ETV Bharat / state

ಭ್ರಷ್ಟಾಚಾರ ವಿರೋಧಿಸಿ ಮಾ. 9 ರಂದು ಕರ್ನಾಟಕ ಬಂದ್: ಡಿಕೆಶಿ

ಭ್ರಷ್ಟಾಚಾರ ವಿರೋಧಿಸಿ ಮಾರ್ಚ್​ 9ರಂದು ಕರ್ನಾಟಕ ಬಂದ್​ಗೆ ಕಾಂಗ್ರೆಸ್​ ಕರೆ - ಸಿಎಂ ಬೊಮ್ಮಾಯಿ ಅಧಿಕಾರದಿಂದ ವಜಾಗೊಳಿಸುವಂತೆ ಬೇಡಿಕೆ - ಬೆಳಗ್ಗೆ 9 ಗಂಟೆಯಿಂದ ಬೆಳಗ್ಗೆ 11 ಗಂಟೆವರೆಗೂ ಸಾಂಕೇತಿಕ ಬಂದ್.

congress-party-call-for-karnataka-bandh
ಭ್ರಷ್ಟ ಜನತಾ ಪಕ್ಷದ (ಬಿಜೆಪಿ) ಭ್ರಷ್ಟಾಚಾರ ವಿರೋಧಿಸಿ ಕರ್ನಾಟಕ ಬಂದ್: ಡಿಕೆಶಿ
author img

By

Published : Mar 5, 2023, 8:17 PM IST

Updated : Mar 5, 2023, 11:01 PM IST

ಭ್ರಷ್ಟಾಚಾರ ವಿರೋಧಿಸಿ ಮಾ. 9 ರಂದು ಕರ್ನಾಟಕ ಬಂದ್: ಡಿಕೆಶಿ

ಬೆಳಗಾವಿ/ಬೆಂಗಳೂರು: ಮಾರ್ಚ್​ 9 ರಂದು ಭ್ರಷ್ಟಾಚಾರ ವಿರೋಧಿಸಿ ಬಿಜೆಪಿ ಸರ್ಕಾರದ ವಿರುದ್ಧ ಕರ್ನಾಟಕ ಬಂದ್​​ಗೆ ಕರೆ ಕೊಟ್ಟಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಭ್ರಷ್ಟಾಚಾರದ ಕಿಂಗ್ ಆಗಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷ ಹೋರಾಟ ಕೈಗೊಂಡಿದೆ. ರಾಜ್ಯದಲ್ಲಿ ಬಿಜೆಪಿಯ ಭ್ರಷ್ಟಾಚಾರದ ದುರ್ವಾಸನೆ ವಾಕರಿಕೆ ತರಿಸಿದೆ. 40 ಪರ್ಸೆಂಟ್​ ಸರ್ಕಾರ ಎಲ್ಲ ವರ್ಗದ ಜನರ ಬದುಕು ನಾಶ ಮಾಡಿದೆ. ಭ್ರಷ್ಟಾಸುರ ಬೊಮ್ಮಾಯಿ ಸರ್ಕಾರವು ಭ್ರಷ್ಟಾಚಾರದಿಂದ, ಭ್ರಷ್ಟಾಚಾರಕ್ಕಾಗಿ, ಭ್ರಷ್ಟಾಚಾರಕ್ಕೋಸ್ಕರದ ಸರ್ಕಾರವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಸರ್ಕಾರದ ಸಾಧನೆಗಳೆಂದರೆ, ಪ್ರತಿಯೊಂದು ಗುತ್ತಿಗೆಯಲ್ಲೂ 40 ಪರ್ಸೆಂಟ್ ಕಮಿಷನ್, ಶಾಲಾ ಅನುದಾನದಲ್ಲಿ 40 ಪರ್ಸೆಂಟ್ ಕಮಿಷನ್, ಧಾರ್ಮಿಕ ಮಠಗಳ ಅನುದಾನದಲ್ಲಿ 30 ಪರ್ಸೆಂಟ್ ಕಮಿಷನ್, ಮೈಸೂರು ಸ್ಯಾಂಡಲ್ ಸೋಪ್ ಅಕ್ರಮದಲ್ಲಿ ಲಂಚ, ಸರ್ಕಾರಿ ಹುದ್ದೆಗಳ ವರ್ಗಾವಣೆ ಮತ್ತು ಪೋಸ್ಟಿಂಗ್​ಗೆ ಲಂಚ. ನೇಮಕಾತಿ ಅಕ್ರಮ, ಪಿಎಸ್ಐ, ಸಹಾಯಕ ಪ್ರಾಧ್ಯಾಪಕ, ಸಹಾಯಕ ಇಂಜಿನಿಯರ್, ಜೂನಿಯರ್ ಇಂಜಿನಿಯರ್, ಜಿಲ್ಲಾ ಸಹಕಾರಿ ಬ್ಯಾಂಕ್, ಪೌರಕಾರ್ಮಿಕ ಕೆಲಸ, ಕೆಎಂಎಫ್ ಹುದ್ದೆ, ಸಹಾಯಕ ರಿಜಿಸ್ಟ್ರಾರ್ ಹುದ್ದೆ ನೇಮಕಾತಿ ಅಕ್ರಮಗಳು. ಬಿಜೆಪಿ ಹಾಗೂ ಬೊಮ್ಮಾಯಿ ಅವರ ಭ್ರಷ್ಟಾಚಾರಕ್ಕೆ ಇತ್ತೀಚಿನ ಕೆಎಸ್​ಡಿಎಲ್ ಅಕ್ರಮ ಸಾಕ್ಷಿಯಾಗಿದೆ ಎಂದಿದ್ದಾರೆ.

ಬೆಳಗ್ಗೆ 9 ರಿಂದ 11 ರವರೆಗೆ ಸಾಂಕೇತಿಕ ಬಂದ್​: ಬಿಜೆಪಿ ಸರ್ಕಾರದ ಈ ಲೂಟಿಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಮಾರ್ಚ್ 9 ರಂದು ಭ್ರಷ್ಟಾಚಾರ ವಿರೋಧಿಸಿ ಕರ್ನಾಟಕ ಬಂದ್​ಗೆ ಕರೆ ನೀಡುತ್ತಿದೆ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಲು ಬೆಳಗ್ಗೆ 9 ಗಂಟೆಯಿಂದ ಬೆಳಗ್ಗೆ 11 ಗಂಟೆವರೆಗೂ ಸಾಂಕೇತಿಕ ಬಂದ್ ಮಾಡಲಾಗುವುದು. ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆ, ಸಾರಿಗೆ ಹಾಗೂ ಇತರ ಅಗತ್ಯ ಸೇವೆಗಳನ್ನು ಬಂದ್ ವ್ಯಾಪ್ತಿಯಿಂದ ಹೊರಗಿಡಲು ತೀರ್ಮಾನಿಸಲಾಗಿದೆ.

ಕಾಂಗ್ರೆಸ್ ಪಕ್ಷ ರಾಜ್ಯದ ಪ್ರತಿ ನಗರದಲ್ಲಿ ಬಿಜೆಪಿ ಹಾಗೂ ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಪ್ರತಿಭಟನೆ ನಡೆಸಲಿದೆ. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕನ್ನಡಿಗರು ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಲು ಪಣ ತೊಟ್ಟಿದ್ದಾರೆ. ನಮ್ಮ ಬೇಡಿಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು ಅಥವಾ ಅವರನ್ನು ವಜಾಗೊಳಿಸಬೇಕು ಎಂದಿದ್ದಾರೆ.

ಬಿಜೆಪಿ ವಿರುದ್ಧ ಸುರ್ಜೆವಾಲ​ ಆಕ್ರೋಶ: ಬಿಜೆಪಿ ತನ್ನ ಹೆಸರನ್ನು ಭಾರತೀಯ ಜನತಾ ಪಕ್ಷದಿಂದ, ಭ್ರಷ್ಟ ಜನತಾ ಪಕ್ಷ ಎಂದು ಮರುನಾಮಕರಣ ಮಾಡಿಕೊಳ್ಳಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅಭಿಪ್ರಾಯಪಟ್ಟಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಶನಿವಾರದಂದು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೊಮ್ಮಾಯಿ ಅವರ ಸರ್ಕಾರವನ್ನು ಭ್ರಷ್ಟಾಸುರ ಬೊಮ್ಮಾಯಿ ಸರ್ಕಾರ ಎಂದು ಕರೆಯಬೇಕು ಎಂದು ಹೇಳಿದ್ದರು.

ಇದನ್ನೂ ಓದಿ: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ಸಂತ್ರಸ್ತ ಚಾಲಕನಿಗೆ ರಿಕ್ಷಾ, 5 ಲಕ್ಷ ರೂ. ಹಸ್ತಾಂತರ

Last Updated : Mar 5, 2023, 11:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.