ಬೆಂಗಳೂರು: ಜೆ.ಜೆ.ನಗರದಲ್ಲಿ ನಡೆದ ಯುವಕನ ಹತ್ಯೆ ಪ್ರಕರಣದ ಕುರಿತು ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಸಿ.ಟಿ.ರವಿ ವಿರುದ್ಧ ಕಾಂಗ್ರೆಸ್ ನಿಯೋಗ ಪೊಲೀಸ್ ಠಾಣಾ ಮೆಟ್ಟಿಲೇರಿದೆ. ಜೆ.ಜೆ. ನಗರ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್ 3ರ ರಾತ್ರಿ ಕೊಲೆಯಾದ ಚಂದ್ರು ಎಂಬ ಯುವಕನ ಹತ್ಯೆ ಕುರಿತು ಉದ್ದೇಶಪೂರ್ವಕವಾಗಿ ಕೋಮು ಸೌಹಾರ್ದತೆ ಕದಡುವ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಮಲ್ಲೇಶ್ವರಂ ಠಾಣೆಗೆ ದೂರು ನೀಡಿದ ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದ ನಿಯೋಗ, ಗೃಹ ಸಚಿವ, ಸಿಟಿ ರವಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಒತ್ತಾಯಿಸಿದೆ.
![ಜೆಜೆ ನಗರ ವ್ಯಾಪ್ತಿಯಲ್ಲಿ ಯುವಕನ ಹತ್ಯೆ ಪ್ರಕರಣ](https://etvbharatimages.akamaized.net/etvbharat/prod-images/kn-bng-02-congress-complaint-kac10035_06042022221849_0604f_1649263729_132.jpg)
ಇದನ್ನೂ ಓದಿ: ಅಲ್‌ಖೈದಾ ಉಗ್ರ ಸಂಘಟನೆ ಮುಖ್ಯಸ್ಥ ಯಾರು ಅನ್ನೋದೇ ನನಗೆ ಗೊತ್ತಿಲ್ಲ: ಮುಸ್ಕಾನ್ ತಂದೆ ಮಹಮದ್ ಹುಸೇನ್ ಖಾನ್