ETV Bharat / state

ಕಾಂಗ್ರೆಸ್ ಮಹತ್ವಾಕಾಂಕ್ಷೆ ಜನಧ್ವನಿ ಜಾಥಾಗೆ ಚಾಲನೆ: ರಾಜ್ಯ ನಾಯಕರ ಉಪಸ್ಥಿತಿ

ಕಾಂಗ್ರೆಸ್ ಶಾಸಕರು ಇಲ್ಲದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಜನಧ್ವನಿ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದಕ್ಕೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಕಾಂಗ್ರೆಸ್ ಮಹತ್ವಾಕಾಂಕ್ಷೆಯ ಜನಧ್ವನಿ ಜಾಥಾಗೆ ಚಾಲನೆ
Congress make Janadhwani Awareness Jatha at Bangalore
author img

By

Published : Mar 3, 2021, 10:58 AM IST

ಬೆಂಗಳೂರು: ಕಾಂಗ್ರೆಸ್ ಶಾಸಕರು ಇಲ್ಲದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಜನಧ್ವನಿ ಜಾಗೃತಿ ಜಾಥಾಗೆ ಚಾಲನೆ ದೊರಕಿದೆ.

ಜನಧ್ವನಿ ಜಾಥಾಗೆ ಚಾಲನೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​

ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಜಾಥಾದಲ್ಲಿ ನೂರಾರು ಕಾರ್ಯಕರ್ತರು ಹಾಜರಿದ್ದು, ಬೆಂಗಳೂರಿನಿಂದ ದೇವನಹಳ್ಳಿ ಹೋರಾಟ ವಾಹನಕ್ಕೆ ಬೀಳ್ಕೊಡುಗೆ ನೀಡಿದರು.

ಪ್ರತಿಪಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ,ರಾಮಲಿಂಗರೆಡ್ಡಿ ಹೆಚ್​.ಕೆ. ಪಾಟೀಲ್, ಎಸ್.ಆರ್. ಪಾಟೀಲ್, ಮಲ್ಲಿಕಾರ್ಜುನ ಖರ್ಗೆ, ಸಲೀಂ ಅಹಮದ್, ಈಶ್ವರ್ ಖಂಡ್ರೆ ಸೇರಿದಂತೆ ಹಲವು ನಾಯಕರು ಇವರೊಂದಿಗೆ ತೆರಳಿದ್ದಾರೆ. ಇಂದು ಮಧ್ಯಾಹ್ನ ದೇವನಹಳ್ಳಿಯಲ್ಲಿ ಹಾಗೂ ಸಂಜೆ ಚಿಕ್ಕಬಳ್ಳಾಪುರದಲ್ಲಿ ಜನಜಾಗೃತಿ ಜಾಥಾ ನಡೆಯಲಿದೆ.

ಓದಿ: ಸಿಡಿ ಪ್ರಕರಣವನ್ನು ಸಿಬಿಐ ತನಿಖೆ ಮಾಡಿ: ಬಾಲಚಂದ್ರ ಜಾರಕಿಹೊಳಿ ಒತ್ತಾಯ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿ ಹಾಗೂ ಬೆಲೆ ಏರಿಕೆ ನಿಲುವು ಖಂಡಿಸಿ ಕಾಂಗ್ರೆಸ್ ಕೈಗೊಂಡಿರುವ ಬೃಹತ್ ಪ್ರತಿಭಟನಾ ಮೆರವಣಿಗೆ ಜಾಥಾ ಇದಾಗಿದ್ದು, ಜನಧ್ವನಿ ಹೆಸರಿನಲ್ಲಿ ನಡೆಯಲಿದೆ. ಜಾಥಾದ ಮೊದಲ ಕಾರ್ಯಕ್ರಮ ಇದಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈ ಜಾಥಾ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.