ಬೆಂಗಳೂರು: ಕಾಂಗ್ರೆಸ್ ಪಕ್ಷ ನನ್ನನ್ನು ಗುರುತಿಸಿ ನನಗೆ ಅವಕಾಶ ನೀಡಿದೆ ಎಂದು ಮಹಾಲಕ್ಷ್ಮಿಲೇಔಟ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಿವರಾಜು ಹೇಳಿದ್ದಾರೆ.
ಮಹಾಲಕ್ಷ್ಮಿಲೇಔಟ್ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನನ್ನನ್ನು ಗುರುತಿಸಿ ನನಗೆ ಅವಕಾಶ ನೀಡಿದ್ದು,ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸಗಳು ಆಗಿವೆ. ನಾನು ಕ್ಷೇತ್ರದಲ್ಲಿ ಸಾಕಷ್ಟು ಬಿಬಿಎಂಪಿ ಆಸ್ತಿಗಳನ್ನು ರಕ್ಷಣೆ ಮಾಡಿದ್ದೇನೆ. ಸಾವಿರಾರು ಜನ ಕಾರ್ಯಕರ್ತರು ನನ್ನೊಟ್ಟಿಗೆ ಬಂದು ನಾಮಪತ್ರ ಸಲ್ಲಿಸಿದ್ದಾರೆ ಅದು ನನಗೆ ಖುಷಿ ತಂದಿದೆ ಎಂದರು.