ETV Bharat / state

ಕಾಂಗ್ರೆಸ್ ಶಾಸಕಾಂಗ ಸಭೆ ಆರಂಭ: ಬಜೆಟ್ ಮೇಲಿನ ಚರ್ಚೆ ಸಿದ್ಧತೆಗೆ ಸಮಾಲೋಚನೆ - Congress Legislative Assembly in Vidhanasoudha

ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದ್ದು ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.

congress meeting today
ಇಂದು ಕಾಂಗ್ರೆಸ್ ಶಾಸಕಾಂಗ ಸಭೆ
author img

By

Published : Mar 10, 2020, 9:38 AM IST

Updated : Mar 10, 2020, 10:53 AM IST

ಬೆಂಗಳೂರು: ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದ್ದು ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಆರಂಭವಾಗಿದ್ದು, ಸಭೆಯಲ್ಲಿ ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಹಲವು ಕೈ ನಾಯಕರು ಪಾಲ್ಗೊಂಡಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಸಭೆ ಆರಂಭ

ನಿಗದಿತ ಸಂಖ್ಯೆಯಲ್ಲಿ ಶಾಸಕರು ಆಗಮಿಸಿಲ್ಲ. ಆದರೂ ವಿಧಾನಮಂಡಲ ಕಲಾಪ ಆರಂಭಕ್ಕೆ ಮುನ್ನವೇ ಶಾಸಕಾಂಗ ಸಭೆ ಪೂರ್ಣಗೊಳಿಸಿ ಶಾಸಕರಿಗೆ ನೀಡಬೇಕಾದ ನಿರ್ದೇಶನಗಳನ್ನು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಸಭೆಯನ್ನು ಆರಂಭಿಸಲಾಗಿದೆ.

ಇಂದಿನಿಂದ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಆರಂಭವಾಗಲಿದೆ. ಈ ಹಿನ್ನೆಲೆ ಹಿರಿಯ ಸದಸ್ಯರು ಚರ್ಚಿಸಬೇಕಾದ ವಿಚಾರಗಳು, ಕಿರಿಯ ಸದಸ್ಯರು ಪ್ರಸ್ತಾಪಿಸಬೇಕಾಗಿರುವ ವಿಚಾರಗಳ ಕುರಿತು ಸಿದ್ದರಾಮಯ್ಯ ಮಾರ್ಗದರ್ಶನ ನೀಡಲಿದ್ದಾರೆ. ಇದಲ್ಲದೆ ಹಲವು ವಿಚಾರಗಳ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದ್ದು ಸಭೆಯ ಬಳಿಕ ಸಿದ್ದರಾಮಯ್ಯ ಹಾಗೂ ಇತರೆ ಸದಸ್ಯರು ಉಭಯ ಸದನಗಳ ಬಜೆಟ್ ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಯೋಜನೆ ಕೈ ಬಿಟ್ಟ ಪ್ರಸ್ತಾಪ :

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದ ಹಲವು ಯೋಜನೆಗಳಿಗೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕತ್ತರಿ ಹಾಕಿದೆ. ಆರ್ಥಿಕ ಕೊರತೆ ಕಾರಣವನ್ನು ಇದಕ್ಕೆ ನೀಡಿದೆ. ತಮ್ಮ ಯೋಜನೆಗಳನ್ನು ಕೈ ಬಿಟ್ಟಿರುವ ಕುರಿತು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ. ಇದಕ್ಕೆ ಎದುರಾಗುವ ಸರ್ಕಾರದ ಪ್ರತಿವಾದವನ್ನು ಸಮರ್ಥವಾಗಿ ತಮ್ಮ ಸದಸ್ಯರು ಹೇಗೆ ಎದುರಿಸಬೇಕು ಎಂಬ ಕುರಿತು ಸಿದ್ದರಾಮಯ್ಯ ಸಭೆಯಲ್ಲಿ ಮಾರ್ಗದರ್ಶನ ನೀಡಲಿದ್ದಾರೆ. ವಿಧಾನಮಂಡಲದ ಉಭಯ ಸದನಗಳಲ್ಲೂ ಆಡಳಿತ ಪಕ್ಷವನ್ನು ಸಮರ್ಥವಾಗಿ ಎದುರಿಸುವ ಪ್ರತಿಪಾದನೆಯನ್ನು ಮಂಡಿಸಬೇಕು ಎಂಬ ಕುರಿತು ಈ ಸಂದರ್ಭ ಶಾಸಕರಿಗೆ ಸಿದ್ದರಾಮಯ್ಯ ಮಾಹಿತಿ ನೀಡಲಿದ್ದಾರೆ.

ತುಕಾರಾಂಗೆ ಅಭಿನಂದನೆ :

ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನೂತನ ಕಾರ್ಯದರ್ಶಿಯಾಗಿ ನೇಮಕವಾಗಿರುವ ತುಕಾರಾಂ ಅವರನ್ನು ಅಭಿನಂದಿಸಲಾಯಿತು.

Last Updated : Mar 10, 2020, 10:53 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.