ವೀಟ್ ಮಾಡಿದ್ದು, ಪಕ್ಷದ ಜವಾಬ್ದಾರಿ ಮತ್ತು ನನಗೆ ನಿಯೋಜಿಸಲಾದ ಕಾರ್ಯಗಳಿಗಾಗಿ ಎಐಸಿಸಿ ಅಧ್ಯಕ್ಷರಿಗೆ ಧನ್ಯವಾದಗಳು. ಜವಾಬ್ದಾರಿಗೆ ನ್ಯಾಯ ಒದಗಿಸಲು ನನ್ನ ಕೈಲಾದಷ್ಟು ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

Congress leaders
ಟ್ವೀಟ್​ ಮೂಲಕ ವಿಶ್ ಮಾಡಿದ ನಾಯಕರು

ಮಾಜಿ ಸಚಿವ ಹೆಚ್ ಕೆ ಪಾಟೀಲ್ ಟ್ವೀಟ್​ನಲ್ಲಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿ ಸಮಿತಿಯ ಖಾಯಂ ಸದಸ್ಯರಾಗಿ ಮತ್ತು ಮಹಾರಾಷ್ಟ್ರ ರಾಜ್ಯದ ಉಸ್ತುವಾರಿಯಾಗಿ ಆಯ್ಕೆ ಮಾಡಿದ ರಾಷ್ಟ್ರ ಮತ್ತು ರಾಜ್ಯ ನಾಯಕರಿಗೆ ನನ್ನ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ತನ್ನ ಟ್ವೀಟ್​ನಲ್ಲಿ, ಎಐಸಿಸಿ ಕಾರ್ಯಕಾರಿ ಸಮಿತಿ ಹಾಗೂ ಪಕ್ಷದ ಜವಾಬ್ದಾರಿಗಳಲ್ಲಿ ಸಂಘಟನಾತ್ಮಕ ಬದಲಾವಣೆಗಳನ್ನು ತಂದ ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರಿಗೆ ಧನ್ಯವಾದಗಳು ಎಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.