ಬೆಂಗಳೂರು: ಉಪಚುನಾವಣೆ ಹಿನ್ನೆಲೆ ಇಂದು ನಡೆಯಬೇಕಿದ್ದ ಕೆಪಿಸಿಸಿ ಸಭೆಯನ್ನು ದಿಢೀರ್ ಮುಂದೂಡಲಾಗಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ಇಂದು ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಿಗದಿಯಾಗಿತ್ತು. ಆದರೆ, ಇಂದು ವೇಣುಗೋಪಾಲ್ ಅವರು ಬೆಂಗಳೂರಿಗೆ ಆಗಮಿಸದ ಕಾರಣ ಸಭೆಯನ್ನು ನಾಳೆಗೆ ಮುಂದೂಡಲಾಗಿದೆ.
ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಕುರಿತು ಇಂದು ಅಂತಿಮ ತೀರ್ಮಾನ ಕೈಗೊಳ್ಳಲು ವೇಣುಗೋಪಾಲ್ ಅವರು ಮುಂಬೈನಲ್ಲೇ ಬೀಡುಬಿಟ್ಟಿದ್ದಾರೆ. ಅವರು ನಾಳೆ ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹಾಗಾಗಿ ಇಂದು ನಡೆಯಬೇಕಿದ್ದ ಸಭೆ ನಾಳೆಗೆ ಮುಂದೂಡಿಕೆಯಾಗಿದೆ ಎಂದು ತಿಳಿದುಬಂದಿದೆ.