ಬೆಂಗಳೂರು: ಫೆ.14 ಸೋಮವಾರದಿಂದ ಫೆ.25ರ ಶುಕ್ರವಾರದ ವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಫೆ.14ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಶಾಸಕಾಂಗ ಸಭೆ ಕರೆದಿದ್ದಾರೆ. ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಪೂರ್ವಭಾವಿ ಸಭೆಯು ಫೆ.14ರ ಸೋಮವಾರ ಸಂಜೆ 6 ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯಲಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕ ಯು.ಟಿ. ಖಾದರ್, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಸಲೀಂ ಅಹಮದ್ ಮತ್ತು ಆರ್.ಧ್ರುವನಾರಾಯಣ್ ಉಪಸ್ಥಿತರಿರಲಿದ್ದಾರೆ.
ಶಾಸಕಾಂಗ ಸಭೆಯಲ್ಲಿ ಅಧಿವೇಶನದಲ್ಲಿ ಚರ್ಚಿಸಬೇಕಾದ ವಿಷಯಗಳ ಬಗ್ಗೆ ಸಮಾಲೋಚನೆ ನಡೆಯಲಿದೆ.
ಇದನ್ನೂ ಓದಿ: ಬಡವರ ಸಂತಸ ದೇಶದ ಶಕ್ತಿ ಹೆಚ್ಚಿಸಿದೆ: ಬಜೆಟ್ ಮೇಲಿನ ಚರ್ಚೆಗೆ ಸಂಸತ್ನಲ್ಲಿ ಪ್ರಧಾನಿ ಮೋದಿ ಉತ್ತರ..