ETV Bharat / state

ಶುಭ ಮುಹೂರ್ತ, ಶುಭ ಘಳಿಗೆ ನೋಡಿ ಕಾಂಗ್ರೆಸ್ ಪಟ್ಟಿ ಬಿಡುಗಡೆ: ಡಿಕೆಶಿ - ಶುಭ ಮುಹೂರ್ತ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷ ಮಾಧ್ಯಮಗಳನ್ನು ಬಿಟ್ಟು ರಾಜಕೀಯ ಮಾಡುವುದಿಲ್ಲ ಎಂದು ಹೇಳಿದರು.

congress-list-will-be-released-soon-dk-shivakumar
ಶುಭ ಮುಹೂರ್ತ, ಶುಭ ಘಳಿಗೆ ನೋಡಿ ಕಾಂಗ್ರೆಸ್ ಪಟ್ಟಿ ಬಿಡುಗಡೆ ಮಾಡಲಾಗುವುದು: ಡಿಕೆಶಿ
author img

By

Published : Apr 11, 2023, 9:10 PM IST

ಶುಭ ಮುಹೂರ್ತ, ಶುಭ ಘಳಿಗೆ ನೋಡಿ ಕಾಂಗ್ರೆಸ್ ಪಟ್ಟಿ ಬಿಡುಗಡೆ ಮಾಡಲಾಗುವುದು: ಡಿಕೆಶಿ

ಬೆಂಗಳೂರು: ಬಿಜೆಪಿ ಪಕ್ಷ ಇದುವರೆಗೂ ಒಬ್ಬ ಅಭ್ಯರ್ಥಿಯ ಹೆಸರು ಕೂಡ ಬಿಡುಗಡೆ ಮಾಡಿಲ್ಲ. ಕೆ.ಎಸ್.ಈಶ್ವರಪ್ಪ ಅವರು ತಮ್ಮ ಹೈಕಮಾಂಡ್ ನಾಯಕರಿಗೆ ಲವ್ ಲೆಟರ್ ಬರೆದಿದ್ದಾರೆ. ಅವರನ್ನು ಕೇಳದೆ ಕೇವಲ ನಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಮಾತ್ರ ಕೇಳುತ್ತಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದರು.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿ, ಕಾಂಗ್ರೆಸ್ ಈಗಾಗಲೇ 167 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಿದೆ. ಉಳಿದ ಕ್ಷೇತ್ರಗಳ ಪಟ್ಟಿ ಕೂಡ ಸದ್ಯದಲ್ಲೇ ಬಿಡುಗಡೆ ಆಗಲಿದೆ. ಏನೇ ನಿರ್ಧಾರ ತೆಗೆದುಕೊಂಡರೂ ಮಾಧ್ಯಮಗಳಿಗೆ ಮಾಹಿತಿ ನೀಡುತ್ತೇವೆ. ಕಾಂಗ್ರೆಸ್ ಪಕ್ಷ ಮಾಧ್ಯಮಗಳನ್ನು ಬಿಟ್ಟು ರಾಜಕೀಯ ಮಾಡುವುದಿಲ್ಲ. ಪಟ್ಟಿ ಯಾವಾಗ ಬಿಡುಗಡೆ ಆಗಬಹುದು ಎಂದು ಕೇಳಿದಾಗ, 'ಶುಭ ಮುಹೂರ್ತ, ಶುಭ ಘಳಿಗೆ ನೋಡಿ ಪಟ್ಟಿ ಬಿಡುಗಡೆ ಮಾಡಲಾಗುವುದು' ಎಂದು ತಿಳಿಸಿದರು.

ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ಪ್ರಶ್ನೆಗೆ ಪ್ರತಿಕ್ರಿಯಿಸಿ, ಲಕ್ಷ್ಮಣ ಸವದಿ ಹಿರಿಯ ನಾಯಕರು. ಅವರ ಕಾಂಗ್ರೆಸ್ ಸೇರ್ಪಡೆ ವಿಚಾರ ಪ್ರಸ್ತಾಪವಾಗಿಲ್ಲ. ಸೋಮಣ್ಣ ಕೂಡ ಪಕ್ಷ ಸೇರ್ಪಡೆ ಆಗುತ್ತಾರೆ ಎಂಬ ವಿಚಾರ ಸುದ್ದಿಯಾಯಿತು. ಆದರೆ, ಅವರು ಯಾವತ್ತೂ ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆ ಮಾಡಿಲ್ಲ. ಶಿವಮೊಗ್ಗ, ಹಾವೇರಿ ಇತರೆ ಭಾಗಗಳ ಕೆಲ ನಾಯಕರು ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ್ದರು. ಅವರು ಬಂದಾಗ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು. ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಖಾಲಿ ಇಲ್ಲದಿದ್ದರೆ ಅವರನ್ನು ಪಕ್ಷಕ್ಕೆ ಕರೆದುಕೊಳ್ಳುವುದು ಸೂಕ್ತವಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ಬಿಜೆಪಿಯಲ್ಲಿ ಪುತ್ರ ವ್ಯಾಮೋಹ ಪರ್ವ: ಮಗನಿಗಾಗಿ ಕ್ಷೇತ್ರ ತ್ಯಾಗ, ಬಿಎಸ್‌ವೈ ಹಾದಿ ಹಿಡಿದ ಈಶ್ವರಪ್ಪ

ಈಶ್ವರಪ್ಪ ರಾಜಕೀಯ ನಿವೃತ್ತಿ ಕುರಿತು ಮಾತನಾಡಿ, ಅವರಿಗೆ ಒಳ್ಳೆಯದಾಗಲಿ. ಅವರು ಚುನಾವಣೆಯಲ್ಲಿ ನನ್ನ ವಿರುದ್ಧ ಸ್ಪರ್ಧೆ ಮಾಡಿದ್ದರು. ಅವರ ಪಕ್ಷ ಹಾಗೂ ಅವರ ತೀರ್ಮಾನ, ಅವರಿಗೆ ಒಳ್ಳೆಯದಾಗಲಿ ಎಂದು ತಿಳಿಸಿದರು. ಕುಮಾರಸ್ವಾಮಿ ಅವರು ಭವಾನಿ ರೇವಣ್ಣ ಹಾಸನದಲ್ಲಿ ಸ್ಪರ್ಧಿಸಿದರೆ ಸೋಲುತ್ತಾರೆ ಎಂದು ಹೇಳಿರುವ ಬಗ್ಗೆ ಕೇಳಿದಾಗ, ಅವರ ಪಕ್ಷ, ಕುಟುಂಬದ ವಿಚಾರದ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ. ಅವರ ರಾಜಕೀಯ ಅವರು ಮಾಡಲಿ, ನಾವು ನಮ್ಮ ಕೆಲಸ ಮಾಡುತ್ತೇವೆ. ಅವರ ಆಂತರಿಕ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಅದರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಅವರ ಜತೆ ನಾವು ಕೆಲಸ ಮಾಡಿ ಈಗ ಅವರು ಸರಿ ಇಲ್ಲ ಎಂದು ದೂರುವುದು ಸರಿಯಲ್ಲ ಎಂದು ತಿಳಿಸಿದರು.

ನಿಮ್ಮ ನಾಮಪತ್ರ ಸಲ್ಲಿಕೆ ಯಾವಾಗ ಎಂದು ಕೇಳಿದಾಗ, ಇಂದು ಆ ಬಗ್ಗೆ ತೀರ್ಮಾನ ಮಾಡುತ್ತೇನೆ. ತೀರ್ಮಾನವಾದ ಬಳಿಕ ತಿಳಿಸುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಈಶ್ವರಪ್ಪ ನಿರ್ಣಯ ಮಾದರಿ, ಶೆಟ್ಟರ್ ಇದೊಂದು ಸಲ ಅಂದಿದ್ದಾರೆ, ಸವದಿಗೆ ದುಡುಕಬೇಡಿ ಎಂದಿದ್ದೇನೆ- ಸಿಎಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.