ETV Bharat / state

ಕೇವಲ 20 ನಿಮಿಷಕ್ಕೆ ಮುಗಿದ ಸಭೆ: ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಆಯ್ಕೆ - etv bharat kannada

ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯಲ್ಲಿ ಶಾಸಕರಿಂದ ಸಹಿ ಸಂಗ್ರಹಿಸಿದ್ದು ಒಟ್ಟಾರೆ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಿ ಸರ್ಕಾರ ರಚಿಸುವ ಬಹುಮತವಿದ್ದು ಅವಕಾಶ ನೀಡುವಂತೆ ಕೋರಲಿದ್ದಾರೆ.

congress-legislative-session-ended-in-just-20-minutes-decision-to-move-to-raj-bhavan
ಕೇವಲ 20 ನಿಮಿಷಕ್ಕೆ ಮುಗಿದ ಕಾಂಗ್ರೆಸ್ ಶಾಸಕಾಂಗ ಸಭೆ; ರಾಜ ಭವನಕ್ಕೆ ತೆರಳಲು ನಿರ್ಧಾರ
author img

By

Published : May 18, 2023, 8:46 PM IST

Updated : May 18, 2023, 9:50 PM IST

ಕೇವಲ 20 ನಿಮಿಷಕ್ಕೆ ಮುಗಿದ ಸಭೆ: ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಆಯ್ಕೆ

ಬೆಂಗಳೂರು: ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಹಿಂಭಾಗದ ಇಂದಿರಾಗಾಂಧಿ ಭವನದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಆ ಬಳಿಕ ಸರ್ಕಾರ ರಚನೆ ಕುರಿತು ರಾಜ್ಯಪಾಲರನ್ನು ಭೇಟಿಯಾಗಲು ಸಿದ್ದರಾಮಯ್ಯ ಮತ್ತು ಡಿಕೆಶಿ ಒಂದೇ ವಾಹನದಲ್ಲಿ ರಾಜಭವನಕ್ಕೆ ತೆರಳಿದರು.

  • #Karnataka | Congress Legislative Party (CLP) meeting was held at the party office in Bengaluru today.

    The CLP approved the name of Siddaramaiah as the CLP leader.

    (Pictures: Karnataka Pradesh Congress Committee) pic.twitter.com/mmKBGTXz8W

    — ANI (@ANI) May 18, 2023 " class="align-text-top noRightClick twitterSection" data=" ">

ಸಭೆ ಆರಂಭವಾಗುತ್ತಿದ್ದಂತೆ ಡಿಕೆ ಶಿವಕುಮಾರ್​, ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡುವಂತೆ ಒಂದು ಸಾಲಿನ ನಿರ್ಣಯವನ್ನು ಮಂಡಿಸಿದರು. ಈ ನಿರ್ಣಯಕ್ಕೆ ಭಾಗವಹಿಸಿದ್ದ ಎಲ್ಲ 135 ಶಾಸಕರು ಅನುಮೋದನೆ ನೀಡಿದರು. ಈ ಮೂಲಕ ಸಿದ್ದರಾಮಯ್ಯ ಕಾಂಗ್ರೆಸ್​ ಪಕ್ಷದ ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಅಧಿಕೃತವಾಗಿ ಆಯ್ಕೆ ಆದರು. ಉಭಯ ನಾಯಕರ ನೇತೃತ್ವದಲ್ಲಿ ಶಾಸಕಾಂಗ ಸಭೆಯಲ್ಲಿ ಹಿರಿ ಕಿರಿಯ ಶಾಸಕರೆಲ್ಲ ಭಾಗಿಯಾಗಿದ್ದರು.

20 ನಿಮಿಷಕ್ಕೆ ಮುಗಿದ ಸಭೆ: ಕಾಂಗ್ರೆಸ್ ಶಾಸಕಾಂಗ ಸಭೆ ಕೇವಲ 20 ನಿಮಿಷಕ್ಕೆ ಮುಕ್ತಾಯವಾಯಿತು. ಇಂದು ಎಂಟು ಮೂವತ್ತಕ್ಕೆ ರಾಜ್ಯಪಾಲರ ಸಮಯ ಕೋರಲಾಗಿದ್ದು ಈ ಹಿನ್ನಲೆ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಜಭವನಕ್ಕೆ ತೆರಳಿದರು. ಶನಿವಾರ ಮಧ್ಯಾಹ್ನ 12:30ಕ್ಕೆ ನೂತನ ಸರ್ಕಾರದ ಪದಗ್ರಹಣ ಸಮಾರಂಭ ನಡೆಯಲಿದ್ದು ತಾವು ಅದನ್ನು ನಡೆಸಿ ಕೊಡುವಂತೆ ಮನವಿ ಮಾಡಿದರು.

ಶನಿವಾರ ನೂತನ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅಧಿಕಾರ ಸ್ವೀಕಾರ ಮಾಡಲಿದ್ದು ಇವರೊಂದಿಗೆ ಎಷ್ಟು ಮಂದಿ ಸಚಿವರು ಪದಗ್ರಹಣ ಮಾಡಬೇಕು ಎಂಬ ವಿಚಾರವಾಗಿ ಚರ್ಚೆ ನಡೆದಿದೆ. ಸಾಕಷ್ಟು ಶಾಸಕರು ಸಚಿವ ಸ್ಥಾನ ಆಕಾಂಕ್ಷೆ ಗಳಾಗಿದ್ದು ನಿಯೋಜಿತ ಸಿಎಂ ಹಾಗೂ ಡಿಸಿಎಂ ಮೇಲೆ ಹೆಚ್ಚಿನ ಒತ್ತಡ ಮೂಡಿಬರಲಿದೆ. ಅತ್ಯಂತ ಪ್ರಮುಖವಾಗಿ ಜಾತಿವಾರು ಹಾಗೂ ಪ್ರಾದೇಶಿಕವಾರು ಸಚಿವ ಸ್ಥಾನ ಹಂಚಿಕೆ ಮಾಡುವಂತೆ ಶಾಸಕರು ಒತ್ತಡ ಹೇರುತ್ತಿದ್ದಾರೆ.

ರಾಜ್ಯದಲ್ಲಿ ಈ ಸಾರಿ ಕೇವಲ ಒಬ್ಬ ಡಿಸಿಎಂಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ ಎಂಬ ಮಾಹಿತಿ ಲಭಿಸುತ್ತಿದ್ದಂತೆ ಹಲವು ಹಿರಿಯ ಶಾಸಕರಿಗೆ ತೀವ್ರ ನಿರಾಸೆ ಉಂಟಾಗಿದೆ. ಇಂದಿನ ಶಾಸಕಾಂಗ ಸಭೆಯಲ್ಲಿ ಅವರು ಇದೇ ವಿಚಾರವಾಗಿ ಕಾಂಗ್ರೆಸ್ ನಾಯಕರ ಮೇಲೆ ಒತ್ತಡ ಹೇರುವ ಸಾಧ್ಯತೆ ಇದೆ. ರಾಷ್ಟ್ರೀಯ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲ, ವೀಕ್ಷಕರಾದ ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್ ಉಪಸ್ಥಿತರಿದ್ದಾರೆ. ಕಾಂಗ್ರೆಸ್ ಪಕ್ಷದ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಿದ್ದಾರೆ. ಶಾಸಕಾಂಗ ಸಭೆಯ ಪ್ರಾರಂಭದಲ್ಲಿ ಮಾತನಾಡುತ್ತಿರುವ ಉಸ್ತುವಾರಿ ಸುರ್ಜೆವಾಲಾ ಹಲವು ವಿಚಾರ ಪ್ರಸ್ತಾಪಿಸಿದ್ದಾರೆ.

ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯಲ್ಲಿ ಶಾಸಕರಿಂದ ಸಹಿ ಸಂಗ್ರಹಿಸಿದ್ದು ಒಟ್ಟಾರೆ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಿ ಸರ್ಕಾರ ರಚಿಸುವ ಬಹುಮತವಿದ್ದು ಅವಕಾಶ ನೀಡುವಂತೆ ಕೋರಿದ್ದಾರೆ.

ಚುನಾವಣೆಯಲ್ಲಿ ಕಾಂಗ್ರೆಸ್​ಗೆ 135 ಸ್ಥಾನಗಳು ಬರುವ ಮೂಲಕ ರಾಜ್ಯದ ಜನ ಭರ್ಜರಿ ಬಹುಮತವನ್ನು ನೀಡಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಕಾರಣರಾಗಿದ್ದರು.

ಇದನ್ನೂ ಓದಿ: ಬೆಂಗಳೂರಿಗೆ ಆಗಮಿಸಿದ ಸಿದ್ದರಾಮಯ್ಯ: ಕಾಂಗ್ರೆಸ್​​ ಪಕ್ಷದ ಶಾಸಕಾಂಗ ಸಭೆಗೆ ಕ್ಷಣಗಣನೆ!

Last Updated : May 18, 2023, 9:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.