ETV Bharat / state

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಹುತಾತ್ಮ ಯೋಧರಿಗೆ ಗೌರವ

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸಭೆ ಆರಂಭವಾಗಿದ್ದು, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಮೇಲ್ಮನೆ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಉಪಸ್ಥಿತರಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಆರಂಭ

author img

By

Published : Jun 18, 2020, 11:26 AM IST

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಮೇಲ್ಮನೆ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಉಪಸ್ಥಿತರಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಆರಂಭ

ಇದೇ ಸಂದರ್ಭ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು. ಯೋಧರ ಶೌರ್ಯ, ತ್ಯಾಗ, ಬಲಿದಾನದ ಗುಣಗಾನ ಮಾಡಿ ಯೋಧರ ಆತ್ಮಕ್ಕೆ ಸಿದ್ದರಾಮಯ್ಯ ಶಾಂತಿ ಕೋರಿದರು. ಇದೇ ವೇಳೆ ಯೋಧರ ಗೌರವಾರ್ಥ ಮೌನ ಆಚರಿಸಲಾಯಿತು.

ಮೇಲ್ಮನೆ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ಮಾತನಾಡಿ, ನಾನು ಆಯ್ಕೆಯನ್ನು ಉಹಿಸಿರಲಿಲ್ಲ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವಕಾಶ ಕೊಟ್ಟಿದ್ದಾರೆ. ಅವರು ಹೇಳಿದಂತೆ ಕೆಲಸ ಮಾಡುತ್ತೇನೆ. ರಾಜ್ಯ, ಕೇಂದ್ರ ರಾಜಕಾರಣ ಬೇರೆ ಬೇರೆ ಅಲ್ಲ. ರಾಜ್ಯ ರಾಜಕಾರಣ ಬೆಂಗಳೂರಿನಿಂದ ನಡೆಯುತ್ತೆ. ಕೇಂದ್ರ ರಾಜಕಾರಣ ದೆಹಲಿಯಿಂದ ನಡೆಯುತ್ತೆ. ಆಕಾಂಕ್ಷಿಗಳಿಗೆ ಎಲ್ಲರಿಗೂ ಆಸೆಯಿರುತ್ತದೆ. ಕೆಲವು ಕಾರಣಗಳಿಂದ ತೀರ್ಮಾನ ತೆಗೆದುಕೊಂಡಿರುತ್ತಾರೆ. ಡಿ.ಕೆ. ಶಿವಕುಮಾರ್​, ಸಿದ್ದರಾಮಯ್ಯ ಕಳಿಸಿರೋ ಪಟ್ಟಿಯನ್ನು ಗಮನಿಸಿ ಹೈಕಮಾಂಡ್ ತೀರ್ಮಾನಿಸಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.