ETV Bharat / state

ಎಲ್ಲ ವರ್ಗದ ಜನರ ಸೇವೆಗಾಗಿ ಕಾಂಗ್ರೆಸ್​ ಪಕ್ಷವನ್ನು ಅಧಿಕಾರಕ್ಕೆ ತರಬೇಕು: ಡಿಕೆಶಿ

ನಗರ ಹೊರವಲಯದ ಕ್ಲಾರ್ಕ್ ಎಕ್ಸಾಟಿಕದಲ್ಲಿ ಇಂದು ಕಾಂಗ್ರೆಸ್ ಪಕ್ಷದ ಎರಡು ದಿನಗಳ "ರಾಜ್ಯ ಚಿಂತನ ಶಿಬಿರ" ಆರಂಭವಾಯಿತು.

congress partys campaign begins today
ಕಾಂಗ್ರೆಸ್ ಪಕ್ಷದ ಎರಡು ದಿನಗಳ ರಾಜ್ಯ ಚಿಂತನ ಶಿಬಿರ ಆರಂಭ
author img

By

Published : Jun 2, 2022, 5:15 PM IST

Updated : Jun 2, 2022, 6:41 PM IST

ಬೆಂಗಳೂರು: ನಗರ ಹೊರವಲಯದ ಕ್ಲಾರ್ಕ್ ಎಕ್ಸಾಟಿಕದಲ್ಲಿ ಇಂದು ಕಾಂಗ್ರೆಸ್ ಪಕ್ಷದ ಎರಡು ದಿನಗಳ "ರಾಜ್ಯ ಚಿಂತನ ಶಿಬಿರ" ಆರಂಭವಾಯಿತು. ನವ ಸಂಕಲ್ಪ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಡಿ.ಕೆ ಶಿವಕುಮಾರ್ ಮಾತನಾಡಿ, ಇದೊಂದು ಐತಿಹಾಸಿಕ ಕಾರ್ಯಕ್ರಮ. ನಾನು ಪಕ್ಷದ ಅಧ್ಯಕ್ಷನಾಗಿ ಜವಾಬ್ದಾರಿ ತೆಗೆದುಕೊಂಡಾಗ, 'ಜೊತೆಗೂಡುವುದು ಆರಂಭ, ಜೊತೆಗೂಡಿ ಯೋಚಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಯಶಸ್ಸು' ಎಂದು ಹೇಳಿದ್ದೆ.

ಡಿಕೆ ಶಿವಕುಮಾರ್

ಇದೀಗ ಎಐಸಿಸಿ ಕೊಟ್ಟಿರುವ ಸೂಚನೆ, ಮಾರ್ಗದರ್ಶನದ ಪ್ರಕಾರ ಈ ಸಭೆ ಮಾಡುತ್ತಿದ್ದೇವೆ. ಸೂಚನೆಯಂತೆ ಆರು ಸಮಿತಿಗಳನ್ನು ರಚಿಸಲಾಗಿದೆ. ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಯಾವ ದಿಕ್ಕಿನಲ್ಲಿ ಹೋಗಬೇಕು, ಯಾವ ರೀತಿ ಹೋರಾಟ ಮಾಡಬೇಕು ಎಂದು ಉದಯಪುರ ನವಸಂಕಲ್ಪ ಶಿಬಿರದಲ್ಲಿ ತೀರ್ಮಾನ ಮಾಡಲಾಗಿದೆ ಎಂದರು.

ಸಲಹೆ ನೀಡಿ: ಕಾರ್ಯಾಧ್ಯಕ್ಷರಿದ್ದರೂ ಸಮಿತಿಗಳಿಗೆ ಬೇರೆ ನಾಯಕರನ್ನು ಅಧ್ಯಕ್ಷರನ್ನಾಗಿ ಮಾಡಿದ್ದು, ಉದಯಪುರ ಸಭೆಯಲ್ಲಿ ಭಾಗವಹಿಸಿದ್ದವರಿಗೆ ಅವಕಾಶ ನೀಡಲಾಗಿದೆ. ಎಲ್ಲ ಸಮಿತಿಗಳು ನಿನ್ನೆ, ಮೊನ್ನೆ ಚರ್ಚೆ ಮಾಡಿ ಸಲಹೆಗಳ ಪಟ್ಟಿ ಮಾಡಿದ್ದು, ಇಂದು ಆ ಬಗ್ಗೆ ಚರ್ಚಿಸಲಾಗುವುದು. ಈ ಸಮಿತಿಗಳಲ್ಲಿ ಇಲ್ಲದ, ಸಲಹೆ ನೀಡಲು ಬಯಸುವವರು ಅದನ್ನು ಲಿಖಿತ ರೂಪದಲ್ಲಿ ನೀಡಬಹುದು. ಅಮೂಲ್ಯ ಸಲಹೆಗಳನ್ನು ಸೇರ್ಪಡೆ ಮಾಡಿಕೊಂಡು ಚರ್ಚಿಸಲಾಗುವುದು. ನಿಮ್ಮ ಸಲಹೆ ರಾಜ್ಯ ಹಾಗೂ ದೇಶದ ಭವಿಷ್ಯ, ಪಕ್ಷದ ಬಲವರ್ಧನೆ, 2023 ಹಾಗೂ 2024 ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಇರಲಿ.

ಉದಯಪುರ ಸಭೆ ನಿರ್ಣಯಗಳನ್ನು ನಿಮಗೆ ನೀಡಲಾಗುವುದು. ಎಐಸಿಸಿ ಸೂಚನೆ ಅನ್ವಯ ಪಕ್ಷದ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದಿಷ್ಟ ಜವಾಬ್ದಾರಿ ನೀಡಲಾಗಿದ್ದು, ನೀವು ತಿಂಗಳಲ್ಲಿ 15-20 ದಿನ ಪಕ್ಷಕ್ಕೆ ಸಮಯ ನೀಡಬೇಕು. ಪಂಚಾಯಿತಿಗಳಲ್ಲಿ ಸಭೆ ನಡೆಸಿ, ಅಲ್ಲಿನ ಸಮಸ್ಯೆ ಗುರುತಿಸಿ, ಬಗೆಹರಿಸಬೇಕು. ಪಕ್ಷ ಹಾಗೂ ಪಕ್ಷದ ಸಿದ್ಧಾಂತದ ಪರವಾಗಿರುವ ಸ್ಥಳೀಯ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಕಾರ್ಯಕ್ರಮ ರೂಪಿಸಬೇಕು ಎಂದು ಡಿ ಕೆ ಶಿವಕುಮಾರ ಸಭೆಯಲ್ಲಿ ಹೇಳಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು: ರಾಜ್ಯದಲ್ಲಿ 78 ಲಕ್ಷ ಸದಸ್ಯರನ್ನು ನೋಂದಣಿ ಮಾಡಲಾಗಿದ್ದು, ಅದರಲ್ಲಿ ಶೇ.42 ರಷ್ಟು ಮಂದಿ 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ಶೇ.42 ರಷ್ಟು ಮಂದಿ ಮಹಿಳೆಯರು. ಸದಸ್ಯತ್ವ ನೋಂದಣಿ ಮುಂದುವರಿಯಲಿದ್ದು, ಬೂತ್ ಮಟ್ಟದ ಸಮಿತಿ ಸೇರಿ ಎಲ್ಲ ಸಮಿತಿಗಳನ್ನು ರಚಿಸಲು ಕಾಲಮಿತಿ ನಿಗದಿ ಮಾಡಲಾಗಿದೆ. ಪ್ರತಿ ಜಿಲ್ಲೆಯಲ್ಲಿ ಆಗಸ್ಟ್ 9 ರಿಂದ ಆಗಸ್ಟ್ 15 ರವರೆಗೆ ಜಿಲ್ಲಾ ಮಟ್ಟದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲು ರಾಷ್ಟ್ರ ನಾಯಕರು ಸೂಚಿಸಿದ್ದಾರೆ.

ಯುವಕರು, ವಿದ್ಯಾರ್ಥಿಗಳು, ಎಲ್ಲಾ ವರ್ಗದವರನ್ನು ಸೇರಿಸಿಕೊಂಡು ಸರ್ಕಾರದ ವೈಫಲ್ಯಗಳ ವಿರುದ್ಧ ದೊಡ್ಡ ಹೋರಾಟ ಮಾಡಬೇಕಾಗಿದೆ. ನಿಮ್ಮ ಕ್ಷೇತ್ರ, ಜಿಲ್ಲೆ ಹಾಗೂ ರಾಜ್ಯಕ್ಕೆ ಪ್ರತ್ಯೇಕ ಪ್ರಣಾಳಿಕೆ ಮಾಡಬೇಕು. ಕರಾವಳಿ, ಮಲೆನಾಡು, ಬೆಂಗಳೂರು, ಕಲ್ಯಾಣ ಕರ್ನಾಟಕ ಸೇರಿದಂತೆ ಎಲ್ಲ ವಲಯಕ್ಕೆ ಪ್ರತ್ಯೇಕ ಕಾರ್ಯಕ್ರಮ ರೂಪಿಸಬೇಕು. ಎಲ್ಲಾ ವರ್ಗದ ಜನರ ಸೇವೆಗೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದರು.

ಶಿಬಿರದ ನಂತರ ಅಂತಿಮ ನಿರ್ಣಯಗಳನ್ನು ಪ್ರಕಟಿಸಿ, ಮಾಧ್ಯಮಗಳಿಗೆ ನೀಡಲಾಗುವುದು. ನಿಮ್ಮ ವೈಯಕ್ತಿಕ ಅಜೆಂಡಾ ಬಿಟ್ಟು ರಾಜ್ಯ ಹಾಗೂ ರಾಷ್ಟ್ರದ ಭವಿಷ್ಯದ ಬಗ್ಗೆ ಒಟ್ಟಾಗಿ ಚರ್ಚಿಸುವ ಸಭೆ ಇದಾಗಿದೆ. ಸ್ಪಷ್ಟ ಸೂಚನೆ, ಸಂದೇಶ ಕೊಡುವ ಸಭೆ ಇದು. ಕಾಂಗ್ರೆಸ್ ಪಕ್ಷವನ್ನು ಸಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ದೇಶದ ಅಂತ್ಯವಾದಾಗ ಈ ಪಕ್ಷ ಅಂತ್ಯವಾಗಲಿದೆ. ಇಂತಹ ಪಕ್ಷದ ಸದಸ್ಯರಾಗಿ ಪಕ್ಷ, ರಾಜ್ಯ ಹಾಗೂ ದೇಶ ಉಳಿಸಲು ನಾವೆಲ್ಲರೂ ಕೆಲಸ ಮಾಡಬೇಕಿದೆ ಎಂದರು.

ಇದನ್ನೂ ಓದಿ: ಯುಪಿಎಸ್​​ಸಿಯ 31 ನೇ ರ‍್ಯಾಂಕ್ ಹೋಲ್ಡರ್ ಅವಿನಾಶ್​​ಗೆ ಐಎಫ್​ಎಸ್ ಆಗುವಾಸೆ!

ಶಿಬಿರದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್, ಮಾಜಿ ಸಚಿವ ಆರ್.ವಿ ದೇಶಪಾಂಡೆ, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಧ್ರುವನಾರಾಯಣ್ ಸೇರಿ ಮುಖಂಡರು ಭಾಗವಹಿಸಿದ್ದರು.

Last Updated : Jun 2, 2022, 6:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.