ಬೆಂಗಳೂರು : ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್‌ಗೆ ಪೂರ್ಣ ಬಹುಮತ ಸಿಕ್ಕಿದೆ. ಅತಂತ್ರ ಸರ್ಕಾರ ರಚನೆಯಾಗಲಿದೆ ಎಂಬ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾಗಿವೆ. ಸರ್ಕಾರ ರಚನೆಯ ಕಸರತ್ತು ನಡೆಸುವ ಸಂಬಂಧ ನಾಳೆ ಕಾಂಗ್ರೆಸ್ ಮಹತ್ವದ ಶಾಸಕಾಂಗ ಪಕ್ಷದ ಸಭೆ ಕರೆದಿದೆ.
ಕಾಂಗ್ರೆಸ್ ಪೂರ್ಣ ಬಹುಮತಕ್ಕಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 122 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 71 ಸ್ಥಾನಗಳಲ್ಲಿ ಮುಂದಿದೆ. ಇನ್ನು ಜೆಡಿಎಸ್ 26 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಇದನ್ನೂ ಓದಿ : ಕಾಂಗ್ರೆಸ್‌ಗೆ ನಿಚ್ಚಳ ಬಹುಮತ: ರಾಜ್ಯದ ಮತದಾರನ ಮಹಾತೀರ್ಪು!