ETV Bharat / state

ವಿನೂತನ ರೀತಿಯಲ್ಲಿ ಕಾಂಗ್ರೆಸ್ ಸಭೆ ಉದ್ಘಾಟನೆ

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಸಂಸದರು, ಹಾಲಿ ಮತ್ತು ಮಾಜಿ ಶಾಸಕರು, ಡಿಸಿಸಿ ಅಧ್ಯಕ್ಷರು ಹಾಗು ಮುಂಚೂಣಿ ಘಟಕಗಳ ಪದಾಧಿಕಾರಿಗಳ ಸಭೆಯನ್ನು ಬೆಂಗಳೂರು ಅರಮನೆ ಮೈದಾನದಲ್ಲಿ 50ಕ್ಕೂ ಹೆಚ್ಚು ಮಂದಿ ನಾಯಕರಿಂದ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.

Congress meeting
ಕಾಂಗ್ರೆಸ್ ಸಭೆ ಉದ್ಘಾಟನೆ
author img

By

Published : Dec 6, 2020, 6:52 PM IST

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಹಿರಿಯ ಮುಖಂಡರು, ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಸಂಸದರು, ಹಾಲಿ ಮತ್ತು ಮಾಜಿ ಶಾಸಕರು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕಗಳ ಪದಾಧಿಕಾರಿಗಳ ಸಭೆಯನ್ನು ಕರ್ನಾಟಕದಲ್ಲಿ ಪಕ್ಷದ ಉಸ್ತುವಾರಿ ವಹಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಉದ್ಘಾಟಿಸಿದರು.

ಕಾಂಗ್ರೆಸ್ ಸಭೆ ಉದ್ಘಾಟನೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್, ಸಿಡಬ್ಲೂಸಿ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಕೇಂದ್ರದ ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಜತೆಗೂಡಿದರು.

ವಿನೂತನ ಪ್ರಯತ್ನದ ಮೂಲಕ ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸಲುವಾಗಿ ಕಾಂಗ್ರೆಸ್ ಈ ಪ್ರಯತ್ನ ಮಾಡಿದೆ. ಪಕ್ಷದ ರಾಜ್ಯಾಧ್ಯಕ್ಷ ಡಿಕೆಶಿ ಕಾರ್ಯಕ್ರಮ ರೂಪಿಸಿದ್ದು, 50ಕ್ಕೂ ಹೆಚ್ಚು ಮಂದಿ ನಾಯಕರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಓದಿ: ಕ್ಲಿನಿಕಲ್ ಪ್ರಯೋಗಗಳು ಮತ್ತು ಪರಿಹಾರಗಳ ಬಗ್ಗೆ ನಿಮಗೆಷ್ಟು ಗೊತ್ತು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.