ETV Bharat / state

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ಆಯ್ಕೆ: ಇಂದು ನಾಮಪತ್ರ ಸಲ್ಲಿಕೆ - ಸ್ಪೀಕರ್ ಸ್ಥಾನಕ್ಕೆ ಖಾದರ್ ನಾಮಪತ್ರ

ಕರ್ನಾಟಕ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ಆಯ್ಕೆಯಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಅವರು ನಾಮಪತ್ರ ಸಲ್ಲಿಸಲಿದ್ದಾರೆ.

UT Khader
ಯು.ಟಿ ಖಾದರ್
author img

By

Published : May 23, 2023, 10:07 AM IST

Updated : May 23, 2023, 10:49 AM IST

ಬೆಂಗಳೂರು: ವಿಧಾನಸಭೆ ಸಭಾಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷ ಮಾಜಿ ಸಚಿವ ಯು.ಟಿ.ಖಾದರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದೆ. ನಿನ್ನೆ (ಸೋಮವಾರ) ತಡ ರಾತ್ರಿ ಪಕ್ಷದ ಮುಖಂಡರು ಈ ತೀರ್ಮಾನ ಕೈಗೊಂಡಿದ್ದು, ಇಂದು ಸ್ಪೀಕರ್ ಸ್ಥಾನಕ್ಕೆ ಅವರು ನಾಮಪತ್ರ ಸಲ್ಲಿಸಲಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಪಕ್ಷಕ್ಕೆ ಇಬ್ಬರು ಪಕ್ಷೇತರರು ಸಹ ಬೆಂಬಲ ನೀಡಿದ್ದು ಭಾರಿ ಬಹುಮತ ಹೊಂದಿದೆ. ಈ ನಿಟ್ಟಿನಲ್ಲಿ ಪ್ರತಿಪಕ್ಷ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಅನುಮಾನ. ಹಾಗಾಗಿ, ಯು.ಟಿ.ಖಾದರ್ ಆಯ್ಕೆ ಖಚಿತ ಆಗಿದೆ. ಒಂದೊಮ್ಮೆ ಔಪಚಾರಿಕವಾಗಿ ಸ್ಪರ್ಧೆಗಾಗಿ ಬಿಜೆಪಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೂ ಸೋಲು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಯು.ಟಿ.ಖಾದರ್ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.

ಬೆಳಗ್ಗೆ 11 ಗಂಟೆಗೆ ಸಭಾಧ್ಯಕ್ಷ ಸ್ಥಾನಕ್ಕೆ ಯು.ಟಿ.ಖಾದರ್ ನಾಮಪತ್ರ ಸಲ್ಲಿಸಲಿದ್ದಾರೆ. ಮೇ 24 ರಂದು ವಿಧಾನಸಭಾಧ್ಯಕ್ಷರ ಆಯ್ಕೆ ನಡೆಯಲಿದೆ. ಮಂಗಳವಾರ ಮಧ್ಯಾಹ್ನ 12ರ ಒಳಗೆ ಸ್ಪೀಕರ್ ಚುನಾವಣೆಗೆ ಸ್ಪರ್ಧಿಸುವವರು ನಾಮಪತ್ರ ಸಲ್ಲಿಸಬೇಕಾಗುತ್ತದೆ ಎಂದು ವಿಧಾನಸಭೆ ಬುಲೆಟಿನ್ ಹೊರಡಿಸಿದೆ.

ಅತ್ಯಂತ ಹಿರಿಯ ಸದಸ್ಯರಾಗಿರುವ ಹಿನ್ನೆಲೆಯಲ್ಲಿ ಸದ್ಯ ಹಳಿಯಾಳ ಶಾಸಕ ಹಾಗೂ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿದೆ. ಇವರನ್ನೇ ಪೂರ್ಣಾವಧಿ ಸ್ಪೀಕರ್ ಆಗಿ ನೇಮಿಸುವ ಕಾಂಗ್ರೆಸ್ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಸಭಾಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ದೇಶಪಾಂಡೆ ಹಿಂದೇಟು ಹಾಕಿದ್ದು ಸಚಿವ ಸ್ಥಾನದತ್ತ ಕಣ್ಣು ನೆಟ್ಟಿದ್ದಾರೆ. ಅದೇ ರೀತಿ ಹೆಚ್.ಕೆ.ಪಾಟೀಲ್ ಹಾಗೂ ಬಿ.ಆರ್.ಪಾಟೀಲ್ ಅವರನ್ನು ಸಂಪರ್ಕಿಸಲಾಗಿತ್ತು. ಆದರೆ ಇವರ್ಯಾರು ಸ್ಪೀಕರ್ ಸ್ಥಾನದಲ್ಲಿ ಕೂರಲು ಒಪ್ಪದ ಹಿನ್ನೆಲೆಯಲ್ಲಿ ಅಂತಿಮವಾಗಿ ಯುವ ನಾಯಕ ಯು.ಟಿ.ಖಾದರ್ ಅವರಿಗೆ ಮಣೆ ಹಾಕಲಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ ಸಂಜೆ ಬೆಂಗಳೂರಿಗೆ ಆಗಮಿಸಿದ್ದು, ಸ್ಪೀಕರ್ ಆಯ್ಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಬಸವರಾಜ ರಾಯರೆಡ್ಡಿ, ಮಧುಗಿರಿಯ ಶಾಸಕ ಕೆ.ಎನ್.ರಾಜಣ್ಣ, ಮೊಳಕಾಲ್ಮೂರಿನ ಎನ್.ವೈ ಗೋಪಾಲಕೃಷ್ಣ ಅವರ ಮನವೊಲಿಸಲು ಪಕ್ಷದ ನಾಯಕತ್ವ ಯತ್ನಿಸಿ ವಿಫಲವಾಯಿತು.

ಮೂರು ದಿನಗಳ ವಿಧಾನಮಂಡಲದ ಅಧಿವೇಶನ ಬುಧವಾರ ಮುಕ್ತಾಯಗೊಂಡ ನಂತರ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ. ಹೆಚ್ಚಿನ ಹಿರಿಯ ಶಾಸಕರು ಕ್ಯಾಬಿನೆಟ್ ಸ್ಥಾನಕ್ಕಾಗಿ ಕಾಯುತ್ತಿದ್ದಾರೆ. ಕೊನೆಗೂ ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಒಬ್ಬರಾಗಿದ್ದ ಯು.ಟಿ.ಖಾದರ್ ಗೆ ಸ್ಪೀಕರ್ ಹುದ್ದೆಯನ್ನು ನೀಡಲಾಗಿದೆ.

ಆಡಳಿತ ಹಾಗೂ ಪ್ರತಿಪಕ್ಷದ ಶಾಸಕರ ನಡುವೆ ಉತ್ತಮ ಬಾಂಧವ್ಯ ಹೊಂದಿರುವ ಯು.ಟಿ.ಖಾದರ್ ಈ ಕಾರಣಕ್ಕಾಗಿಯೇ ಸರ್ವಸಮ್ಮತರಾಗಿ ಆಯ್ಕೆಯಾಗಿದ್ದಾರೆ ಎಂಬ ಮಾಹಿತಿ ಇದೆ. ಸದನವನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಅನುಕೂಲ ಆಗುವ ರೀತಿ ಇವರನ್ನು ಕಾಂಗ್ರೆಸ್ ಪಕ್ಷ ಆಯ್ಕೆ ಮಾಡಿದೆ ಎಂಬ ಮಾತು ಕೇಳಿ ಬರುತ್ತಿದೆ.

ಇದನ್ನೂ ಓದಿ: ವಿಧಾನಸಭೆಗೆ ಸ್ಪೀಕರ್ ಯಾರು? ನಾಳೆ ಕಾಂಗ್ರೆಸ್‌ ಶಾಸಕಾಂಗ ಸಭೆಯಲ್ಲಿ ತೀರ್ಮಾನ

Last Updated : May 23, 2023, 10:49 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.