ಬೆಂಗಳೂರು: ಜಯನಗರ ಶಾಸಕಿ ಸೌಮ್ಯಾ ರೆಡ್ಡಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
-
ಕೋವಿಡ್ ಪಾಸಿಟಿವ್ ಆಗಿರುವ ಕಾರಣ, ಮುಂಜಾಗೃತೆಯ ದೃಷ್ಟಿಯಿಂದ ನಾನು ಸಮೀಪದ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿ.#COVID19
— Sowmya | ಸೌಮ್ಯ | http://sowmyareddy.in (@Sowmyareddyr) March 27, 2021 " class="align-text-top noRightClick twitterSection" data="
">ಕೋವಿಡ್ ಪಾಸಿಟಿವ್ ಆಗಿರುವ ಕಾರಣ, ಮುಂಜಾಗೃತೆಯ ದೃಷ್ಟಿಯಿಂದ ನಾನು ಸಮೀಪದ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿ.#COVID19
— Sowmya | ಸೌಮ್ಯ | http://sowmyareddy.in (@Sowmyareddyr) March 27, 2021ಕೋವಿಡ್ ಪಾಸಿಟಿವ್ ಆಗಿರುವ ಕಾರಣ, ಮುಂಜಾಗೃತೆಯ ದೃಷ್ಟಿಯಿಂದ ನಾನು ಸಮೀಪದ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿ.#COVID19
— Sowmya | ಸೌಮ್ಯ | http://sowmyareddy.in (@Sowmyareddyr) March 27, 2021
ಟ್ವೀಟ್ ಮೂಲಕ ಅವರೇ ಈ ವಿಚಾರ ತಿಳಿಸಿದ್ದು, ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ನಾನು ಸಮೀಪದ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೋವಿಡ್ ರೋಗ ಲಕ್ಷಣಗಳು ಹೆಚ್ಚಿಲ್ಲದಿದ್ದರೂ ನನಗೆ ಈ ಹಿಂದೆ ಅಸ್ತಮಾ ಇದ್ದ ಕಾರಣ, ಪಾಲಕರ ಸೂಚನೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಸಾರ್ವಜನಿಕರಿಗೆ ಕ್ಷೇತ್ರದಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ನನ್ನ ಕಚೇರಿಗೆ ಕರೆ ಮಾಡಬೇಕಾಗಿ ಕೋರುತ್ತೇನೆ ಎಂದು ಹೇಳಿದ್ದಾರೆ.
ಕೋವಿಡ್ 2ನೇ ಅಲೆಯ ತೀವ್ರತೆ ಹೆಚ್ಚುತ್ತಿದ್ದು, ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮಕೈಗೊಂಡು ಮಾಸ್ಕ್ ಧರಿಸಿ. ಎಲ್ಲರಿಗೂ ಲಸಿಕೆ ನೀಡುವ ವಿಧಾನವನ್ನು ತ್ವರಿತಗೊಳಿಸಬೇಕೆಂದು ನಾನು ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದಿದ್ದಾರೆ.
ಎರಡು ದಿನಗಳ ಹಿಂದೆಯಷ್ಟೇ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಶಾಸಕಿಯರು ಹಮ್ಮಿಕೊಂಡಿದ್ದ ಮಾಧ್ಯಮಗೋಷ್ಟಿಯಲ್ಲಿ ಸೌಮ್ಯಾ ರೆಡ್ಡಿ ಭಾಗವಹಿಸಿದ್ದರು. ಈ ಸಂದರ್ಭ ಮಾಸ್ಕ ಧರಿಸದೆ ಸಾಕಷ್ಟು ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದ್ದರು. ಕೆಲ ಖಾಸಗಿ ವಾಹಿನಿಗಳಿಗೂ ಸಂದರ್ಶನ ನೀಡಿದ್ದರು. ಇದೀಗ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆ ಅವರನ್ನು ಸಂಪರ್ಕಿಸಿದ ಎಲ್ಲರಲ್ಲಿಯೂ ಆತಂಕ ಶುರುವಾಗಿದೆ.