ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಕಮ್ಮನಹಳ್ಳಿಯಲ್ಲಿರುವ ಜಿಯಾನ್ ಆಸ್ಪತ್ರೆಯಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ.
ಲಿಂಗರಾಜಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾನ್ ಕುಮಾರ್ ಎಂಬಾತ ತಮ್ಮ ಮಗಳಿಗೆ ಅನಾರೋಗ್ಯದ ಕಾರಣ ಈ ಆಸ್ಪತ್ರೆಗೆ ಕರೆತಂದಿದ್ದನು. ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ಚಿಕಿತ್ಸೆ ವೆಚ್ಚದಲ್ಲಿ ರಿಯಾಯಿತಿ ನೀಡುವಂತೆ ಆತ ಕೇಳಿಕೊಂಡಿದ್ದಾನೆ. ಆಸ್ಪತ್ರೆ ನಿಯಮಗಳಂತೆ ಬಿಲ್ ನೀಡಿರುವುದಾಗಿ ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ.
ಇದಕ್ಕೆ ಅಕ್ರೋಶ ವ್ಯಕ್ತಪಡಿಸಿ ಆತ ಅಕೌಂಟೆಂಟ್ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾನೆ. ಈ ಸಂಬಂಧ ಆರೋಪಿಯ ವಿರುದ್ಧ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.