ETV Bharat / state

'ಹಿಜಾಬ್ ವಿವಾದವನ್ನು ವಿದ್ಯಾರ್ಥಿನಿಯರ ಮೂಲಕ ಆಡಿಸುತ್ತಿರುವ ಕೀಲಿಕೈ ಬೇರೆಯೇ ಇದೆ' - ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪ

ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಹಿಜಾಬ್ ವಿವಾದದ ವಿಚಾರಣೆಯನ್ನು ಫೆ. 28 ರ ವರೆಗೆ ಮುಂದೂಡುವಂತೆ ವಿದ್ಯಾರ್ಥಿಗಳ ಪರ ವಕೀಲರು ಈಗ ಹೈಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

Karnataka BJP chief  Nalin kumar Kateel
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
author img

By

Published : Feb 15, 2022, 6:45 AM IST

ಬೆಂಗಳೂರು: ಹಿಜಾಬ್ ವಿವಾದವನ್ನು ವಿದ್ಯಾರ್ಥಿನಿಯರ ಮೂಲಕ ಆಡಿಸುತ್ತಿರುವ ಕೀಲಿಕೈ ಬೇರೆಯೇ ಇದೆ. ಕಾಂಗ್ರೆಸ್ ಈ ವ್ಯೂಹದ ಮೆದುಳು, ಎಸ್‌ಡಿಪಿಐ ಅದರ ದೇಹ ಎಂದು ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.

  • ಹಿಜಾಬ್ ವಿವಾದವನ್ನು ವಿದ್ಯಾರ್ಥಿನಿಯರ ಮೂಲಕ ಆಡಿಸುತ್ತಿರುವ ಕೀಲಿಕೈ ಬೇರೆಯೇ ಇದೆ.

    ಕಾಂಗ್ರೆಸ್ ಈ ವ್ಯೂಹದ ಮೆದುಳು. ಎಸ್‌ಡಿಪಿಐ ಅದರ ದೇಹ.

    ಇದು ಕೇವಲ ವಿವಾದವಲ್ಲ, ಮೂಲಭೂತವಾದವನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ವ್ಯವಸ್ಥಿತ ಸಂಚು.#YesToUniform_NoToHijab

    — Nalinkumar Kateel (@nalinkateel) February 14, 2022 " class="align-text-top noRightClick twitterSection" data=" ">

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಇದು ಕೇವಲ ವಿವಾದವಲ್ಲ, ಮೂಲಭೂತವಾದವನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ವ್ಯವಸ್ಥಿತ ಸಂಚು. ಹಿಜಾಬ್ ವಿವಾದ ಸಂಬಂಧ ವಿದ್ಯಾರ್ಥಿನಿಯರ ಪರ ವಾದ ಮಾಡುತ್ತಿರುವ ವಕೀಲರ ಪೈಕಿ‌ ಒಬ್ಬರು ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ನ್ಯಾಯವಾದಿಗಳ ಸಮಿತಿಯ ಅಧ್ಯಕ್ಷರು. ಈಗ ಈ ವಿವಾದ ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ಬಗ್ಗೆ ಮಾತನಾಡುತ್ತಿದೆ ಎಂದರೆ ಇದೊಂದು ಕಾಂಗ್ರೆಸ್ ಪ್ರೇರಿತ 'ಟೂಲ್ ಕಿಟ್' ಭಾಗವಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ವಿಚಾರಣೆ ಮುಂದೂಡುವಂತೆ ಮಧ್ಯಂತರ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಲ್ಲಿ ನಾಲ್ವರು ಅಪ್ರಾಪ್ತರು. ಈ ಅಪ್ರಾಪ್ತ ವಿದ್ಯಾರ್ಥಿನಿಯರು ಹಿಜಾಬ್ ವಿವಾದವನ್ನು ಪಂಚರಾಜ್ಯಗಳ ಚುನಾವಣೆಗೆ ಥಳುಕು ಹಾಕುತ್ತಿದ್ದಾರೆ ಎಂದರೆ ಅರ್ಥವೇನು?. ಈ ವಿದ್ಯಾರ್ಥಿನಿಯರು ಬೇರೆಯವರ ತಾಳಕ್ಕೆ ಕುಣಿಯುವ ಗೊಂಬೆಗಳು ಎಂದು ಅರ್ಥವಲ್ಲವೇ? ಎಂದಿದ್ದಾರೆ.

ಇದನ್ನೂ ಓದಿ: ಬುಧವಾರದಿಂದ ಪಿಯುಸಿ, ಡಿಗ್ರಿ ಕಾಲೇಜು ಆರಂಭಿಸಲು ಸರ್ಕಾರದ ನಿರ್ಧಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.